ಅಗ್ನಿ ಅವಘಡ ತಡೆಗೆ ಸೂಕ್ತ ಮುನ್ನೆಚ್ಚರಿಕೆ ಅಗತ್ಯ
ವಿಕೋಪ ಸಂಭವಿಸಿದಾಗ ಆತ್ಮವಿಶ್ವಾಸ ಮುಖ್ಯ: ಡಾ| ಸಾಯಿಲತಾ
Team Udayavani, Feb 3, 2020, 2:35 PM IST
ಶಿವಮೊಗ್ಗ: ಪ್ರಾಕೃತಿಕ ವಿಕೋಪಗಳಲ್ಲಿ ಅಗ್ನಿ ಅವಘಡವೂ ಸಹ ಒಂದಾಗಿದ್ದು ಈ ರೀತಿಯ ಸಂದರ್ಭದಲ್ಲಿ ಯಾವ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಹಾಗೂ ಆತ್ಮರಕ್ಷಣೆ ಹೇಗೆ ಮಾಡಿಕೊಳ್ಳಬೇಕು ಎನ್ನುವುದರ ಬಗ್ಗೆ ಜ್ಞಾನ ಅತ್ಯಗತ್ಯ ಎಂದು ಪಿಇಎಸ್ ಐಎಎಂಎಸ್ ಕಾಲೇಜಿನ ಪ್ರಾಂಶುಪಾಲೆ ಡಾ| ಕೆ. ಸಾಯಿಲತಾ ತಿಳಿಸಿದರು.
ಯುವ ರೆಡ್‌ಕ್ರಾಸ್ ವತಿಯಿಂದ ಪಿಇಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಪ್ರಥಮ ಚಿಕಿತ್ಸೆ, ಅಗ್ನಿ ಅವಘಡ ಹಾಗೂ ತುರ್ತು ಸಂದರ್ಭಗಳಲ್ಲಿನ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಗ್ನಿ ಅವಘಡಗಳು ಸಂಭವಿಸಿದಾಗ ಆತ್ಮವಿಶ್ವಾಸ, ಧೈರ್ಯದಿಂದ ಇರುವುದರೊಂದಿಗೆ ಆತ್ಮರಕ್ಷಣೆಯ ಕೌಶಲ್ಯಗಳನ್ನು ಅರಿತಾಗ ತಾವು ಅಪಾಯದಿಂದ ಪಾರಾಗುವುದರ ಜೊತೆಗೆ ಹಲವು ಜೀವಗಳನ್ನು ಉಳಿಸಬಹುದು. ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಸರ್ಕಾರಗಳು ತಕ್ಷಣ ಸ್ಪಂದಿಸಿ ಜೀವಹಾನಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ. ಇದಕ್ಕೆ ಎನ್‌ಜಿಒಗಳು ಸಹ ಸಹಕಾರ ನೀಡುತ್ತಿವೆ. ಪ್ರತಿಯೊಬ್ಬ ನಾಗರಿಕರು ಕೂಡ ಪ್ರಾಕೃತಿಕ ವಿಕೋಪದ ಸಂದರ್ಭಗಳಲ್ಲಿ ತಮ್ಮ ಜವಾಬ್ದಾರಿಗಳನ್ನು ಅರಿತು ಇನ್ನೊಬ್ಬರಿಗೆ ನೆರವಾಗಬೇಕು ಎಂದರು.
ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಘಟಕದ ಅಧಿಕಾರಿ ಪ್ರವೀಣ್ ಕೆ.ಎನ್. ಮಾತನಾಡಿ, ಇಂದು ಅಗ್ನಿ ಅವಘಡಗಳು ಹೆಚ್ಚುತ್ತಿವೆ. ಶಿವಮೊಗ್ಗದಲ್ಲಿ ಕಳೆದ ವರ್ಷದಲ್ಲಿ 220 ಅಗ್ನಿ ಅವಘಡಗಳು ದಾಖಲಾಗಿವೆ. ಈ ಕುರಿತ ಜಾಗೃತಿಯನ್ನು ನಾವು ಜನರಲ್ಲಿ ಮೂಡಿಸುವ ಯತ್ನ ಮಾಡುತ್ತಾ ಬಂದಿದ್ದೇವೆ ಎಂದು ತಿಳಿಸಿದ ಅವರು ಬೆಂಕಿ ಆರಿಸುವ ಕುರಿತು ಪ್ರಾತ್ಯಕ್ಷಿಕೆಯನ್ನು ಸಹ ನೆರವೇರಿಸಿಕೊಟ್ಟರು.
ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್ರದ ಮುಖ್ಯಸ್ಥ ಡಾ| ಜಿ.ಎಂ.ಸುದರ್ಶನ್ ಮಾತನಾಡಿ, ಬೆಂಕಿ ಅವಘಡಗಳು ಯಾವಾಗ ಬೇಕಾದರೂ ಸಂಭವಿಸಬಹುದು, ಅಕ್ಷರ ಕೌಶಲ್ಯ, ತಾಂತ್ರಿಕ ಕೌಶಲ್ಯದ ಜೊತೆಗೆ ಆತ್ಮ ರಕ್ಷಣೆಯ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕೆಂದು ಹೇಳುವುದರ ಜೊತೆಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮಾ ಧಿಕಾರಿ ಪ್ರವೀಣ್ ಬಿ. ಹಾಗೂ ಬೋಧಕ ಬೋಧಕೇತರ ವರ್ಗದವರು ಮತ್ತು ವಿದ್ಯಾರ್ಥಿಗಳು ಇದ್ದರು. ಅನುಷ ಎ.ಸಿ. ಕಾರ್ಯಕ್ರಮ ನಿರೂಪಿಸಿದರು. ಐಶ್ವರ್ಯ ಪ್ರಾರ್ಥಿಸಿದರು. ಕಾವ್ಯಶ್ರೀ ಸ್ವಾಗತಿಸಿದರು. ರಕ್ಷಿತ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.