ಕೃಷಿ ಚಟುವಟಿಕೆಗಿಲ್ಲ ನಿರ್ಬಂಧ: ಪಾಟೀಲ್‌

ಅನಾನಸ್‌ ಬೆಳೆಗಾರರ ಸಮಸ್ಯೆ ನಿವಾರಣೆಗೆ ಯತ್ನಕೃಷಿ ಪೂರಕ ಮಳಿಗೆ ತೆರೆಯಲು ಅನುಮತಿ

Team Udayavani, Apr 11, 2020, 4:35 PM IST

11-April-27

ಶಿವಮೊಗ್ಗ: ಸಚಿವ ಬಿ.ಸಿ.ಪಾಟೀಲ ಜನಪ್ರತಿನಿಧಿಗಳು, ಅಧಿಕಾರಿಗಳು, ರೈತ ಪ್ರತಿನಿಧಿಗಳ ಸಭೆ ನಡೆಸಿದರು

ಶಿವಮೊಗ್ಗ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅನಾನಸ್‌ ಬೆಳೆಯನ್ನು ಉತ್ತರ ಭಾರತದ ಮಾರುಕಟ್ಟೆಗೆ ಕಳುಹಿಸಲು ಸಾಧ್ಯವಾಗದೇ ಸಂಕಷ್ಟ ಎದುರಿಸುತ್ತಿರುವ ಜಿಲ್ಲೆಯ ಅನಾನಸ್‌ ಬೆಳೆಗಾರರ ಸಮಸ್ಯೆ ಬಗೆಹರಿಸಲು ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ರೈತ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು, ಜಿಲ್ಲೆಯಲ್ಲಿ ಪ್ರಸ್ತುತ 50 ಸಾವಿರ ಟನ್‌ ಅನಾನಸ್‌ ಕಟಾವಿಗೆ ಬಂದಿದ್ದು, ದೆಹಲಿ ಮತ್ತು ಕೊಲ್ಕತ್ತಾ ಇದರ ಪ್ರಮುಖ ಮಾರುಕಟ್ಟೆಗಳಾಗಿವೆ. ಆದರೆ, ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಅಲ್ಲಿನ ಜ್ಯೂಸ್‌ ಫ್ಯಾಕ್ಟರಿಗಳು ಚ್ಚಿರುವುದರಿಂದ ಸಮಸ್ಯೆ ಎದುರಾಗಿದೆ. ಈ ಕುರಿತು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಹ ಚರ್ಚಿಸಲಾಗಿದೆ ಎಂದು ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಸಚಿವರು, ಜಿಲ್ಲೆಯ ಅನಾನಸ್‌ ಬೆಳೆಗಾರರ ಸಮಸ್ಯೆ ಬಗ್ಗೆ ಮತ್ತೂಮ್ಮೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಉತ್ತರ ಭಾರತದ ಜ್ಯೂಸ್‌ ಫ್ಯಾಕ್ಟರಿಗಳನ್ನು ತೆರೆಯಲು ಮನವಿ ಮಾಡುವುದು ಸೇರಿದಂತೆ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು. ಅದೇ ರೀತಿ, ಶುಂಠಿ ಕ್ಯೂರಿಂಗ್‌ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೃಷಿ ಉತ್ಪನ್ನಗಳ ಸಾಗಾಟ ಸೇರಿದಂತೆ ಕೃಷಿ ಚಟುವಟಿಕೆಗಳ ಮೇಲೆ ಯಾವುದೇ ನಿರ್ಬಂಧ ವಿಧಿಸುವಂತಿಲ್ಲ. ಈ ಕುರಿತು ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದು, ಕೃಷಿ ಚಟುವಟಿಕೆಗಳಿಗೆ ಚೆಕ್‌ಪೋಸ್‌ rಗಳಲ್ಲಿ ಯಾವುದೇ ನಿರ್ಬಂಧ ವಿಧಿಸಬಾರದು. ಇದೇ ರೀತಿ ಪಂಪ್‌ಸೆಟ್‌ಗಳು, ಪೈಪ್‌ಗ್ಳು ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಅಂಗಡಿ- ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಬೇಕು.ಕೃಷಿ ಚಟುವಟಿಕೆ ವಾಹನಗಳಿಗೆ ಪೆಟ್ರೋಲ್‌, ಇಂಧನ
ಪೂರೈಸಬೇಕು. ಎಪಿಎಂಸಿ ಮಾರುಕಟ್ಟೆಗಳನ್ನು ತೆರೆಯುವಂತೆ ನಿರ್ದೇಶನ ನೀಡಲಾಗಿದೆ. ಆದರೆ, ಎಲ್ಲಾ ಕಡೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಕೃಷಿ ಚಟುವಟಿಕೆ ಆಧಾರಿತ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಆದರೆ, ಸಾಮಗ್ರಿಗಳನ್ನು ರೈತರು ನೇರವಾಗಿ ಖರೀದಿ ಮಾಡಲು ಅವಕಾಶವಿಲ್ಲ. ವ್ಯಾಪಾರಿಗಳು ನೇರವಾಗಿ ರೈತರ ಮನೆ ಬಾಗಿಲಿಗೇ ತಲುಪಿಸಲು ಅನುಮತಿ ನೀಡಲಾಗಿದೆ. ಬೋರ್‌ವೆಲ್‌ಗ‌ಳನ್ನು ಕೊರೆಯಲು ಯಾವುದೇ ನಿರ್ಬಂಧವಿರುವುದಿಲ್ಲ. ಆದರೆ ಎಂದಿನಂತೆ ಗ್ರಾಮೀಣ ಭಾಗದಲ್ಲಿ ಸಂಬಂಧಪಟ್ಟ ಪಿಡಿಒಗಳ ಅನುಮತಿಯೊಂದಿಗೆ ಬೋರ್‌ವೆಲ್‌ ಕೊರೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಸ್ಪಷ್ಟನೆ ನೀಡಿದರು.

