ಆನ್‌ಲೈನ್‌ನಲ್ಲೇ ಪೊಲೀಸ್ ಅಧಿಕಾರಿಗಳ ಸಭೆ
Team Udayavani, May 1, 2020, 6:05 PM IST
ಶಿವಮೊಗ್ಗ: ಆನ್‌ಲೈನ್ ಮೂಲಕ ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಾಯಿತು
ಶಿವಮೊಗ್ಗ: ಸರ್ಕಾರ, ಜಿಲ್ಲಾಡಳಿತದ ಸೂಚನೆಯನ್ನು ಚಾಚು ತಪ್ಪದೆ ಪಾಲಿಸುವಂತೆ ಇಲಾಖೆಯ ಪ್ರತಿ ಸಿಬ್ಬಂದಿಗೂ ಮನವರಿಕೆ ಮಾಡುವುದು ಅಂದುಕೊಂಡಷ್ಟು ಸರಾಗವಲ್ಲ. ಇದೇ ಕಾರಣಕ್ಕೆ ಶಿವಮೊಗ್ಗ ಪೊಲೀಸ್ ಇಲಾಖೆ ಆನ್ ಲೈನ್ ಮಾರ್ಗ ಕಂಡುಕೊಂಡಿದೆ. ಕೊರೊನಾ ಲಾಕ್‌ಡೌನ್ ಆರಂಭವಾಗುತ್ತಿದ್ದಂತೆ ಫೀಲ್ಡಿಗಿಳಿದು ಕೆಲಸ ಆರಂಭಿಸಿದ್ದ ಪೊಲೀಸರು, ಈಗಲು ಆನ್ ಡ್ನೂಟಿಯಲ್ಲಿದ್ದಾರೆ.
ನಿಗದಿಗಿಂತಲೂ ಹೆಚ್ಚು ಗಸ್ತು ತಿರುಗುತ್ತಿದ್ದಾರೆ. ಸರ್ಕಲ್, ಪ್ರಮುಖ ರಸ್ತೆಗಳಲ್ಲಿ ವಾಹನಗಳ ತಪಾಸಣೆ, ಚೆಕ್‌ಪೋಸ್ಟ್ ನಲ್ಲಿ ಹಗಲು, ರಾತ್ರಿ ಕೆಲಸ. ಈ ನಡುವೆ ನಿರಂತರ ಮೀಟಿಂಗ್‌ಗಳನ್ನು ನಡೆಸುವುದು ಅಸಾಧ್ಯ. ಹಾಗಾಗಿ ಜಿಲ್ಲಾ ಪೊಲೀಸ್ ಇಲಾಖೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರತಿದಿನದ ಸಭೆ ನಡೆಸುತ್ತಿದೆ. ಕೋವಿಡ್ ಲಾಕ್‌ಡೌನ್ ಸಂಬಂಧ ಕೇಂದ್ರ, ರಾಜ್ಯ ಸರ್ಕಾರಗಳು, ಜಿಲ್ಲಾಡಳಿತ ಆಗಿಂದಾಗ್ಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುತ್ತಿವೆ. ಇದನ್ನು ಪರಿಪೂರ್ಣವಾಗಿ ಜಾರಿಗೊಳಿಸಬೇಕಾದ್ದು ಪೊಲೀಸ್ ಇಲಾಖೆ. ಇದೇ ಕಾರಣಕ್ಕೆ ನಿರಂತರ ಸಭೆಗಳನ್ನು ನಡೆಸಬೇಕಾಗುತ್ತದೆ.
ಜಿಲ್ಲಾ ಪೊಲೀಸ್ ಕಚೇರಿಯಿಂದ ಜಿಲ್ಲೆಯ ಮೂಲೆ ಮೂಲೆಯಲ್ಲಿರುವ ಪೊಲೀಸ್ ಠಾಣೆಗಳಿಗೂ ಸೂಚನೆಗಳು ತಲುಪಬೇಕಿದೆ. ಇದೇ ಕಾರಣಕ್ಕೆ ವಿಡಿಯೋ ಕಾನ್ಫರೆನ್ಸ್ ಮೊರೆ ಹೋಗಲಾಗಿದೆ. ಜಿಲ್ಲೆಯ ಎಲ್ಲಾ ಡಿವೈಎಸ್‌ಪಿಗಳು, ಇನ್ಸ್‌ಪೆಕ್ಟರ್‌ಗಳು, ಸಬ್‌ಇನ್ಸ್‌ಪೆಕ್ಟರ್ ಗಳು ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸುತ್ತಾರೆ. ಬಂದೋಬಸ್ತ್ ಡ್ನೂಟಿಯಲ್ಲಿ ಇರುವ ಸ್ಥಳದಿಂದಲೇ ಅಪ್ಲಿಕೇಷನ್ ಮೂಲಕ ಸಭೆಗೆ ಹಾಜರಾಗುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ;ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ
ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ
State Govt ಗೋ ಹಂತಕರಿಗೆ ಬೆಂಬಲ ನೀಡುತ್ತಿದೆ, ಹಿಂದೂಗಳನ್ನು ನಿರ್ಲಕ್ಷಿಸುತ್ತಿದೆ:ಈಶ್ವರಪ್ಪ
Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ
KFD: ಈ ವರ್ಷದ ಮೊದಲ ಪ್ರಕರಣ ಪತ್ತೆ; ಇಬ್ಬರಿಗೆ ಪಾಸಿಟಿವ್
MUST WATCH
ಹೊಸ ಸೇರ್ಪಡೆ
Indian Navy: ಭಾರತೀಯ ನೌಕಾಪಡೆಗೆ ದೇಶಿ ನಿರ್ಮಿತ ತ್ರಿವಳಿ ಬಲ
Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು
Congress: ಪಕ್ಷಕ್ಕೆ ಪೂರ್ಣ ಪ್ರಮಾಣ ಅಧ್ಯಕ್ಷರು ಬೇಕು: ಸಚಿವ ಸತೀಶ್ ಜಾರಕಿಹೊಳಿ
Proposal: ಮಹಾನಗರ ಪಾಲಿಕೆ ಆಗಿ ಉಡುಪಿ ನಗರಸಭೆ: ಪ್ರಸ್ತಾವನೆಗೆ ಸೂಚನೆ
BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್ ಜಾರಕಿಹೊಳಿ; ಬಿವೈವಿ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.