ಕೊರೊನಾ; ಜಾಗ್ರತೆಗೆ ಸೂಚನೆ
ವೈರಸ್ ಪತ್ತೆಯಾದ ವಿದೇಶಗಳಿಗೆ ಪ್ರವಾಸ ಕೈಗೊಳ್ಳದಿರಲು ಸೂಚನೆ
Team Udayavani, Mar 5, 2020, 1:41 PM IST
ಶಿವಮೊಗ್ಗ: ವಿಶ್ವದ ಹಲವೆಡೆ ಕಾಣಿಸಿಕೊಂಡಿರುವ ಕೊರೊನಾ ವೈರಸ್ ಶಿವಮೊಗ್ಗ ಜಿಲ್ಲೆಯಲ್ಲಿ ಹರಡದಂತೆ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊರೊನಾ ವೈರಸ್ ಹರಡದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ವೈರಸ್ ನ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಶಂಕಿತ ವೈರಸ್ ಪೀಡಿತರ ಮೇಲೆ ನಿಗಾ ಇರಿಸಲಾಗಿದೆ. ಕೊರೊನಾ ವೈರಸ್ ಪೀಡಿತ ದೇಶಗಳಿಗೆ ಪ್ರವಾಸ ಕೈಗೊಂಡು ಜಿಲ್ಲೆಗೆ ಆಗಮಿಸಿರುವವರನ್ನು ಸೂಕ್ಷ್ಮ ನಿಗಾದಲ್ಲಿರಿಸಲಾಗಿದೆ. ಅವರಲ್ಲಿ ಕೊರೊನಾ ವೈರಸ್ ಪತ್ತೆಯಾಗಿರದಿದ್ದರೂ, ನಾಲ್ಕು ವಾರಗಳ ಕಾಲ ನಿಗಾದಲ್ಲಿರಿಸಲಾಗುವುದು. ಕೊರೊನಾ ವೈರಸ್ ಪತ್ತೆಯಾಗಿರುವ ದೇಶಗಳಿಗೆ ಸದ್ಯಕ್ಕೆ ಪ್ರವಾಸ ಕೈಗೊಳ್ಳದಂತೆ ನಾಗರಿಕರಿಗೆ ಸಲಹೆ ನೀಡಲಾಗಿದೆ. ವಿದೇಶದಿಂದ ಆಗಮಿಸಿದ ವ್ಯಕ್ತಿಗಳಲ್ಲಿ ಶೀತ, ನೆಗಡಿ, ಕೆಮ್ಮು, ಜ್ವರ ಇತ್ಯಾದಿ ರೋಗ ಲಕ್ಷಣಗಳು ಕಂಡು ಬಂದರೆ ಸ್ವಯಂ ಚಿಕಿತ್ಸೆ ನಡೆಸದೆ ಆಸ್ಪತ್ರೆಗೆ ಬಂದು ದಾಖಲಾಗಬೇಕು ಎಂದು ಅವರು ಹೇಳಿದರು.
ಮುಂಜಾಗರೂಕತಾ ಕ್ರಮ: ಕೊರೊನಾ ವೈರಸ್ ಪೀಡಿತರ ತಪಾಸಣೆಗಾಗಿ ಜಿಲ್ಲಾಸ್ಪತ್ರೆಯಲ್ಲಿ 6 ಹಾಸಿಗೆಯ ಪ್ರತ್ಯೇಕ
ಘಟಕವನ್ನು ಆರಂಭಿಸಲಾಗಿದೆ. ಸಾಕಷ್ಟು ಪ್ರಮಾಣದಲ್ಲಿ ಔಷಧಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಆರೋಗ್ಯ
ಸಚಿವಾಲಯದ ಮಾರ್ಗಸೂಚಿ ಪ್ರಕಾರ ಕೊರೊನಾ ವೈರಸ್ ತಡೆಗೆ ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ದಿನ ಸಂಜೆ 6 ಗಂಟೆಯ ಒಳಗಾಗಿ ಜಿಲ್ಲಾ
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಕೊರೊನಾ ವೈರಸ್ ಕುರಿತಾಗಿ ವರದಿ ಸಲ್ಲಿಸಬೇಕು. ಸಾರ್ವಜನಿಕರಿಗೆ ಮಾಹಿತಿ ಒದಗಿಸಲು 24ಹಿ7 ಕಂಟ್ರೋಲ್ ರೂಂ ಆರಂಭಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಅಂಗನವಾಡಿಗಳಲ್ಲಿ ಮಕ್ಕಳು ಕೈಗಳನ್ನು ಸರಿಯಾಗಿ ತೊಳೆದು ಸ್ವಚ್ಛವಾಗಿರುವಂತೆ ಸೂಚನೆ ನೀಡಬೇಕು. ಎಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿಗೆ ಮಾಸ್ಕ್ ಒದಗಿಸಬೇಕು. ಅಂಗಡಿಗಳಲ್ಲಿ ಮಾಸ್ಕ್ ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಆತಂಕ ಪಡುವ ಅಗತ್ಯವಿಲ್ಲ: ಕೊರೊನಾ ವೈರಸ್ ಹರಡದಂತೆ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕುರಿತು ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕೊರೊನಾ ವೈರಸ್ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ವದಂತಿಗಳನ್ನು ಹರಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾ ಧಿಕಾರಿಗಳು ಎಚ್ಚರಿಕೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು, ಡಿಎಚ್‌ಒ ಡಾ| ರಾಜೇಶ ಸುರಗಿಹಳ್ಳಿ, ಶಿವಮೊಗ್ಗ ಮೆಡಿಕಲ್ ಕಾಲೇಜು ನಿರ್ದೇಶಕ ಡಾ| ಲೇಪಾಕ್ಷಿ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.