Shimoga; ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ: ಕುಮಾರಸ್ವಾಮಿ
Team Udayavani, Sep 5, 2024, 10:44 AM IST
ಶಿವಮೊಗ್ಗ: ಕೋವಿಡ್ ಖರೀದಿ ವರದಿಯಲ್ಲಿ ಏನಿದೆ ಗೊತ್ತಿಲ್ಲ. ಕ್ಯಾಬಿನೆಟ್ ನಲ್ಲಿ ಈ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂಬ ಬಗ್ಗೆ ಮಾಧ್ಯಮದಲ್ಲಿ ನೋಡಿದ್ದೇನೆ. ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ. ಅದನ್ನು ಏಕೆ ಕ್ಯಾಬಿನೆಟ್ ಮುಂದೆ ತರದೆ ಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಆಯುಕ್ತ ದಿನೇಶ್ ಕುಮಾರ್ ಅಮಾನತು ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಮಾಧ್ಯಮದವರಿಗೆ ಎಲ್ಲಾ ಗೊತ್ತಿದೆ. ಮಾಧ್ಯಮದವರೇ ಎಲ್ಲಾ ಹೇಳುತ್ತಿದ್ದಾರೆ. ಈಗಾಗಲೇ ಹೈಕೋರ್ಟ್ ನಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದವಾಗಿದೆ. ಸಿದ್ದರಾಮಯ್ಯ ಅವರ ಪರ ವಕೀಲರು ವಾದ ಮಾಡಲು ಇನ್ನೂ ಸಮಯ ಕೇಳುತ್ತಿದ್ದಾರೆ ಎಂದರು.
ವಿಐಎಸ್ಎಲ್ ನಿರ್ವಹಣೆಗೆ 10-15 ಸಾವಿರ ಕೋಟಿ ಬೇಕು. ವಿಐಎಸ್ಎಲ್ ಹಾಗು ವೈಜಾಕ್ ಬಗ್ಗೆ ನಮಗೆ ಬದ್ಧತೆಯಿದೆ. ಆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಯುತ್ತಿದೆ. 10-15 ಸಾವಿರ ಕೋಟಿ ಬೇಕಾಗಿರುವುದರಿಂದ ಸಮಯ ಹಿಡಿಯುತ್ತದೆ ಎಂದರು.
ಕನ್ನಡ ಚಿತ್ರರಂಗದಲ್ಲಿ ಮೀಟೂ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಈ ಬಗ್ಗೆ ನನಗೆ ಗೊತ್ತಿಲ್ಲ ನಾನು ಮಾತನಾಡಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.