ಕೋವಿಡ್ ಹಸಿವು ನೀಗಿಸಲು ಪಣ
ಪ್ರತಿ ವಾರ್ಡ್‌ಗೆ ಸಾವಿರ ಆಹಾರ ಪೊಟ್ಟಣಜನರ ಸುರಕ್ಷತೆಗಾಗಿ ಪಾಲಿಕೆಯಿಂದ ಕ್ರಮ
Team Udayavani, Apr 16, 2020, 12:59 PM IST
ಶಿವಮೊಗ್ಗ: ಮಹಾನಗರ ಪಾಲಿಕೆ ತುರ್ತು ಸಭೆ ಬುಧವಾರ ನಡೆಯಿತು
ಶಿವಮೊಗ್ಗ: ಕೋವಿಡ್ ವೈರಸ್‌ನಿಂದಾಗಿ ಸರ್ಕಾರ ಲಾಕ್‌ಡೌನ್ ಘೋಷಿಸಿರುವುದು ಜನಜೀವನದ ಸುಧಾರಣಾ ಕ್ರಮವಾದರೂ ದೈನಂದಿನ ದುಡಿಮೆಯಿಂದಲೇ ಜೀವನ ಸಾಗಿಸುತ್ತಿದ್ದ ಬಡವರು, ಶ್ರಮಿಕರು, ಕಾರ್ಮಿಕರು, ಫುಟ್‌ಪಾತ್ ವ್ಯಾಪಾರಿಗಳು ಸೇರಿದಂತೆ ಜನಸಾಮಾನ್ಯರು ಹೊಟ್ಟೆಪಾಡಿಗಾಗಿ ಪರಿತಪಿಸುತ್ತಿದ್ದಾರೆ. ಹಾಗಾಗಿ, ಪ್ರತಿ ವಾರ್ಡ್‌ಗೆ ಪಾಲಿಕೆ ವತಿಯಿಂದ 1000 ಆಹಾರದ ಪೊಟ್ಟಣಗಳನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಮಹಾನಗರಪಾಲಿಕೆ ಇಂದು ಒಮ್ಮತದ ನಿರ್ಣಯ ಕೈಗೊಂಡಿದೆ.
ಬುಧವಾರ ಮಹಾನಗರಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಕೋವಿಡ್ ವೈರಸ್ ನಿಯಂತ್ರಣ ಕಾರ್ಯದಲ್ಲಿ ಮಹಾನಗರಪಾಲಿಕೆ ವತಿಯಿಂದ ಕೈಗೊಳ್ಳಲಾದ ಕ್ರಮಗಳ ಕುರಿತು ಕರೆಯಲಾಗಿದ್ದ ತುರ್ತು ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಈ ರೋಗ ನಿಯಂತ್ರಿಸುವ ಕಾರ್ಯದ ಭಾಗವಾಗಿ ಪಾಲಿಕೆ ಅಧಿಕಾರಿ-ಸಿಬ್ಬಂದಿ, ವಿಶೇಷವಾಗಿ ಪೌರಕಾರ್ಮಿಕರು ಕಸ ಸಂಗ್ರಹಣೆ, ಔಷಧ ಸಿಂಪರಣೆ, ಇನ್ನು ಮುಂತಾದ ಕಾರ್ಯಗಳಿಗಾಗಿ ಹಗಲಿರುಳು ಶ್ರಮಿಸುತ್ತಿರುವುದು ಅಭಿನಂದನಾರ್ಹ ಸಂಗತಿ ಎಂದು ಮಹಾನಗರಪಾಲಿಕೆ ಸದಸ್ಯ ಚನ್ನಬಸಪ್ಪ ಹೇಳಿದರು.
ನಗರದ ಅಸಂಘಟಿತ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ಕಾರ್ಮಿಕ ಕಲ್ಯಾಣ ನಿಧಿಯಿಂದ ಅಗತ್ಯ ನೆರವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಪಾಲಿಕೆ ವ್ಯಾಪ್ತಿಯ ಯಾವುದೇ ಒಬ್ಬ ವ್ಯಕ್ತಿಯೂ ಹಸಿವಿನಿಂದ ಸಾವನ್ನಪ್ಪಿದರೆ ಪಾಲಿಕೆ ಹೊಣೆಯಾಗಲಿದೆ ಎಂದು ರಮೇಶ್ ಹೆಗಡೆ ಹೇಳಿದರು.
ನಗರದ ಕಸ ಸಮರ್ಪಕ ವಿಲೇವಾರಿ ಮಾಡಲು ಈಗಿರುವ ಸಿಬ್ಬಂದಿ ಸಾಕಾಗದು. ಅದಕ್ಕಾಗಿ ಹೆಚ್ಚುವರಿಯಾಗಿ 25ಸಿಬ್ಬಂದಿಯನ್ನು ನೇಮಿಸಿಕೊಳ್ಳಬೇಕು ಎಂದು ವಿಪಕ್ಷ ನಾಯಕ ಯೋಗೀಶ್ ಎಚ್.ಸಿ. ಹೇಳಿದರು. ಸಭೆಯ ಆರಂಭದಲ್ಲಿ ಪಾಲಿಕೆ ಆಯುಕ್ತ ಚಿದಾನಂದ ಎಸ್.ವಟಾರೆ ಅವರು ಮಾಹಿತಿ ನೀಡಿ, ಈವರೆಗೆ ಸಾರ್ವಜನಿಕರ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಪ್ರಚಾರ ಕಾರ್ಯ ಕೈಗೊಳ್ಳಲಾಗಿದೆ. ಅಲ್ಲದೇ, ಪಾಲಿಕೆಯ ಪೌರಕಾರ್ಮಿಕರಿಗೆ ಮಾಸ್ಕ್, ಕೈಗವಸು ಮುಂತಾದವುಗಳನ್ನು ವಿತರಿಸಲಾಗಿದೆ. ನಗರದಾದ್ಯಂತ ಸ್ವತ್ಛತೆಗೆ ಆದ್ಯತೆ ನೀಡಿದ್ದು, ಔಷಧ ಸಿಂಪಡಿಸಲಾಗಿದೆ. ಮುಂದಿನ ಮೂರು ತಿಂಗಳಿಗೆ ಬೇಕಾಗುವಷ್ಟು ಔಷಧಗಳನ್ನು ಖರೀರಿಸಲಾಗಿದೆ ಎಂದರು.
ಸತತವಾಗಿ ಶ್ರಮಿಸುತ್ತಿರುವ ಪಾಲಿಕೆಯ ಪೌರಕಾರ್ಮಿಕರ ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಗಿದೆ. ವಲಸೆ ಕಾರ್ಮಿಕರಿಗಾಗಿ ವಸತಿ ವ್ಯವಸ್ಥೆ ಕಲ್ಪಿಸಿ ಪ್ರತಿನಿತ್ಯ ಆಹಾರ ನೀಡಲಾಗುತ್ತಿದೆ. ಸುರಕ್ಷತಾ ಕ್ರಮವಾಗಿ ಜಾತ್ರೆ, ಸಂತೆ, ಸಮಾರಂಭಗಳನ್ನು ರದ್ದುಗೊಳಿಸಲಾಗಿದೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಮಹಾಪೌರರು ಸೇರಿದಂತೆ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಹಲವು ಸಭೆಗಳನ್ನು ಆಯೋಜಿಸಿ ಮಹತ್ವದ ನಿರ್ಣಯಗಳನ್ನು ಕೈಗೊಂಡು ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸಭೆಯಲ್ಲಿ ಮಹಾಪೌರರಾದ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.