ವಲಸೆ ಹೋದ ಬಂಜಾರರ ರಕ್ಷಣೆಗೆ ಆಗ್ರಹ
Team Udayavani, Apr 19, 2020, 4:20 PM IST
ಶಿವಮೊಗ್ಗ: ಬಂಜಾರ ವಿದ್ಯಾರ್ಥಿ ಸಂಘದ ಮುಖಂಡರು ಡಿಸಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗ: ರಾಜ್ಯದಿಂದ ಹೊರರಾಜ್ಯಕ್ಕೆ ವಲಸೆ ಹೋಗಿ ಸಂಕಷ್ಟಕ್ಕೆ ಸಿಲುಕಿರುವ ಬಂಜಾರ ಸಮುದಾಯದವರ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕೆಂದು ಬಂಜಾರ ವಿದ್ಯಾರ್ಥಿ ಸಂಘದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್ ಡಿ.ಆರ್. ಮಾತನಾಡಿ, ರಾಜ್ಯದ ಉತ್ತರ ಹಾಗೂ ಬೇರೆ ಬೇರೆ ಭಾಗಗಳಿಂದ ಬಂಜಾರ ಸಮುದಾಯದ ಸಹಸ್ರಾರು ಕುಟುಂಬಗಳು ಜೀವನೋಪಾಯಕ್ಕಾಗಿ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ ರಾಜ್ಯಕ್ಕೆ ವಲಸೆ ಹೋಗಿದ್ದಾರೆ. ಕೋವಿಡ್ ಲಾಕ್‌ಡೌನ್‌ನಿಂದ ಆಹಾರ, ವಸತಿಯಿಲ್ಲದೆ ಸಿಲುಕಿಕೊಂಡಿರುವ ಆವರು ತಮ್ಮ ನೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ಅವರೆಲ್ಲರ ಹಿತರಕ್ಷಣೆಗೆ ಸರ್ಕಾರ ಮುಂದಾಗ ಬೇಕೆಂದು ಒತ್ತಾಯಿಸಿದರು.
ಈ ವೇಳೆ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಕುಮಾರ್ ನಾಯ್ಕ, ಬಂಜಾರ ಮುಖಂಡರಾದ ಕುಮಾರ್ ನಾಯ್ಕ ಬಿ., ಉಮಾಮಹೇಶ್ವರ ನಾಯ್ಕ, ಸುನೀಲ್ ನಾಯ್ಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.