ಹೆಚ್ಚುತ್ತಿದೆ ಕೊರೊನಾ; ಎಚ್ಚರ ತಪ್ಪದಿರಲಿ ಜನ
Team Udayavani, May 2, 2021, 7:07 PM IST
ಶಿವಮೊಗ್ಗ: ಕೊರೊನಾ ಎರಡನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏಕಾಏಕಿ ಏರುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು, ಜನ ಸ್ವಲ್ಪ ಎಚ್ಚರ ತಪ್ಪಿದರೂ ಬಹುದೊಡ್ಡ ಅನಾಹುತ ಸಂಭವಿಸಲಿದೆ. ಕಳೆದ ಒಂದು ವಾರದಿಂದ ಸೋಂಕಿತರ ಸಂಖ್ಯೆಯಲ್ಲಿ ದಿಢೀರನೆ ಹೆಚ್ಚಳ ಆಗತೊಡಗಿದ್ದು, ಪ್ರತಿನಿತ್ಯ ಸೋಂಕಿತರ ಸಂಖ್ಯೆ ಇದೀಗ ಸಾವಿರ ಸನಿಹಕ್ಕೆ ಬಂದು ನಿಂತಿದೆ.
ವಾರದ ಹಿಂದೆ ಕೇವಲ ನೂರರ ಆಸುಪಾಸಿನಲ್ಲಿದ್ದ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳ ಆಗುತ್ತಿರುವುದು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ. ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಕೊರೊನಾ ಕರ್ಫ್ಯೂ ಜಾರಿಗೊಳಿಸಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹೇಳಲಾಗಿದೆ. ಜನರ ಅನುಕೂಲಕ್ಕಾಗಿ ಬೆಳಿಗ್ಗೆ 6 ರಿಂದ 10ರವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿದ್ದು, ಕೆಲವರು ಇದನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿ¨ ತರಕಾರಿ-ದಿನಸಿ, ಔಷ ಧ ಖರೀದಿ ನೆಪದಲ್ಲಿ ಮನೆಯಿಂದ ಹೊರಬಂದು ಬೇಕಾಬಿಟ್ಟಿಯಾಗಿ ತಿರುಗಾಡುವುದೂ ಕಂಡುಬರುತ್ತಿದೆ. ತರಕಾರಿ ಮಾರುಕಟ್ಟೆಯಲ್ಲಿ, ಕೆಲವು ಅಂಗಡಿಗಳಲ್ಲಿ ಹೋಟೆಲ್‌ಗಳಲ್ಲಿ ಹೆಚ್ಚಿನ ಜನಸಂದಣಿ ಕಾಣುತ್ತಿದ್ದು, ಸಾಮಾಜಿಕ ಅಂತರ ಪಾಲನೆ ಮಾಯವಾಗಿದೆ. ಕೆಲವರು ಮಾಸ್ಕ್ ಧರಿಸದೆ ನಿಯಮ ಉಲ್ಲಂಘನೆ ಮಾಡುತ್ತಿ¨ ಗಾಂಧಿ ಬಜಾರ್, ಎಪಿಎಂಸಿ ಮಾರುಕಟ್ಟೆ, ನೆಹರು ರಸ್ತೆ ಮತ್ತಿತರೆಡೆ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಬೇಕಿದೆ. ಕೆಲವಡೆ ಕೋವಿಡ್ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗುತ್ತಿದ್ದು, ಸೋಂಕಿನ ಪ್ರಮಾಣ ಮತ್ತಷ್ಟು ಹೆಚ್ಚಳವಾದರೂ ಆಶ್ಚರ್ಯವಿಲ್ಲ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಜನ ಸಹಕಾರ ನೀಡದಿದ್ದಲ್ಲಿ ಕೊರೊನಾ ಕಟ್ಟಿಹಾಕುವುದು ಕಷ್ಟಸಾಧ್ಯವಾಗಲಿದೆ. ಪೊಲೀಸ್ ಇಲಾಖೆಯಿಂದ ಬಿಗಿ ಕ್ರಮ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಈಗಾಗಲೇ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು, ಅದನ್ನು ಮತ್ತಷ್ಟು ಬಿಗಿಗೊಳಿಸಿದೆ. ಕೊರೊನಾ ಕರ್ಫ್ಯೂ ಇದ್ದರೂ ನಗರದಲ್ಲಿ ಕಳೆದೆರಡು ದಿನಗಳಿಂದ ಓಡಾಡುವವರ ಸಂಖ್ಯೆ ಹೆಚ್ಚುತ್ತಿದ್ದು, ಪೊಲೀಸ್ ಇಲಾಖೆ ನಗರದ ಎಲ್ಲಾ ಕಡೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಕರ್ಫ್ಯೂ ಇದ್ದರೂ ಬೇಕಾಬಿಟ್ಟಿಯಾಗಿ ವಿವಿಧ ನೆಪ ಹೇಳಿಕೊಂಡು ತಿರುಗಾಡುತ್ತಿದ್ದವರಿಗೆ ಪೊಲೀಸರು ಎಚ್ಚರಿಕೆ ನೀಡುತ್ತಿದ್ದಾರೆ.
ಒಳಗಿನ ಸಂಪರ್ಕ ರಸ್ತೆಗಳನ್ನು ಬಂದ್ ಮಾಡಿ ಸಂಚಾರಕ್ಕೆ ತಡೆಯೊಡ್ಡಿದ್ದಾರೆ. ಅಮೀರ್ ಅಹಮ್ಮದ್ ವೃತ್ತ, ನೆಹರೂ ರಸ್ತೆ, ಬಸ್ ನಿಲ್ದಾಣ, ಬಿ.ಎಚ್. ರಸ್ತೆ, ಓಟಿ ರಸ್ತೆ, ಸಾಗರ ರಸ್ತೆ ಮುಂತಾದ ಕಡೆಗಳಲ್ಲಿ ಬ್ಯಾರಿಕೇಡ್ ಹಾಕಿ ನಾಕಾಬಂಧಿ ಮಾಡಲಾಗಿದೆ. ವಿವಿಧ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳು ಖುದ್ದು ಬ್ಯಾರಿಕೇಡ್ ಬಳಿ ನಿಂತು ಮೇಲ್ವಿಚಾರಣೆ ಮಾಡುತ್ತಿದ್ದು ಹಲವರಿಗೆ ದಂಡ ಕೂಡ ವಿಧಿ ಸಿದ್ದಾರೆ. ಅಗ್ನಿ ಶಾಮಕ ಕಚೇರಿ ಎದುರು ಸುಮಾರು 10 ಕ್ಕೂ ಹೆಚ್ಚು ಆಟೋಗಳನ್ನು ತಡೆದು ಪೊಲೀಸ್ ಠಾಣೆ ಆವರಣದೊಳಗೆ ಕಳುಹಿಸಲಾಗಿದೆ. ಒಟ್ಟಾರೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು, ಅನಗತ್ಯವಾಗಿ ತಿರುಗಾಡುತ್ತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Mangaluru: ಕುಡುಪು, ಮಂಗಳಜ್ಯೋತಿ ಬಳಿ ಅಂಡರ್‌ಪಾಸ್
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.