![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 5, 2020, 6:40 PM IST
ಶಿವಮೊಗ್ಗ: ಎಂಪಿಎಂ ಅರಣ್ಯ ಭೂಮಿ ವಾಪಸ್ ಪಡೆಯಲು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ: ಎಂಪಿಎಂ ಕಾರ್ಖಾನೆಗೆ ನೀಡಿದ್ದ 60 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು ಸರ್ಕಾರ ಈ ಕೂಡಲೇ ವಾಪಸ್ ಪಡೆಯಬೇಕು ಎಂದು ಪ್ರಗತಿ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಗೆ ಪಶ್ಚಿಮ ಘಟ್ಟದಲ್ಲಿ ದಟ್ಟವಾಗಿ ಹಬ್ಬಿಕೊಂಡಿರುವ ಸುಮಾರು 75 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು 40 ವರ್ಷಗಳ ಅವಧಿಗೆ ಲೀಸ್‌ಗೆ ನೀಡಲಾಗಿತ್ತು. ಕೆಲವು ವರ್ಷಗಳ ನಂತರ 15 ಸಾವಿರ ಹೆಕ್ಟೇರ್ ಪ್ರದೇಶವನ್ನು ಹಿಂಪಡೆದು 60 ಸಾವಿರ ಹೆಕ್ಟೇರ್ ಪ್ರದೇಶವನ್ನು ಲೀಸ್‌ನಲ್ಲಿ ಮುಂದುವರಿಸಲಾಗಿತ್ತು. ಅದು ಈಗ 2020ರ ಆಗಸ್ಟ್ ವೇಳೆಗೆ ಅಂತ್ಯವಾಗಲಿದೆ. ಹಾಗಾಗಿ ಸರ್ಕಾರ ಅದನ್ನು ವಾಪಸ್ ಪಡೆಯಬೇಕು ಎಂದು ಮನವಿದಾರರು ಒತ್ತಾಯಿಸಿದ್ದಾರೆ. ಈಗಾಗಲೇ ಮೈಸೂರು ಕಾಗದ ಕಾರ್ಖಾನೆ ಸ್ಥಗಿತಗೊಂಡಿದೆ.
ಕಾರ್ಖಾನೆ ಮತ್ತೆ ಮುಂದುವರಿಯುವ ಲಕ್ಷಣಗಳು ಇಲ್ಲ. ಸರ್ಕಾರ ಆ ಬಗ್ಗೆ ಈಗಾಗಲೇ ತಟಸ್ಥವಾಗಿದೆ. ಹೀಗಿರುವಾಗ ಈ ಅರಣ್ಯ ಭೂಮಿಯ ಅವಶ್ಯಕತೆ ಕಾರ್ಖಾನೆಗೆ ಇರುವುದಿಲ್ಲ. ಅಲ್ಲದೇ ಅದನ್ನು ಖಾಸಗಿಯವರಿಗೆ ಮಾರಾಟ ಮಾಡಲು ಎಂಪಿಎಂ ಆಡಳಿತ ಮಂಡಳಿಗೆ ಅವಕಾಶ ಇಲ್ಲ. ಹಾಗಾಗಿ ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಈ ಭೂಮಿಯನ್ನು ನೀಡುವಂತಿಲ್ಲ ಎಂದು ಮನವಿದಾರರು ಹೇಳಿದರು.
ಮನವಿ ಸಲ್ಲಿಕೆ ಸಂದರ್ಭದಲ್ಲಿ ಒಕ್ಕೂಟದ ಪ್ರಮುಖರಾದ ಕೆ.ಟಿ. ಗಂಗಾಧರ್, ಕೆ.ಪಿ. ಶ್ರೀಪಾಲ್, ಎಂ. ಗುರುಮೂರ್ತಿ, ರಾಜೇಂದ್ರ ಕಂಬಳಗೆರೆ, ನಾಗೇಶನ್, ಮಾಲತೇಶ್ ಬೊಮ್ಮನಕಟ್ಟೆ, ಆದರ್ಶ ಹುಂಚದಕಟ್ಟೆ, ಪ್ರಸನ್ನ ಹಿತ್ತಲಗದ್ದೆ ಮತ್ತಿತರರಿದ್ದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.