ಗಂಧಕ ಮಿಶ್ರಿತ ನೀರು ಕೆರೆಗೆ
Team Udayavani, Apr 27, 2021, 8:51 PM IST
ಸೊರಬ: ಅಕಾಲಿಕ ಮಳೆಯಿಂದ ಶುಂಠಿ ಕಣದಲ್ಲಿದ್ದ ಗಂಧಕ ಮಿಶ್ರಿತ ನೀರು ಕೆರೆಗೆ ಸೇರಿದ ಪರಿಣಾಮ ಸಾವಿರಾರು ಮೀನುಗಳು ಧಾರುಣವಾಗಿ ಸಾವಿಗೀಡಾಗಿವೆ ಎಂದು ಹಿರೇಶಕುನ ಗ್ರಾಮದ ಪ್ರಗತಿಪರ ಕೃಷಿಕ ಪರಶುರಾಮ ಸಣ್ಣಬೈಲು ಆರೋಪಿಸಿದರು.
ಪಟ್ಟಣದ ಹೊರವಲಯದ ಹಿರೇಶಕುನ ಗ್ರಾಮದ ಸ.ನಂ. 54ರಲ್ಲಿನ ಕ್ಯಾಂಪ್ ಕೆರೆಯಲ್ಲಿ ಭಾನುವಾರ ಬೆಳಗ್ಗೆ ಸಾಕಷ್ಟು ಮೀನುಗಳು ಸಾವನ್ನಪ್ಪಿವೆ. ಕೆರೆಯ ಸುತ್ತ ಸುಮಾರು ಐದಾರು ಶುಂಠಿ ಕಣಗಳಿದ್ದು, ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ಶುಂಠಿ ಒಣಗಿಸಲು ಬಳಸಿದ ರಾಸಾಯನಿಕ ವಸ್ತುವಾದ ಗಂಧಕವು ಮಳೆ ನೀರಿನೊಂದಿಗೆ ಬೆರೆತು ಕೆರೆ ಸೇರಿದ್ದರಿಂದ ಮೀನುಗಳು ಸಾವಿಗೀಡಾವಿವೆ ಎಂದರು. ಶುಂಠಿ ಕಣದಲ್ಲಿ ಬಳಸುವ ಗಂಧಕವು ಮನುಷ್ಯನ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿ ವಸ್ತುವಾಗಿದೆ. ಇನ್ನು ಗಂಧಕದ ಹೊಗೆ ಸೇವಿಸಿದರೆ ಅಸ್ತಮಾದಂತಹ ಕಾಯಿಲೆ ಬರುವ ಸಾಧ್ಯತೆ ಸಾಕಷ್ಟಿದೆ ಎಂದು ವೈಜ್ಞಾನಿಕವಾಗಿ ಎಲ್ಲರಿಗೂ ತಿಳಿದಿರುವ ಸಂಗತಿ. ಕೊರೊನಾದಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಕೇವಲ ಹಣ ಗಳಿಕೆಗಾಗಿ ಮತ್ತೂಬ್ಬರ ಜೀವದೊಂದಿಗೆ ಚೆಲ್ಲಾಟವಾಡುತ್ತಿರುವ ಶುಂಠಿ ಕಣದವರ ಮೇಲೆ ಸಂಬಂಧಪಟ್ಟ ಅ ಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಹಿಂದೆ ಕೆರೆಯಲ್ಲಿ ಮೀನು ಸಾಕಣೆಗೆಂದು ಕಳೆದ ಜುಲೈ ಸಂದರ್ಭದಲ್ಲಿ ಸುಮಾರು 5 ಸಾವಿರ ಮೀನಿನ ಮರಿಗಳನ್ನು ಬಿಡಲಾಗಿತ್ತು. ಉತ್ತಮವಾಗಿ ಬೆಳೆದಿದ್ದ ಮೀನುಗಳು ಇದೀಗ ಸಾವಿರಾರು ಸಂಖ್ಯೆಯಲ್ಲಿ ದಿಢೀರನೆ ಸಾವಿಗೀಡಾಗಿರುವುದು ಆತಂಕಕ್ಕೆ ಕಾರಣವಾಗಿದೆ. ನಿತ್ಯದ ಅಡುಗೆ ಮತ್ತು ಇತರೆ ಸಂದರ್ಭಗಳಲ್ಲಿ ಹಾಗೂ ಆಯುಷ್ ಇಲಾಖೆ ಹೇಳಿದಂತೆ ಕಷಾಯದಲ್ಲಿ ಶುಂಠಿಯನ್ನು ಬಳಸುತ್ತಿದ್ದೇವೆ. ಇಂತಹ ರಾಸಾಯನಿಕ ಮಿಶ್ರಿತ ಶುಂಠಿಯನ್ನು ಬಳಸುವುದರಿಂದ ಆರೋಗ್ಯದ ಮೇಲೆ ಭೀರಬಹುದಾದ ಗಂಭೀರ ಪರಿಣಾಮವನ್ನು ಪ್ರತಿಯೊಬ್ಬರೂ ಚಿಂತಿಸಬೇಕಿದೆ. ಈ ನಿಟ್ಟಿನಲ್ಲಿ ತಾಲೂಕು ಆಡಳಿತ, ಆರೋಗ್ಯ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆ ಸೇರಿದಂತೆ ಸಂಬಂಧಪಟ್ಟ ಅಧಿ ಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
CSI ದಕ್ಷಿಣ ಪ್ರಾಂತ್ಯದ ಸಭಾಪಾಲಕರಾಗಿದ್ದ ರೆವರೆಂಡ್ ಜಾನ್ ಬೆನೆಡಿಕ್ಟ್ ನಿಧನ
Kollywood: ಲೇಡಿ ಸೂಪರ್ ಸ್ಟಾರ್ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.