ವಾರದ ನಾಲ್ಕು ದಿನ ಸಂಪೂರ್ಣ ಲಾಕ್
Team Udayavani, May 12, 2021, 7:55 PM IST
ಶಿವಮೊಗ್ಗ: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ ನಾಲ್ಕು ದಿನ ಕೊರೊನಾ ಕರ್ಫ್ಯೂ ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದರು.
ಈ ಅವ ಧಿಯಲ್ಲಿ ಎಲ್ಲಾ ಕೈಗಾರಿಕಾ ಚಟುವಟಿಕೆಗಳು, ಗಾಂಧಿ ಬಜಾರ್, ಸಗಟು ದಿನಸಿ ವ್ಯಾಪಾರ, ಎಪಿಎಂಸಿ ಸಂಪೂರ್ಣವಾಗಿ ಸ್ತಬ್ಧವಾಗಲಿದೆ. ಜಿಲ್ಲಾ ಕೈಗಾರಿಕಾ ಸಂಘ, ದಿನಸಿ ಸಗಟು ವ್ಯಾಪಾರಿಗಳ ಸಂಘ, ಗಾಂ ಧಿ ಬಜಾರ್ ವ್ಯಾಪಾರಿಗಳ ಸಂಘ ಮತ್ತು ಎಪಿಎಂಸಿ ಒಪ್ಪಿಗೆ ನೀಡಿದ್ದು ಸಹಕಾರ ನೀಡಲಿದ್ದಾರೆ ಎಂದರು.
ಈ ಅವ ಧಿಯಲ್ಲಿ ಇನ್ನುಳಿದಂತೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ವಸ್ತುಗಳ ಮಾರಾಟಕ್ಕೆ ಯಾವುದೇ ನಿಬಂìಧವಿರುವುದಿಲ್ಲ. ನೆರೆಹೊರೆಯ ಅಗತ್ಯ ವಸ್ತುಗಳ ಅಂಗಡಿಗಳು, ಬ್ಯಾಂಕ್, ಸರ್ಕಾರಿ ಕಚೇರಿ, ಹೊಟೇಲ್ ಪಾರ್ಸೆಲ್ ಸೌಲಭ್ಯ, ಮೆಡಿಕಲ್ ಇತ್ಯಾದಿ ಸೌಲಭ್ಯಗಳಿಗೆ ತೊಂದರೆಯಿರುವುದಿಲ್ಲ. ಸಾರ್ವಜನಿಕರು ಮನೆಯಲ್ಲಿಯೇ ಇದ್ದು, ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಜಿಲ್ಲೆಯಲ್ಲಿ ವೈದ್ಯಕೀಯ ಸೇವೆಯನ್ನು ಇನ್ನಷ್ಟು ಉತ್ತಮ ಪಡಿಸಲು ನಿರಂತರ ಕ್ರಮ ಕೈಗೊಳ್ಳಲಾಗುತ್ತಿದೆ. ಸೊರಬ ಮತ್ತು ಆನವಟ್ಟಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳು ಸಹ ಜಿಲ್ಲಾಡಳಿತದೊಂದಿಗೆ ಸಹಕರಿಸುತ್ತಿವೆ. ಶಿವಮೊಗ್ಗ ನಗರದಲ್ಲಿ ಹೊಟೇಲ್‌ನಲ್ಲಿ ಐಸೋಲೇಶನ್ ಸೌಲಭ್ಯ ಬಯಸುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮತ್ತು ಪ್ರತಿಯೊಬ್ಬರು ಥಂಬ್ ಇಂಪ್ರಷನ್ ನೀಡುವ ಮೊದಲು ಸ್ಯಾನಿಟೈಸ್ ಮಾಡಲು ಕಡ್ಡಾಯವಾಗಿ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು. ಜಿಲ್ಲಾ ಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.