ಕೋವಿಡ್ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ
Team Udayavani, Apr 28, 2021, 9:51 PM IST
ಶಿವಮೊಗ್ಗ: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕರ್ಫ್ಯೂವನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಅಧಿ ಕಾರಿಗಳಿಗೆ ಸೂಚನೆ ನೀಡಿದರು, ಮಂಗಳವಾರ ಜಿಲ್ಲಾ ಧಿಕಾರಿ ನೂತನ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಹಿರಿಯ ಅ ಧಿಕಾರಿಗಳ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಲಾಕ್‌ಡೌನ್ ಕುರಿತಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪೊಲೀಸ್ ಇಲಾಖೆ ಜಾರಿಗೊಳಿಸಬೇಕು. ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿ ಇತ್ಯಾದಿಗಳಿಗಾಗಿ ನಿಗದಿಪಡಿಸಿದ ಸಮಯ ಹೊರತುಪಡಿಸಿ ಮನೆಯಿಂದ ಹೊರಗೆ ಬರಬಾರದು. ಎರಡನೇ ಅಲೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತಿ ಅಗತ್ಯವಾಗಿದೆ ಎಂದು ಹೇಳಿದರು.
ತಾಲೂಕುಗಳ ವ್ಯವಸ್ಥೆ ಪರಿಶೀಲನೆ: ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ವ್ಯವಸ್ಥಿತ ಕ್ರಮಗಳನ್ನು ಕೈೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಪರಿಶೀಲನೆಗೆ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಅ ಧಿಕಾರಿಗಳ ಹಾಗೂ ಸ್ಥಳೀಯ ಜನಪ್ರತಿನಿಧಿ ಗಳ ಸಭೆ ನಡೆಸಲಾಗುವುದು ಎಂದರು.
ಕಂಟೈನ್‌ಮೆಂಟ್ ವಲಯ: ಸರ್ಕಾರದ ಮಾರ್ಗಸೂಚಿ ಪ್ರಕಾರ ನಿಗದಿತ ಸಂಖ್ಯೆಯ ಕೊರೊನಾ ಪಾಸಿಟಿವ್ ಕಂಡು ಬರುವ ಪ್ರದೇಶವನ್ನು ಕಂಟೈನ್‌ಮೆಂಟ್ ವಲಯ ಎಂದು ಗುರುತಿಸಲಾಗುವುದು. ಅಂತಹ ಕಡೆಗಳಲ್ಲಿ ಅಗತ್ಯವಿದ್ದರೆ ಸ್ಥಳೀಯಾಡಳಿತದಿಂದ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು.
ರೆಮ್‌ಡಿಸಿವಿರ್ ಕೃತಕ ಬೇಡಿಕೆ ಸೃಷ್ಟಿಸಬೇಡಿ: ಕೊರೊನಾ ಪಾಸಿಟಿವ್ ವ್ಯಕ್ತಿಗಳಿಗೆ ರೆಮ್‌ಡಿಸಿವಿರ್ ನೀಡಿದರೆ ಸಂಪೂರ್ಣವಾಗಿ ಗುಣಮುಖರಾಗುತ್ತಾರೆ ಎಂಬುದಕ್ಕೆ ಆಧಾರವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ರೋಗಿಗಳ ಅಂಕಿ-ಅಂಶಗಳನ್ನು ನೋಡಿದರೆ ಸಹ ಇದು ಸ್ಪಷ್ಟವಾಗುತ್ತದೆ. ಜಿಲ್ಲೆಯಲ್ಲಿ ಇದುವರೆಗೆ ಗುಣಮುಖರಾಗಿರುವ ಶೇ.80ರಷ್ಟು ಮಂದಿಗೆ ಈ ಇಂಜೆಕ್ಷನ್ ನೀಡಲಾಗಿರಲಿಲ್ಲ ಎಂಬುದನ್ನು ಗಮನಿಸಬೇಕಾಗಿದೆ. ಅದೇ ರೀತಿ ಕೊರೊನಾದಿಂದ ಸಾವಿಗೀಡಾದ ಎಲ್ಲಾ 15 ಮಂದಿಗೂ ಇಂಜೆಕ್ಷನ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ತಜ್ಞ ವೈದ್ಯರ ಸಲಹೆ ಅನುಸರಿಸಬೇಕು ಎಂದು ಅವರು ಮನವಿ ಮಾಡಿದರು.
ಪೊಲೀಸ್ ವರಿಷ್ಠಾಧಿಕಾರಿ ಲಕ್ಷಿ¾àಪ್ರಸಾದ್ ಮಾತನಾಡಿ, ಲಾಕ್‌ಡೌನ್ ಕುರಿತು ಸಾರ್ವಜನಿಕರಿಗೆ ಆಟೋ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ವಾರಾಂತ್ಯ ಕರ್ಫ್ಯೂ ಅವ ಧಿಯಲ್ಲಿ ಜನತೆ ಉತ್ತಮವಾಗಿ ಸಹಕಾರ ನೀಡಿದ್ದು, ಮಾರ್ಗಸೂಚಿ ಉಲ್ಲಂಘಿಸಿದ ಪ್ರಕರಣಗಳಲ್ಲಿ ದಂಡ ಹಾಗೂ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಹೇಳಿದರು. ಜಿಪಂ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಎಂ.ಎಲ್. ವೈಶಾಲಿ ಸೇರಿದಂತೆ ಹಿರಿಯ ಅಧಿ ಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.