ಶಿವಮೊಗ್ಗ : ಕೋವಿಡ್ ಗೆದ್ದಿದ್ದ ಖೈದಿ ಸಾವು
Team Udayavani, May 26, 2021, 6:52 PM IST
ಶಿವಮೊಗ್ಗ : ಕೋವಿಡ್ ಪಾಸಿಟಿವ್ ಸೋಂಕಿನಿಂದ ಗುಣಮುಖರಾಗಿ ವಿಶ್ರಾಂತಿ ಪಡೆಯುತ್ತಿದ್ದ ಖೈದಿಯೊರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ಇಸ್ಮಾಯಿಲ್ ಖಾನ್ (72) ಸಾವನ್ನಪ್ಪಿರುವ ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿ. ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾ ನಿವಾಸಿಯಾಗಿದ್ದ ಇಸ್ಮಾಯಿಲ್ ಖಾನ್ , ಜಿಲ್ಲಾ ಖಜಾನೆ ಅಧಿಕಾರಿಯಾಗಿ ನಿವೃತ್ತಿಯಾಗಿದ್ದ . ಆದರೆ, ನಿವೃತ್ತಿಗೂ ಮುನ್ನ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ 1 ವರ್ಷ ಶಿಕ್ಷೆಗೆ ಗುರಿಯಾಗಿದ್ದ ಇಸ್ಮಾಯಿಲ್ ಖಾನ್, ಕಳೆದ ಏಪ್ರಿಲ್ 5 ರಂದು 1 ವರ್ಷ ಸಾದಾ ಶಿಕ್ಷೆ ಮತ್ತು 1.5 ಲಕ್ಷ ದಂಡ ವಿಧಿಸಿ ಶಿವಮೊಗ್ಗ ಕೋರ್ಟ್ ಆದೇಶದನ್ವ ಜೈಲು ಸೇರಿದ್ದರು. ಆದರೆ, ಕಾರಾಗೃಹ ಸೇರಿದ್ದ ಕೆಲವೇ ದಿನದಲ್ಲಿ ಕೋವಿಡ್ ಪಾಸಿಟಿವ್ ಆಗಿ, ಆಸ್ಪತ್ರೆ ಸೇರಿದ್ದರು . ಕೋವಿಡ್ ನಿಂದ ಗುಣಮುಖರಾಗಿ ಕೆಲ ದಿನಗಳ ಹಿಂದೆಯಷ್ಟೇ ಜೈಲಿಗೆ ವಾಪಸಾಗಿದ್ದರು. ಆದರೆ, ಕಳೆದ ಮೇ 24 ರಂದು ಮತ್ತೇ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೇ ಹೃದಯಘಾತದಿಂದ ಸಾವನ್ನಪ್ಪಿರುವ ಇಸ್ಮಾಯಿಲ್ ಖಾನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.