ರೈತ ಮುಖಂಡರಾದ ಕೆ.ಟಿ.ಗಂಗಾಧರ್‌ ಅವರು ಮಾತನಾಡಿ, ಮಲೆನಾಡಿನಲ್ಲಿ ಹಣ್ಣು ಎಂದರೆ ಅನಾನಸ್‌ ಒಂದೇ. ಅದರಲ್ಲೂ ನಿರುದ್ಯೋಗಿಗಳನ್ನು ಆಕರ್ಷಿಸಿರುವ ದೊಡ್ಡ ಉದ್ಯಮವಾಗಿದೆ. ಈ ಉದ್ಯಮವನ್ನು ಕಾಪಾಡೋದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಸರ್ಕಾರ ಅನಾನಸ್‌ ಕಟಾವಿನ ನಂತರ ಸರಬರಾಜು ಮಾಡಿ, ಮಾರುಕಟ್ಟೆಗೆ ತಲುಪಿಸಬೇಕು ಎಂದರು.

ಶಾಸಕ ಅರಗ ಜ್ಞಾನೇಂದ್ರ ಮಾತನಾಡಿ, ಕೃಷಿ ಚಟುವಟಿಕೆಗೆ ಸಂಬಂಧಿಸಿದ ಅಂಗಡಿಗಳನ್ನು ತೆರೆಯಲು ಪೊಲೀಸರು ಅವಕಾಶ ನೀಡುತ್ತಿಲ್ಲ. ಅಂಗಡಿಯವರಿಗೆ
ಹೊಡೆದು ಬಂದ್‌ ಮಾಡಿಸುತ್ತಿದ್ದಾರೆ ಎಂದು ದೂರಿದರು. ಜಿಲ್ಲಾಧಿಕಾರಿ ಮಾತನಾಡಿ, ಕೃಷಿ ಚಟುವಟಿಕೆ ಆಧಾರಿತ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಸಾಮಗ್ರಿಗಳನ್ನು ರೈತರು ನೇರವಾಗಿ ಖರೀದಿ ಮಾಡಲು ಅವಕಾಶವಿಲ್ಲ. ವ್ಯಾಪಾರಿಗಳು ನೇರವಾಗಿ ರೈತರ ಮನೆ ಬಾಗಿಲಿಗೆ ತಲುಪಿಸಲು ಅನುಮತಿ ನೀಡಲಾಗಿದೆ. ಅದಕ್ಕಾಗಿ ವಾಹನಗಳ ಪಾಸ್‌ಗಳನ್ನು ನೀಡಲಾಗಿದೆ ಎಂದರು.

