ನಾಳೆಯಿಂದ ಜಿಲ್ಲೆಯಲ್ಲಿ ಕಠಿಣ ನಿಯಮ ಜಾರಿ: ಈಶ್ವರಪ್ಪ

Team Udayavani, May 9, 2021, 10:53 PM IST

9-26

ಶಿವಮೊಗ್ಗ: ಕೋವಿಡ್‌ ನಿಯಂತ್ರಿಸಲು ಮೇ 10 ರಿಂದ 14 ದಿನಗಳ ಕಾಲ ಸರ್ಕಾರ ಲಾಕ್‌ಡೌನ್‌ ಘೋಷಣೆ ಮಾಡಿದ್ದು, ಇದನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿ ಮಾಡುವ ಉದ್ದೇಶದಿಂದ ಜಿಲ್ಲಾ  ಧಿಕಾರಿ ಕಚೇರಿ ಸಭಾಂಗಣದಲ್ಲಿ ಉನ್ನತ ಮಟ್ಟದ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಅವರು ಶನಿವಾರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಏನೇ ಕ್ರಮ ಕೈಗೊಂಡರು ಸಹ ಜನಜಾಗೃತಿ ಆಗುತ್ತಿಲ್ಲ. ಮೇ 10 ರಿಂದ ಲಾಕ್‌ಡೌನ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಪರಿಣಾಮರಿಯಾಗಿ ಜಾರಿ ಮಾಡಬೇಕಿದ್ದು, ಭಾನುವಾರ ಬೆಳಗ್ಗೆ 11 ಗಂಟೆಗೆ ಡಿಸಿ ಕಚೇರಿ ಸಭಾಂಗಣದಲ್ಲಿ ಎಲ್ಲಾ ಇಲಾಖೆಯ ಎಲ್ಲಾ ವರ್ಗದ ಅ ಧಿಕಾರಿಗಳು, ಪಾಲಿಕೆ ಅ ಧಿಕಾರಿಗಳು ಸೇರಿದಂತೆ ಜಿಲ್ಲೆಯ ಎಲ್ಲಾ ನಗರಸಭೆ, ಸ್ಥಳೀಯ ಸಂಸ್ಥೆ ಅ ಧಿಕಾರಿಗಳ ಸಭೆ ಕರೆಯಲಾಗಿದೆ ಎಂದರು.

