ಭತ್ತ ಖರೀದಿ ಪ್ರಕ್ರಿಯೆ ಆರಂಭಿಸಲು ರೈತ ಸಂಘ ಒತ್ತಾಯ
Team Udayavani, May 15, 2020, 4:28 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ಭತ್ತದ ಬೆಳೆಗೆ ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ವಿಶೇಷ ಅನುದಾನ ಬೆಲೆ ಸೇರಿಸಿ ರೈತರಿಂದ ಭತ್ತ ಖರೀದಿ ಪ್ರಕ್ರಿಯೆ ಆರಂಭಿಸಬೇಕೆಂದು ಒತ್ತಾಯಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ಜಿಲ್ಲೆಯಾದ್ಯಂತ ರೈತರು ಬೆಳೆದಿರುವ ಭತ್ತದ ಬೆಳೆ ಕಟಾವಿಗೆ ಬಂದು ನಿಂತು ಈಗಾಗಲೇ ಕೊಯ್ಲು ಆರಂಭವಾಗಿದೆ. ಆದರೆ ಕೋವಿಡ್-19 ವೈರಸ್ ಹಾವಳಿಯಿಂದಾಗಿ ಈಗಾಗಲೇ ಕೃಷಿ ಕ್ಷೇತ್ರ ಕಂಗೆಟ್ಟಿದೆ. ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ, ಖರೀದಿದಾರರು ಇಲ್ಲದೆ ರೈತರು ಕಂಗಾಲಾಗಿ ಹೋಗಿದ್ದಾರೆ ಎಂದು ತಿಳಿಸಿದರು.
ಈ ಹಂತದಲ್ಲಿ ರೈತರು ಬೆಳೆದಿರುವ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ಬೆಳೆದಿರುವ ಬೆಳೆ ಖರೀದಿ ಆಗುವುದೋ, ಇಲ್ಲವೋ ಎಂದು ರೈತರು ಚಿಂತೆಗೀಡಾಗಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಈ ಕೂಡಲೇ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ವಿಶೇಷ ಅನುದಾನ ಬೆಲೆಯನ್ನು ಸೇರಿಸಿ ರೈತರಿಂದ ಭತ್ತವನ್ನು ಖರೀದಿಸಬೇಕು. ಆ ಮೂಲಕ ರೈತರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ಮುಖಂಡ ಕೆ.ಟಿ. ಗಂಗಾಧರ್, ಪ್ರಮುಖರಾದ ಯಶವಂತರಾವ್ ಘೋರ್ಪಡೆ, ಹಿರಿಯಣ್ಣಯ್ಯ, ಶರಶ್ಚಂದ್ರ, ಜಗದೀಶ್ ನಾಯಕ್, ಸಣ್ಣ ರಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.