ಕೃಷಿ ಸಚಿವರು ಮಾತನಾಡಿ, ಕೃಷಿ ಪರಿಕರಗಳನ್ನು ನೇರವಾಗಿ ರೈತರ ಮನೆ ಬಾಗಿಲಿಗೆ ತಲುಪಿಸಲು ಕಷ್ಟವಾಗುತ್ತದೆ. ಎಲ್ಲಾ ರೈತರು ಒಟ್ಟಿಗೆ ಖರೀದಿಸಲು
ಹೋಗುವುದಿಲ್ಲ. ಪಂಪ್‌ಸೆಟ್‌ಗಳು, ಪೈಪ್‌ಗ್ಳು ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಅಂಗಡಿ- ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಿದರೆ ಸಾಕು. ರೈತರು ತಮಗೆ ಅವಶ್ಯಕ ವಸ್ತುಗಳನ್ನು ಖರೀದಿಸುತ್ತಾರೆ. ಆದರೆ, ಎಲ್ಲಾ ಕಡೆ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಮುಂಗಾರು ಬಿತ್ತನೆಗೆ ಈಗಲೇ ಅಗತ್ಯ ರಸಗೊಬ್ಬರ, ಬಿತ್ತನೆ ಬೀಜಗಳ ದಾಸ್ತಾನು ಆರಂಭಿಸುವಂತೆ ಸಚಿವರು ಈ ಸಂದರ್ಭದಲ್ಲಿ ಸೂಚನೆ ನೀಡಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಅರಗ ಜ್ಞಾನೇಂದ್ರ, ಅಶೋಕ ನಾಯ್ಕ, ಆಯನೂರು ಮಂಜುನಾಥ, ಹರತಾಳು ಹಾಲಪ್ಪ, ಪ್ರಸನ್ನ ಕುಮಾರ್‌, ಜಿಪಂ ಅಧ್ಯಕ್ಷ ಜ್ಯೋತಿ ಎಸ್‌ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್‌ ಫ್ರ್ಯಾಂಕ್

Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್‌ ಫ್ರ್ಯಾಂಕ್

Surya-jaiShankar

US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ

Kaup: ಸಿಡಿಲಿಗೆ ತುಂಡಾಗಿ ಬಿದ್ದ ತೆಂಗಿನ ಮರ

Kaup: ಸಿಡಿಲಿಗೆ ತುಂಡಾಗಿ ಬಿದ್ದ ತೆಂಗಿನ ಮರ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

Belthangady: ಹಲವೆಡೆ ಕಾಡಾನೆ ಸಂಚಾರ

Belthangady: ಹಲವೆಡೆ ಕಾಡಾನೆ ಸಂಚಾರ

Udupi: ಮಹಾಕುಂಭಮೇಳ: ಪಲಿಮಾರು ಶ್ರೀಪಾದ್ವಯರು

Udupi: ಮಹಾಕುಂಭಮೇಳ: ಪಲಿಮಾರು ಶ್ರೀಪಾದ್ವಯರು

Udupi: ಚೂರ್ಣೋತ್ಸವ; ಜೀವನದ ಅತ್ಯಂತ ಆನಂದದ ಕ್ಷಣ: ಪುಂಡರೀಕ ಗೋಸ್ವಾಮಿ

Udupi: ಚೂರ್ಣೋತ್ಸವ; ಜೀವನದ ಅತ್ಯಂತ ಆನಂದದ ಕ್ಷಣ: ಪುಂಡರೀಕ ಗೋಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bike

ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ;ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

7-ks-eshwarappa

State Govt ಗೋ ಹಂತಕರಿಗೆ ಬೆಂಬಲ ನೀಡುತ್ತಿದೆ, ಹಿಂದೂಗಳನ್ನು ನಿರ್ಲಕ್ಷಿಸುತ್ತಿದೆ:ಈಶ್ವರಪ್ಪ

Sagara-Beluru

Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ

Monkey Disease: ಈ ವರ್ಷದ ಮೊದಲ ಪ್ರಕರಣ ಪತ್ತೆ; ಇಬ್ಬರಿಗೆ ಪಾಸಿಟಿವ್

KFD: ಈ ವರ್ಷದ ಮೊದಲ ಪ್ರಕರಣ ಪತ್ತೆ; ಇಬ್ಬರಿಗೆ ಪಾಸಿಟಿವ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್‌ ಫ್ರ್ಯಾಂಕ್

Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್‌ ಫ್ರ್ಯಾಂಕ್

Surya-jaiShankar

US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ

Kaup: ಸಿಡಿಲಿಗೆ ತುಂಡಾಗಿ ಬಿದ್ದ ತೆಂಗಿನ ಮರ

Kaup: ಸಿಡಿಲಿಗೆ ತುಂಡಾಗಿ ಬಿದ್ದ ತೆಂಗಿನ ಮರ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

Belthangady: ಹಲವೆಡೆ ಕಾಡಾನೆ ಸಂಚಾರ

Belthangady: ಹಲವೆಡೆ ಕಾಡಾನೆ ಸಂಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.