Shimoga; ಬೀಡಿ ಸಿಗುತ್ತಿಲ್ಲ ಎಂದು ಸೋಗಾನೆ ಜೈಲಿನಲ್ಲಿ ಕೈದಿಗಳ ಪ್ರತಿಭಟನೆ
Team Udayavani, Sep 2, 2024, 12:16 PM IST
ಶಿವಮೊಗ್ಗ: ಆರೋಪಿ ನಟ ದರ್ಶನ್ ಗೆ (Darshan) ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Prison) ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವರದಿಯಾದ ಬಳಿಕ ಇದೀಗ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕಟ್ಟುನಿಟ್ಟಿನ ಶಿಸ್ತು ಪಾಲಿಸಲಾಗುತ್ತಿದೆ. ಹೀಗಾಗಿ ಈವರೆಗೆ ಕೆಲವು ಸೌಲಭ್ಯ ಪಡೆಯುತ್ತಿದ್ದ ಕೈದಿಗಳು ಇದೀಗ ಜೈಲಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಜೈಲಿನಲ್ಲಿ ಕೈದಿಗಳು ಪ್ರತಿಭಟನೆ ನಡೆಸಿದ್ದಾರೆ. ಬೀಡಿ ಸಿಗುತ್ತಿಲ್ಲ ಎಂದು ಕೈದಿಗಳು ಪಟ್ಟು ಹಿಡಿದಿದ್ದಾರೆ.
ಸೋಗಾನೆ ಬಳಿ ಇರುವ ಕೇಂದ್ರ ಕಾರಗೃಹದಲ್ಲಿಯೂ ದರ್ಶನ್ ಪ್ರಕರಣದ ನಂತರ ಜೈಲು ವ್ಯವಸ್ಥೆಯನ್ನು ಕಠಿಣ ಮಾಡಲಾಗಿದೆ. ಹೀಗಾಗಿ ಇದೀಗ ಬೀಡಿ ನೀಡದ ಹಿನ್ನೆಲೆಯಲ್ಲಿ ಕೈದಿಗಳು ಬೀಡಿ ನೀಡಲು ಆಗ್ರಹಿಸುತ್ತಿದ್ದಾರೆ.
ತಂಬಾಕು, ಗುಟ್ಕಾ ಕೊಡಿ: ಬೆಳಗಾವಿ ಜೈಲು ಕೈದಿಗಳ ರಂಪ
ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲೂ ತಂಬಾಕು, ಪಾನ್ ಬೀಡಾ, ಗುಟ್ಕಾ ನೀಡುವಂತೆ ಆಗ್ರಹಿಸಿ ಜೈಲಿನ ಕೈದಿಗಳು ಹಾಗೂ ವಿಚಾರಣಾಧೀನ ಕೈದಿಗಳು ರವಿವಾರ ಬೆಳಗಿನ ಉಪಾಹಾರ ತ್ಯಜಿಸಿ ಪ್ರತಿಭಟನೆ ನಡೆಸಿದ್ದಾರೆ.
ಜೈಲಿನಲ್ಲಿ ಪೂರೈಕೆ ಆಗುತ್ತಿದ್ದ ಗುಟ್ಕಾ, ತಂಬಾಕು, ಪಾನ್ ಬೀಡಾ ನಿಷೇಧಿಸಿದ್ದರಿಂದ ತಮಗೆ ಊಟ, ಉಪಾಹಾರ ಬೇಡ. ಆದರೆ ಕಡ್ಡಾಯವಾಗಿ ತಂಬಾಕು, ಪಾನ್ ಬೀಡಾ ನೀಡುವಂತೆ ಆಗ್ರಹಿಸಿದ್ದಾರೆ.
ತಂಬಾಕು, ಪಾನ್ ಬೀಡಾ ಇಲ್ಲದಿದ್ದರೆ ನಾವು ಬದುಕುವುದು ಕಷ್ಟ. ಊಟ, ಉಪಾಹಾರ ಬಿಡುತ್ತೇವೆ, ಹೊರತು ಪಾನ್ ಬೀಡಾ, ತಂಬಾಕು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಜೈಲಿನಲ್ಲಿ ಪಾನ್ ಬೀಡಾ, ತಂಬಾಕು ಒದಗಿಸದಿದ್ದರೆ ಜೈಲಿನ ಹೊರಗೂ ಅವುಗಳನ್ನು ನಿಷೇಧಿಸಬೇಕು.
ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಲ್ಲಿ ಈಗಾಗಲೇ ಇಂಥ ಕ್ರಮ ಕೈಗೊಳ್ಳಲಾಗಿದೆ. ಅದೇ ಕ್ರಮವನ್ನು ರಾಜ್ಯದಲ್ಲೂ ಅನುಸರಿಸಬೇಕು. ನಮ್ಮ ಬೇಡಿಕೆ ಈಡೇರಿಸದಿದ್ದರೆ ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನೂ ತ್ಯಜಿಸುತ್ತೇವೆ ಎಂದು ಕೈದಿಗಳು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.