ಸೋಂಕಿತರ ಸಂಬಂಧಿಗಳಿಗೆ ಉಚಿತ ದಾಸೋಹ
Team Udayavani, May 11, 2021, 10:01 PM IST
ಶಿವಮೊಗ್ಗ: ನಗರದ ಗಾಂ ಧಿಬಜಾರ್ ಸಗಟು ವ್ಯಾಪಾರಿಗಳ ಸಂಘ ಮುಂದಿನ 40 ದಿನಗಳ ಕಾಲ ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ಕರೆತಂದಿರುವ ಸಂಬಂ ಧಿಗಳಿಗೆ ಪ್ರತಿನಿತ್ಯ ಉಚಿತವಾಗಿ ಊಟ, ತಿಂಡಿ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.
ರೋಗಿಗಳೊಂದಿಗೆ ಆಸ್ಪತ್ರೆಗೆ ಬರುವ ಅವರ ಸಂಬಂಧಿಗಳಿಗೆ ಸದ್ಯ ಊಟ-ತಿಂಡಿ ಸಮಸ್ಯೆ ಉಂಟಾಗಿರುವುದನ್ನು ಮನಗಂಡು ಗಾಂಧಿಬಜಾರ್ ಸಗಟು ದಿನಸಿ ವ್ಯಾಪಾರಿಗಳ ಸಂಘ ಪ್ರತಿನಿತ್ಯ 500 ಜನರಿಗೆ ಉಚಿತವಾಗಿ ಊಟ ತಿಂಡಿ ನೀಡುವ ವ್ಯವಸ್ಥೆ ಕಲ್ಪಿಸಿದೆ.
ವ್ಯಾಪಾರಿಗಳ ಸಂಘದ ಈ ಸೇವೆಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿ ಮಾತನಾಡಿ, ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಈಗಾಗಲೇ ಹಲವಾರು ಸಂಘ-ಸಂಸ್ಥೆಗಳು ವಿವಿಧ ರೀತಿಯ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, ಮುಂದಿನ ದಿನದಲ್ಲಿ ಇನ್ನಷ್ಟು ಸಂಘ ಸಂಸ್ಥೆಗಳು ಸೇವಾ ಕಾರ್ಯಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.
ಈಗಾಗಲೇ ಸೇವಾಭಾರತಿ, ಕೋವಿಡ್ ಸುರûಾ ಪಡೆ, ಐಎಂಎ, ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಅನೇಕ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದೆ. ಜನ ಸಂಕಷ್ಟದಲ್ಲಿ ಸಿಲುಕಿರುವ ಈ ಹೊತ್ತಿನಲ್ಲಿ ಸಂಘ-ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿರುವವರ ಸಹಾಯಕ್ಕೆ ಧಾವಿಸಬೇಕು ಎಂದು ಹೇಳಿದರು.
ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿಮಾಡಿದೆ. ಮೊದಲ ದಿನ ಕೆಲವರು ತೊಂದರೆ ಅನುಭವಿಸಿರುವುದಾಗಿ ತಿಳಿದುಬಂದಿದೆ. ಆದರೆ ಲಾಕ್‌ಡೌನ್‌ಗೆ ಸಂಪೂರ್ಣ ಜನ ಬೆಂಬಲ ವ್ಯಕ್ತವಾಗಿದೆ. ಪ್ರತಿಯೊಬ್ಬರೂ ನಿಯಮ ಪರಿಪಾಲನೆ ಮಾಡುತ್ತಿ¨ªಾರೆ. ಅತಿ ಹೆಚ್ಚು ಜನ ಮನೆಯಿಂದ ಹೊರ ಬಂದಿಲ್ಲ. ಮುಂದಿನ 14 ದಿನಗಳ ಕಾಲ ಇದೇ ರೀತಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತದೆ ನಿಜ. ಆದರೆ ಯಾವುದಕ್ಕೂ ಕೊರತೆಯಾಗದಂತೆ ನಿರ್ವಹಿಸಿಕೊಂಡು ಹೋಗಲಾಗುತ್ತಿದೆ. ಯಾವುದಕ್ಕೂ ಹಾಹಾಕಾರ ಉಂಟಾಗಿಲ್ಲ. ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆ, ವೈದ್ಯರು, ಶುಶ್ರೂಷಕರು, ಡಿ ದರ್ಜೆ ನೌಕರರು, ಆಕ್ಸಿಜನ್ ಇದ್ಯಾವುದಕ್ಕೂ ಕೊರತೆಯಾಗದಂತೆ ನಿಭಾಯಿಸಿಕೊಂಡು ಹೋಗಲಾಗುತ್ತಿದೆ ಎಂದರು.
ಕಟ್ಟುನಿಟ್ಟಾಗಿ ಲಾಕ್ ಡೌನ್ ಜಾರಿಗೆ ಕೈಗಾರಿಕೋದ್ಯಮಿಗಳು ವರ್ತಕರು ಸಂಘ-ಸಂಸ್ಥೆಗಳ ಪದಾಧಿ ಕಾರಿಗಳು ಭಾನುವಾರ ನಡೆದ ಸಭೆಯಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಮೊದಲ ದಿನ ಕೆಲವೊಂದು ಸಮಸ್ಯೆ ಉಂಟಾಗಿದೆ. ಆ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸುವ ದಿಕ್ಕಿನಲ್ಲಿ ಅಧಿ ಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಕೃಷಿ ಚಟುವಟಿಕೆಗಳಿಗೆ ಹೋಗುವವರು ಹಾಲು ವಿತರಣೆ ಮಾಡುವವರಿಗೆ ತೊಂದರೆಯಾಗಿದೆ ಎಂಬ ದೂರು ಕೇಳಿ ಬಂದಿದೆ. ಪರಿಹಾರ ಕಂಡುಕೊಳ್ಳಲಾಗುವುದು. ದಿನಸಿ, ಹಾಲು, ತರಕಾರಿ, ಔಷ ಧ ಇವುಗಳಿಗೆ ತೊಂದರೆಯಾಗಬಾರದು ಇದನ್ನು ಪೂರೈಸುವ ವ್ಯಕ್ತಿಗಳಿಗೆ ಪಾಸ್ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಆರ್‌ಎಸ್‌ಎಸ್ ಪ್ರಮುಖರಾದ ಪಟ್ಟಾಭಿರಾಮ್, ಗಿರೀಶ್ ಕಾರಂತ್, ಡಿ.ಎಸ್.ಅರುಣ್ ಹಾಗೂ ಗಾಂಧಿ ಬಜಾರಿನ ವರ್ತಕರ ಸಂಘದ ಪ್ರಮುಖರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್ ಊಟ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.