ಸಭೆಯಲ್ಲಿ ಪೊಲೀಸ್‌, ಕಂದಾಯ, ಆರೋಗ್ಯ ಇಲಾಖೆ ಅ ಧಿಕಾರಿಗಳು ಭಾಗವಹಿಸಲಿದ್ದು, ಮೇ 10 ರಿಂದ ಜಿಲ್ಲೆಯಲ್ಲಿ ಕಠಿಣ ರೀತಿಯ ನಿಯಮ ಜಾರಿ ಮಾಡಲು ಚರ್ಚೆ ನಡೆಸಲಾಗುವುದು ಎಂದರು. ಕೋವಿಡ್‌ ನಿಯಂತ್ರಿಸಲು ಶಿವಮೊಗ್ಗ ಜಿಲ್ಲೆಯಲ್ಲಿ ಅ ಧಿಕಾರಿಗಳು ತುಂಬಾ ಪರಿಣಾಮಕಾರಿಯಾಗಿ ಶ್ರಮಿಸುತ್ತಿದ್ದಾರೆ. ಆದರೂ ಜನಜಾಗೃತರಾಗದ ಹೊರತು ಸಾಧನೆ ಮಾಡಲು ಆಗುವುದಿಲ್ಲ. ಈ ಹಿಂದಿನ ಜನತಾ ಕರ್ಫ್ಯೂ ವೇಳೆ ರಸ್ತೆಯಲ್ಲಿ ವಿನಾಕಾರಣ ಓಡಾಡುವ ಬೈಕ್‌, ಆಟೋಗಳನ್ನು ಸೀಜ್‌ ಮಾಡಲಾಗಿತ್ತು. ಆದರೂ ಕೂಡ ಜನ ಓಡಾಡುತ್ತಲೇ ಇದ್ದರು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಸಮರ್ಥವಾಗಿ ಕೋವಿಡ್‌ ನಿಯಂತ್ರಿಸಲು ಸರ್ಕಾರ ಶ್ರಮಿಸುತ್ತಿದೆ. ಇದರ ಜೊತೆಗೆ ಸ್ವಯಂ ಸೇವಾ ಸಂಸ್ಥೆಗಳು ಮುಂದೆ ಬರುತ್ತಿರುವುದು ಸಂತೋಷದ ವಿಷಯವಾಗಿದೆ. ಸೇವಾ ಭಾರತಿ, ಐಎಂಎ, ಕೋವಿಡ್‌ ಸುರûಾ ಪಡೆಗಳು ರೋಗಿಗಳ ನೆರವಿಗೆ ಬರುತ್ತಿವೆ. ಇದು ಸ್ವಾಗತಾರ್ಹವಾದುದು. ಹಾಗೆಯೇ ಧಾರ್ಮಿಕ ಮಠಗಳು ಕೂಡ ತಮ್ಮ ಶಕ್ತಿ ಮೀರಿ ಇಂತಹ ಸಂಕಷ್ಟದ ಸಂದರ್ಭದಲ್ಲಿ ನೆರವಿಗೆ ಬರಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ಯಾವ ತೊಂದರೆಯೂ ಇಲ್ಲ. ಆಕ್ಸಿಜನ್‌, ವೆಂಟಿಲೇಟರ್‌, ಔಷಧಗಳು, ಹಾಸಿಗೆ ಸೇರಿದಂತೆ ಅಗತ್ಯ ಕ್ರಮವನ್ನು ನಾವು ತೆಗೆದುಕೊಳ್ಳುತ್ತಿದ್ದೇವೆ. ಜನ ಆತಂಕಪಡುವ ಅವಶ್ಯಕತೆ ಇಲ್ಲ. ಆದರೆ, ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜನಸ್ಪಂದನೆ ಇಲ್ಲದ ಹೊರತು ನಾವೇನು ಮಾಡಿದರೂ ಪರಿಣಾಮಕಾರಿಯಾಗುವುದಿಲ್ಲ ಎಂದ ಅವರು, ಕೋವಿಡ್‌ನ‌ಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ನೆರವು ನೀಡುವ ಕುರಿತಂತೆ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ದಿನಗಳಲ್ಲಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಕೋವಿಡ್‌ ಪಡೆ ಹಾಗೂ ಸೇವಾ ಭಾರತಿ ಕೈಗೊಂಡಿರುವ ಸೇವಾ ಚಟುವಟಿಕೆಯ ನಿಯಂತ್ರಣ ಕೊಠಡಿಗೆ ನಿನ್ನೆ ಒಂದೇ ದಿನ 650 ಕರೆಗಳು ಬಂದಿದ್ದು, ಅಗತ್ಯ ಇರುವ ಎಲ್ಲರಿಗೂ ಬೆಡ್‌, ಆಕ್ಸಿಜನ್‌, ಊಟದ ವ್ಯವಸ್ಥೆ ಮಾಡಲಾಗಿದೆ. ಈ ಕೇಂದ್ರ ನಿರಂತರವಾಗಿ ಕೆಲಸ ಮಾಡಲಿದೆ ಎಂದರು. ಕ್ಯಾಂಪ್ಕೋ ಸಹಕಾರ ಸಂಘದಿಂದ ಆಕ್ಸಿಜನ್‌ಗಾಗಿ 6 ಲಕ್ಷ ರೂ. ಚೆಕ್‌ನ್ನು ಸಹಕಾರ ಭಾರತಿ ಮತ್ತು ಕೋವಿಡ್‌ ಸೇವಾ ಕೇಂದ್ರಕ್ಕೆ ನೀಡಲಾಗಿದೆ. ಇದೇ ರೀತಿ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳು ಕೂಡ ಸಹಕಾರ ನೀಡುವಂತೆ ಅವರು ವಿನಂತಿಸಿದರು.

ಈ ಸಂದರ್ಭದಲ್ಲಿ ಆರ್‌ಎಸ್‌ ಎಸ್‌ ಪ್ರಮುಖ ಪಟ್ಟಾಭಿರಾಮ್‌, ಅಮೃತ್‌ ನೋನಿ ಟ್ರಸ್ಟ್‌ ಸಂಸ್ಥಾಪಕ ಶ್ರೀನಿವಾಸ್‌ಮೂರ್ತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ

6-hosanagar

Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.