Shimoga; ವಾಲ್ಮೀಕಿನಿಗಮದ ಚಂದ್ರಶೇಖರ್ ಆತ್ಮಹತ್ಯೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Team Udayavani, Jun 24, 2024, 4:06 PM IST
ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ಸೋಮವಾರ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರು ಮೇ 26 ಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಶಿವಮೊಗ್ಗ ವಿನೋಬನಗರ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಬಳಿಕ ಇದೇ ಕಾರಣದಿಂದ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದರು.
ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿರುವ ಆರೋಪಿಗಳಾದ ನಿಗಮ ಮಂಡಳಿ ನಿರ್ದೇಶಕ ಎ1 ಪದ್ಮನಾಭ್, ಹಾಗೂ ಮಂಡಳಿ ಅಕೌಂಟೆಂಟ್ ಸುಪರ್ ವೈಸರ್ ಎ2 ಪರಶುರಾಮ್ ರನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಸಿಐಡಿ ಡಿ.ವೈ.ಎಸ್.ಪಿ. ಮೊಹಮ್ಮದ್ ರಫಿ ನೇತೃತ್ವದ ತಂಡವು ಇಬ್ಬರು ಆರೋಪಿಗಳನ್ನು 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.