ಮಲೆನಾಡಿನಲ್ಲಿ ಮತ್ತೆ ಅರಳಿದ ಕಮಲ
Team Udayavani, Nov 8, 2018, 6:05 AM IST
ಶಿವಮೊಗ್ಗ: ಉಪ ಚುನಾವಣೆಯಲ್ಲೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಮಲ ಅರಳಿದ್ದು, ಕಾಂಗ್ರೆಸ್- ಜೆಡಿಎಸ್ ಮೈತ್ರಿಗೆ ಹಿನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ವಿರುದ್ಧ 52,148 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸಿ ತವರು ಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜಕೀಯ ಹೊಡೆತ ಕೊಡಬೇಕೆಂಬ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಪ್ರಯತ್ನ ಕೊನೆಗೂ ಫಲಿಸಲಿಲ್ಲ. ಮಲೆನಾಡಿನ ಮತದಾರರು ಮತ್ತೂಮ್ಮೆ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ.
ಇಲ್ಲಿನ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ 2002 ಮತಗಟ್ಟೆಗಳ ಮತ ಎಣಿಕೆಯು 18 ಸುತ್ತುಗಳಲ್ಲಿ ನಡೆಯಿತು. ಮತ ಎಣಿಕೆಯ ಆರಂಭದಿಂದಲೂ 11ನೇ ಸುತ್ತಿನವರೆಗೂ ಕನಿಷ್ಠ ಅಂತರದ ಮುನ್ನಡೆ ಕಾಯ್ದುಕೊಂಡ ರಾಘವೇಂದ್ರ, ನಂತರದಲ್ಲಿ 40 ಸಾವಿರ ಮತಗಳ ಅಂತರಕ್ಕೆ ಜಿಗಿದರು. ಪ್ರತಿ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡ ರಾಘವೇಂದ್ರ ಅಂತಿಮವಾಗಿ 5,43,306 ಮತಗಳನ್ನು ಪಡೆದರೆ, ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ 4,91,158 ಮತಗಳನ್ನು ಪಡೆದು ಸೋಲುಂಡಿದ್ದಾರೆ.
ಕುಸಿದ ಮತಗಳ ಅಂತರ: 2009ರ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ವಿರುದ್ಧ 52,893 ಮತಗಳಿಂದ ಜಯಗಳಿಸಿದ್ದ ರಾಘವೇಂದ್ರ ಅವರು ಈ ಉಪಚುನಾವಣೆಯಲ್ಲಿ ಮಧು ಬಂಗಾರಪ್ಪ ಅವರ ವಿರುದ್ಧ ಬಹುತೇಕ ಅದೇ ಪ್ರಮಾಣದ ಅಂದರೆ 52,148 ಮತಗಳಿಂದ ಗೆಲುವು ಸಾಧಿ ಸಿದ್ದಾರೆ. 2014ರ ಚುನಾವಣೆಯಲ್ಲಿ ಯಡಿಯೂರಪ್ಪ ಅವರು 3.62 ಲಕ್ಷ ಮತಗಳ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದು, ಈ ಅಂತರ ಈಗ 52 ಸಾವಿರಕ್ಕೆ ಕುಸಿದಿದೆ.
ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ 25,573 ಮತಗಳ ಲೀಡ್ ಬಿಜೆಪಿಗೆ ಸಿಕ್ಕಿದ್ದರೆ ಯಡಿಯೂರಪ್ಪ ಅವರ ತವರು ಕ್ಷೇತ್ರ ಶಿಕಾರಿಪುರದಲ್ಲಿ 18,783 ಮತಗಳ ಮುನ್ನಡೆ ದೊರಕಿದೆ. ಬೈಂದೂರಿನಲ್ಲಿ ಬಿಜೆಪಿಗೆ 14,470 ಮತಗಳ ಲೀಡ್ ಸಿಕ್ಕಿದ್ದರೆ, ಚುನಾವಣೆಯ ಹೊಣೆ ಹೊತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರು ತಮ್ಮ ಸಾಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ 8737 ಮತಗಳ ಮುನ್ನಡೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭದ್ರಾವತಿಯಲ್ಲಿ ಶಾಸಕ ಬಿ.ಕೆ.ಸಂಗಮೇಶ್, ಮಾಜಿ ಶಾಸಕ ಅಪ್ಪಾಜಿ ಅವರು ಜೆಡಿಎಸ್‌ಗೆ 10,965 ಮತಗಳ ಲೀಡ್ ನೀಡುವ ಮೂಲಕ ತಮ್ಮ ಸಾಮರ್ಥ್ಯವನ್ನು ತೋರಿದ್ದಾರೆ. ಉಳಿದಂತೆ ತೀರ್ಥಹಳ್ಳಿ (7214), ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ (7282) ಮತದಾರರು ಬಿಜೆಪಿ ಬೆಂಬಲಿಸಿದ್ದಾರೆ. ಬೆಂಬಲ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.