ಹೊರ ರಾಜ್ಯಗಳಿಂದ ಆಗಮಿಸಿದ 289 ಮಂದಿಗೆ ಕ್ವಾರಂಟೈನ್‌


Team Udayavani, May 10, 2020, 1:06 PM IST

10-May-11

ಶಿವಮೊಗ್ಗ: ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಹೊರರಾಜ್ಯದವರ ಆರೋಗ್ಯ ತಪಾಸಣೆ ನಡೆಸಲಾಯಿತು.

ಶಿವಮೊಗ್ಗ: ಕಳೆದ ಒಂದು ವಾರದ ಅವಧಿಯಲ್ಲಿ ಜಿಲ್ಲೆಗೆ ಹೊರ ರಾಜ್ಯಗಳಿಂದ ಅಗಮಿಸಿರುವ 289 ಮಂದಿಯ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ತಿಳಿಸಿದ್ದಾರೆ.

ಇವರ ಪೈಕಿ ಕಳೆದ ಎರಡು ದಿನಗಳಲ್ಲಿ ವಿವಿಧ 7 ರಾಜ್ಯಗಳಿಂದ ಒಟ್ಟು 148 ಮಂದಿ ಜಿಲ್ಲೆಗೆ ಆಗಮಿಸಿದ್ದಾರೆ. ಇವರಲ್ಲಿ ತೆಲಂಗಾಣದಿಂದ 13, ಕೇರಳದಿಂದ 2, ಗೋವಾದಿಂದ 73, ಮಹಾರಾಷ್ಟ್ರ 12, ತಮಿಳುನಾಡು 23, ರಾಜಸ್ತಾನ 16, ಗುಜರಾತಿನ 9 ಮಂದಿ ಇದ್ದಾರೆ. ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರನ್ನೂ ಕುವೆಂಪು ವಿಶ್ವವಿದ್ಯಾಲಯದ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಸಮಗ್ರವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅತಿ ಹೆಚ್ಚಿನ ಕೋವಿಡ್ ಪ್ರಕರಣಗಳು ಕಂಡು ಬಂದಿರುವ ಹೈರಿಸ್ಕ್ ರಾಜ್ಯಗಳಿಂದ ಅಗಮಿಸಿರುವವರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ. ಇನ್ನುಳಿದ ರಾಜ್ಯಗಳಿಂದ ಆಗಮಿಸಿದವರನ್ನು ಹೋಂ ಕ್ವಾರಂಟೈನ್‌ಗೆ ಕಳುಹಿಸಲಾಗಿದ್ದು, ಪ್ರತಿಯೊಬ್ಬರ ಮೇಲೆ ನಿರಂತರ ನಿಗಾ ಇರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಎಚ್ಚರಿಕೆ: ಹೊರ ರಾಜ್ಯಗಳಿಂದ ಆಗಮಿಸಿರುವವರನ್ನು ಸೂಕ್ತ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಅವರ ಆರೋಗ್ಯ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ಇರಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಬೇರೆ ರಾಜ್ಯಗಳಿಂದ ಅಗಮಿಸಿರುವವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲ ಹುಟ್ಟಿಸುವಂತಹ, ಸಮಾಜದಲ್ಲಿ ಒಡಕನ್ನು ಉಂಟು ಮಾಡುವಂತಹ, ವದಂತಿಗಳನ್ನು ಹರಡುವ ಸಂದೇಶಗಳನ್ನು ಹಾಕುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ತಬ್ಲಿಘಿ ನಂಟು ವಿಚಾರಣೆ: ಗುಜರಾತ್‌ನಿಂದ ಬಂದಿರುವ 9 ಮಂದಿಗೆ ದೆಹಲಿಯ ತಬ್ಲಿಘಿ ನಂಟು ಇರಬಹುದು ಎಂದು ಹಲವು ಊಹಾಪೋಹಗಳು ಹರಿದಾಡುತ್ತಿದ್ದವು. ಇದಕ್ಕೆ ಸ್ಪಷ್ಟನೆ ನೀಡಿರುವ ಜಿಲ್ಲಾಧಿ ಕಾರಿ ಕೆ.ಬಿ.ಶಿವಕುಮಾರ್‌, 9 ಮಂದಿಗೆ ತಬ್ಲಿಘಿ ನಂಟಿರುವ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಅವರು ಈಗಾಗಲೇ ಆರೋಪವನ್ನು ಅಲ್ಲಗೆಳೆದಿದ್ದಾರೆ. ವಿಚಾರಣೆ ನಂತರ ಸ್ಪಷ್ಟಪಡಿಸಲಾಗುವುದು ಎಂದರು.

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

6=anadpura

Anandapura: ಅಪರಿಚಿತ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.