ದಾದಿಯರ ಸೇವೆ ಅವಿಸ್ಮರಣೀಯ
Team Udayavani, May 13, 2021, 11:08 PM IST
ಸಾಗರ: ಕೋವಿಡ್ ಸಂದರ್ಭದಲ್ಲಿ ದಾದಿಯರ ಸೇವೆ ಅವಿಸ್ಮರಣೀಯ. ದಾದಿಯರು ಮುಂದಿನ ಪೀಳಿಗೆ ನೂರು ವರ್ಷಗಳ ಕಾಲ ನೆನಪಿನಲ್ಲಿಟ್ಟುಕೊಳ್ಳುವಂತಹ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.
ನಗರದ ಲೋಕೋಪಯೋಗಿ ಇಲಾಖೆ ಕಚೇರಿಯ ದೇವರಾಜ ಅರಸು ಸಭಾಭವನದಲ್ಲಿ ವಿಶ್ವ ದಾದಿಯರ ದಿನಾಚರಣೆ ಅಂಗವಾಗಿ ಆರೋಗ್ಯ ಇಲಾಖೆ ನೌಕರರ ಒಕ್ಕೂಟದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಹಿರಿಯ -ಶುಶ್ರೂಷಕಿಯರನ್ನು ಸನ್ಮಾನಿಸಿ ಮಾತನಾಡಿದರು.ಇಂದು ವಿಶ್ವ ದಾದಿಯರ ದಿನ ಎಂದು ಕರೆಯಲಾಗುತ್ತದೆ. ಹಿಂದಿನವರ ಸೇವೆ ಗುರುತಿಸಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಇವರ ಸೇವೆ ಜಗತ್ತಿನಾದ್ಯಂತ ಇಂದಿನ ಆರೋಗ್ಯ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಹೆಚ್ಚು ಮಹತ್ವ ಪಡೆದಿದೆ ಎಂದರು.
ಪ್ರಸ್ತುತ ಕೊರೊನಾದಂಥ ಸಂದರ್ಭದಲ್ಲಿ ಭಾಷಣ ಮಾಡುವ ಸಮಯವಲ್ಲ. ಆರೋಗ್ಯ ಇಲಾಖೆಯ ಚೌಕಟ್ಟಿನಲ್ಲಿ ಕೋವಿಡ್ ಸೋಂಕು, ಪ್ರಾಣ ಭಯ ಕಾಲಘಟ್ಟದಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲರ ಸೇವೆಯನ್ನು ನೆನಪು ಮಾಡುವುದು, ಅದಕ್ಕೆ ತಕ್ಕ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ದೇಶ, ರಾಜ್ಯದಲ್ಲಿ ಲಕ್ಷಾಂತರ ದಾದಿಯರು ಮಾತೆಯರಂತೆ ಜನರ ಸೇವೆ ಮಾಡುತ್ತಿದ್ದಾರೆ. ಅವರಿಗೆಲ್ಲರಿಗೂ ಭಗವಂತ ಆರೋಗ್ಯ, ಆಯುಷ್ಯ ಕರುಣಿಸಲಿ ಎಂದು ಹಾರೈಸಿದರು.
ಆರೋಗ್ಯ ಇಲಾಖೆ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮ. ಸ.ನಂಜುಂಡಸ್ವಾಮಿ ಮಾತನಾಡಿ, ಕೋವಿಡ್ ಸೋಂಕಿತರ ಹತ್ತಿರ ಅವರ ಕುಟುಂಬದವರೇ ಬಾರದಿರುವಾಗ ಆರೋಗ್ಯ ಇಲಾಖೆ ಸಿಬ್ಬಂದಿ ಜೀವ ಉಳಿಸುವ ಕೆಲಸದಲ್ಲಿ ತೊಡಗಿರುವುದು ಸಾಮಾನ್ಯ ವಿಷಯವಲ್ಲ. ಶಾಸಕ ಎಚ್. ಹಾಲಪ್ಪ ಇಲಾಖೆಯ ನೌಕರರ ನೈತಿಕ ಬಲ ಹೆಚ್ಚಿಸಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಉಮಾ ಹೆಗಡೆ, ಜುಬೇದಾ ಆಲಿ, ಅನಿತಾ ಕುಮಾರಿ, ಗುರುಶಾಂತ ಕೆ. ಹಾಗೂ ವಾಸಂತಿ. ಆರ್. ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಾಗರ ಉಪವಿಭಾಗದ ಸಹಾಯಕ ಆಯುಕ್ತ ಡಾ. ನಾಗರಾಜ್ ಎಲ್., ನಗರಸಭೆಯ ಸದಸ್ಯ ಗಣೇಶ್ ಪ್ರಸಾದ್, ರವಿ, ಸುರೇಶ್ ಇತರರು ಹಾಜರಿದ್ದರು.
ಆರೋಗ್ಯ ಇಲಾಖೆ ನೌಕರರ ಒಕ್ಕೂಟದ ತಾಲೂಕು ಅಧ್ಯಕ್ಷ ವೈ.ಮೋಹನ್ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.