ಶಿವಮೊಗ್ಗ : ಕನ್ನಡ ಧ್ವಜ ಹಾರಿಸದಿರುವುದಕ್ಕೆ ಆಕ್ರೋಶ
Team Udayavani, Nov 1, 2019, 12:25 PM IST
ಶಿವಮೊಗ್ಗ : ಕನ್ನಡ ಧ್ವಜ ಹಾರಿಸದಿರುವುದಕ್ಕೆ ಧಿಕ್ಕಾರ ಕನ್ನಡಪರ ಹೋರಾಟಗಾರರು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ನಗರದಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಯಲ್ಲಿ ರಾಷ್ಟ್ರಧ್ವಜ ಹಾರಿಸಲಾಗಿತ್ತು. ಇದನ್ನು ಖಂಡಿಸಿ ಕನ್ನಡ ಪರ ಹೋರಟಗಾರರು ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೇಯಲ್ಲಿ ಡಿಎಆರ್ ಸಭಾಂಗಣದಲ್ಲಿ ಸುದ್ದಿಗೋಷ್ಟಿ ನಡೆಸುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪರ ಎದುರೇ ಕನ್ನಡ ಧ್ವಜ ಹಾರಿಸದಿದ್ದಕ್ಕೆ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು. ತಕ್ಷಣವೇ ಪ್ರತಿಭಟನಾಕಾರರನ್ನು ಪೋಲಿಸರು ಸಭಾಂಗಣದಿಂದ ಹೊರಗೆ ಕರೆದೊಯ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.