ಅನಾನಸ್ ವಿಲೇವಾರಿ; ಜಿಲ್ಲಾಧಿಕಾರಿ ವಿಡಿಯೋ ಸಂವಾದ
Team Udayavani, Apr 24, 2020, 1:58 PM IST
ಶಿವಮೊಗ್ಗ: ಅನಾನಸ್ ವಿಲೇವಾರಿ ಕುರಿತಂತೆ ಜಿಲ್ಲಾ ಧಿಕಾರಿ ವಿಡಿಯೋ ಸಂವಾದ ನಡೆಸಿದರು.
ಶಿವಮೊಗ್ಗ: ಲಾಕ್‌ಡೌನ್‌ನಿಂದಾಗಿ ಸಮಸ್ಯೆಗೆ ಸಿಲುಕಿರುವ ಜಿಲ್ಲೆಯ ಅನಾನಸ್ ಬೆಳೆಗಾರರ ಹಿತ ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಗುರುವಾರ ಮೈಸೂರಿನ ಸಿಎಫ್ ಟಿಆರ್‌ಐ (ಸೆಂಟ್ರಲ್ ಫುಡ್ ಟೆಕ್ನಾಲಜಿ ರೀಸರ್ಚ್ ಇನ್ಸ್ಟಿಟ್ಯೂಟ್) ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಜಿಲ್ಲೆಯಲ್ಲಿ ಅಂದಾಜು 65 ಸಾವಿರ ಟನ್ ಅನಾನಸು ಬೆಳೆದಿದ್ದು, ಕಳೆದ 20ದಿನಗಳಲ್ಲಿ ವಿವಿಧ ಮೂಲಗಳನ್ನು ಬಳಸಿಕೊಂಡು ಅನಾನಸು ಮಾರುಕಟ್ಟೆಗೆ ವಿಲೇವಾರಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಬೆಳೆಯಲಾಗುವ ರಾಜಾ ತಳಿಯ ಅನಾನಸಿಗೆ ದೆಹಲಿಯ ಜ್ಯೂಸ್ ಕಂಪೆನಿಗಳು ಪ್ರಮುಖ ಮಾರುಕಟ್ಟೆಯಾಗಿದ್ದು, ಲಾಕ್ ಡೌನ್‌ನಿಂದ ಸಾಗಾಟ ತೊಂದರೆಯಾಗಿದೆ. ಪ್ರಸ್ತುತ ದಿನನಿತ್ಯ 125ರಿಂದ 150 ಟನ್ ಮಾತ್ರ ಮಾರುಕಟ್ಟೆಗೆ ಸರಬರಾಜು ಮಾಡಲು ಸಾಧ್ಯವಾಗುತ್ತಿದೆ. ಪ್ರತಿನಿತ್ಯ 250ರಿಂದ 300ಟನ್ ಇಳುವರಿ ಬರುತ್ತಿದೆ ಎಂದು ಅವರು ಹೇಳಿದರು.
ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಸ್ವ-ಸಹಾಯ ಸಂಘಗಳನ್ನು ಬಳಸಿಕೊಂಡು ಮಾರುಕಟ್ಟೆ ಕಲ್ಪಿಸಲು, ವಿವಿಧ ಆಹಾರ ಸಂಸ್ಕರಣಾ ತಂತ್ರಗಳನ್ನು ಬಳಸಿಕೊಂಡು ಅನಾನಸು ಉತ್ಪನ್ನಗಳನ್ನು ದಾಸ್ತಾನು ಇರಿಸುವುದು ಸೇರಿದಂತೆ ಬೆಳೆಗಾರರಿಗೆ ಹೊಸ ಮಾರುಕಟ್ಟೆ ಅವಕಾಶಗಳ ಬಗ್ಗೆ ಸಿಎಫ್‌ಟಿಆರ್‌ಐ ತಜ್ಞರಿಂದ ಮಾರ್ಗದರ್ಶನ ಬಯಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಕೋಲ್ಡ್ ಸ್ಟೋರೇಜ್ ಬಳಸಿಕೊಂಡು ಅನಾನಸು ಗರಿಷ್ಟ ಒಂದು ವಾರಗಳ ಕಾಲ ಮಾತ್ರ ದಾಸ್ತಾನು ಇರಿಸಲು ಸಾಧ್ಯವಿದೆ. ಅದನ್ನು ಪಲ್ಫ್ ಆಗಿ ಪರಿವರ್ತಿಸಿದರೆ ಗರಿಷ್ಠ ಎರಡು ವರ್ಷಗಳ ಕಾಲ ಕಾಪಿಡಬಹುದಾಗಿದೆ. ಹುಬ್ಬಳ್ಳಿ ಮತ್ತು ಚಿತ್ತೂರುಗಳಲ್ಲಿ ಅಂತಹ ಸಂಸ್ಕರಣಾ ಉದ್ಯಮಗಳಿದ್ದು, ಅನಾನಸನ್ನು ಪಲ್ಫ್ ಆಗಿ ಪರಿವರ್ತಿಸಿದ ಬಳಿಕ ಹಾಪ್‌ಕಾಮ್ಸ್ ಮೂಲಕ ಮಾರುಕಟ್ಟೆ ವ್ಯವಸ್ಥೆ ಮಾಡಬಹುದಾಗಿದೆ ಎಂದು ಸಿಎಫ್‌ಟಿಆರ್‌ಐ ಅಧಿಕಾರಿಗಳು ಸಲಹೆ ನೀಡಿದರು. ಅತ್ಯಂತ ಕಡಿಮೆ ತಂತ್ರಜ್ಞಾನವನ್ನು ಬಳಸಿಕೊಂಡು ಕಡಿಮೆ ವೆಚ್ಚದಲ್ಲಿ ಅನಾನಸು ಸಂಸ್ಕರಣೆಯನ್ನು ಸ್ಥಳೀಯವಾಗಿ ಮಾಡಲು ಸಾಧ್ಯವಿದೆ. ಸ್ವ-ಸಹಾಯ ಗುಂಪುಗಳ ಸಹಯೋಗದಲ್ಲಿ ಅಂತಹ ಚಟುವಟಿಕೆ ನಡೆಸಲು, ರೈತರಿಗೆ, ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಸೂಕ್ತ ತರಬೇತಿ ನೀಡಲು ಸಂಸ್ಥೆ ಸಿದ್ಧವಿದೆ. ಲಾಕ್ ಡೌನ್ ಮುಗಿದ ಬಳಿಕ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬಹುದಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಸ್ಥಳೀಯವಾಗಿ ಮಾರುಕಟ್ಟೆಯನ್ನು ವಿಸ್ತರಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಸಿಎಫ್ ಟಿಆರ್‌ಐ ಎಲ್ಲಾ ತಾಂತ್ರಿಕ ನೆರವು ನೀಡಲು ಸಿದ್ಧವಿದೆ ಎಂದು ಸಂಸ್ಥೆಯ ನಿರ್ದೇಶಕ ಡಾ| ರಾಘವ ರಾವ್ ಹೇಳಿದರು. ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಯೋಗೀಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ;ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ
ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ
State Govt ಗೋ ಹಂತಕರಿಗೆ ಬೆಂಬಲ ನೀಡುತ್ತಿದೆ, ಹಿಂದೂಗಳನ್ನು ನಿರ್ಲಕ್ಷಿಸುತ್ತಿದೆ:ಈಶ್ವರಪ್ಪ
Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ
KFD: ಈ ವರ್ಷದ ಮೊದಲ ಪ್ರಕರಣ ಪತ್ತೆ; ಇಬ್ಬರಿಗೆ ಪಾಸಿಟಿವ್
MUST WATCH
ಹೊಸ ಸೇರ್ಪಡೆ
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ
Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.