ಶಿವಮೊಗ್ಗ: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ನಾಲ್ವರು ಆರೋಪಿಗಳ ಬಂಧನ
Team Udayavani, Dec 7, 2020, 7:19 PM IST
ಕೃತ್ಯಕ್ಕೆ ಬಳಸಿರುವ ಕಾರು
ಶಿವಮೊಗ್ಗ: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಮನೋಜ್ ಸೇರಿದಂತೆ ಪ್ರಜ್ವಲ್, ವಿನಯ್, ಸಂದೀಪ್ ಎನ್ನುವರು ಬಂಧಿತ ಆರೋಪಿಗಳು. ಇವರೆಲ್ಲರೂ ಶಿವಮೊಗ್ಗದ ಒಂದೇ ಬಡಾವಣೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಬಂಧಿತರೆಲ್ಲರೂ 22ರಿಂದ 23 ವರ್ಷ ವಯೋಮಾನದವರಾಗಿದ್ದು, ಆರೋಪಿಗಳನ್ನು ಬಂಧಿಸಿರುವ ಮಾಹಿತಿಯನ್ನು ಎಸ್ ಪಿ ಶಾಂತರಾಜು ಖಚಿತಪಡಿಸಿದ್ದಾರೆ.
ಇದನ್ನೂ ಓದಿ: ಪಶ್ಚಿಮಬಂಗಾಳದ ಸಿಲಿಗುರಿಯಲ್ಲಿ ಘರ್ಷಣೆ; ಬಿಜೆಪಿ ಕಾರ್ಯಕರ್ತ ಸಾವು, 12 ಗಂಟೆ ಬಂದ್ ಗೆ ಕರೆ
ಘಟನೆಯ ಹಿನ್ನಲೆ:
ಆರೋಗ್ಯ ಸಮಸ್ಯೆ ಹಿನ್ನೆಲೆ ಬಾಲಕಿ ತಾಯಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೈಕೆ ಮಾಡಲು ಬಾಲಕಿ ಕೆಲ ದಿನದಿಂದ ಆಸ್ಪತ್ರೆಯಲ್ಲಿದ್ದಳು. ತಾಯಿಯನ್ನು ವಾರ್ಡ್ ಗೆ ಕರೆದೊಯ್ಯುವುದು, ಚಿಕಿತ್ಸೆಗೆ ಕರೆದೊಯ್ಯುವಾಗ ವಾರ್ಡ್ ಬಾಯ್ ಮನೋಜ್ ಎಂಬಾತನ ಪರಿಚಯವಾಗಿದೆ. ವೀಲ್ ಚೇರ್ ತಂದು ಬಾಲಕಿಯ ತಾಯಿಯನ್ನು ಈತ ಕರೆದೊಯ್ಯುತ್ತಿದ್ದ. ಆಗಾಗ ಊಟ, ತಿಂಡಿ ತಂದು ಕೊಡುತ್ತಿದ್ದ ಎಂದು ಹೇಳಲಾಗುತ್ತಿತ್ತು.
ಗಲಭೆ ಹಿನ್ನೆಲೆ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ವಿಧಿಸಿದ್ದರಿಂದ ಹೊಟೇಲ್ ಗಳೆಲ್ಲ ಬಂದ್ ಆಗಿದ್ದವು. ಈ ಸಂದರ್ಭದಲ್ಲಿ ಬಾಲಕಿಗೆ ಎಲ್ಲಿಯೂ ಊಟ ಸಿಗದಿದ್ದರಿಂದ. ವಾರ್ಡ್ ಬಾಯ್ ಮನೋಜ್ ಊಟ ಕೊಡಿಸುವುದಾಗಿ ನಂಬಿಸಿ ಕಾರಿನಲ್ಲಿ ಕರೆದೊಯ್ದಿದ್ದಾನೆ. ಈ ವೇಳೆ ಕಾರಿನಲ್ಲಿ ಮನೋಜ್ ಜೊತೆಗೆ ಆತನ ಮೂವರು ಸ್ನೇಹಿತರು ಇದ್ದರು. ಬಾಲಕಿಯನ್ನು ಸಾಗರ ರಸ್ತೆಯಲ್ಲಿ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಅತ್ಯಾಚಾರದ ವಿಚಾರವನ್ನು ಬಾಲಕಿ ತಾಯಿಗೆ ತಿಳಿಸಿದ್ದು, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಡಿ. 21ರವರೆಗೆ ವಿಸ್ತರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.