ಮೋದಿ ಆಡಳಿತ ಮಾದರಿ: ಹರತಾಳು ಹಾಲಪ್ಪ
ಗಣಪತಿ ಕೆರೆ ಪಕ್ಕದ ಅಂಗಳದಲ್ಲಿ ರಾಜ್ಯದಲ್ಲಿಯೇ ಎರಡನೇ ಎತ್ತರದಲ್ಲಿ ಹಾರಾಡುವ ರಾಷ್ಟ್ರಧ್ವಜದ ಆರೋಹಣವನ್ನು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಎಚ್. ಹಾಲಪ್ಪ ಹರತಾಳು ನೆರವೇರಿಸಿದರು.
Team Udayavani, Jan 27, 2021, 6:42 PM IST
ಸಾಗರ: ಒಂದೇ ಭಾರತ, ಒಂದೇ ಧ್ವಜ, ಒಂದೇ ಸಂವಿಧಾನ ಎನ್ನುವ ಸಂಕಲ್ಪಕ್ಕೆ ಬದ್ಧವಾಗಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಅತ್ಯಂತ ಮಾದರಿಯಾದದ್ದು ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಎಚ್. ಹಾಲಪ್ಪ
ಹರತಾಳು ತಿಳಿಸಿದರು.
ಇಲ್ಲಿನ ಗಣಪತಿ ಕೆರೆ ಪಕ್ಕದ ಅಂಗಳದಲ್ಲಿ ಮಂಗಳವಾರ ನಗರಸಭೆ ವತಿಯಿಂದ ನಿರ್ಮಿಸಲಾಗಿರುವ 159 ಅಡಿ ಎತ್ತರದ ಬೃಹತ್ ಧ್ವಜಸ್ಥಂಭವನ್ನು ಲೋಕಾರ್ಪಣೆಗೊಳಿಸಿ, ರಾಷ್ಟ್ರಧ್ವಜರೋಹಣ ನೆರವೇರಿಸಿ ಮಾತನಾಡಿದ ಅವರು, ಕೊರೊನಾದಂತಹ ಸಂದರ್ಭದಲ್ಲಿ ದೇಶದ ಅಭಿವೃದ್ಧಿಯಲ್ಲಿ ಸ್ವಲ್ಪ ಹಿನ್ನಡೆ ಉಂಟಾಗಿದ್ದರೂ, ದೇಶದ ವಿಜ್ಞಾನಿಗಳು ಇಡೀ ವಿಶ್ವಕ್ಕೆ ಮಾದರಿ ಎನ್ನುವಂತೆ ಲಸಿಕೆ ಕಂಡುಹಿಡಿದು ಗಮನ ಸೆಳೆದಿದ್ದಾರೆ.
ಸಿಗಂದೂರು ಸೇತುವೆ, ಹಸಿರುಮಕ್ಕಿ ಸೇತುವೆ, ಪಟಗುಪ್ಪ ಸೇತುವೆಯಂತಹವು ನಿರ್ಮಾಣ ಮಾಡುವುದೇ ಅಸಾಧ್ಯ ಎಂದು ಹೇಳಲಾಗುತಿತ್ತು. ಅಸಾಧ್ಯವನ್ನು ಸಾಧ್ಯವಾಗಿಸಿದ ಹೆಗ್ಗಳಿಕೆ ರಾಜ್ಯ ಸರ್ಕಾರದ್ದಾಗಿದೆ. ಪುರಾತನ ಗಣಪತಿ ಕೆರೆ ಅಭಿವೃದ್ಧಿಗೆ ಪಣತೊಟ್ಟು ಕೆಲಸ ಮಾಡಲಾಗುತ್ತಿದೆ.
ಎಪಿಎಂಸಿಯಿಂದ ನಿರ್ಮಾಣಗೊಂಡಿರುವ ಸಂತೆ ಮಾರ್ಕೆಟ್ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಭಾನುವಾರ ಸಂತೆ ನಡೆಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದರು.
ಸಹಾಯಕ ಆಯುಕ್ತ ಪ್ರಸನ್ನ ವಿ., ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ, ಪೌರಾಯುಕ್ತ ಎಚ್.ಕೆ. ನಾಗಪ್ಪ, ನಗರಸಭೆ ಅಧ್ಯಕ್ಷೆ ಮಧುರಾ
ಶಿವಾನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ತುಕಾರಾಂ, ಸದಸ್ಯರಾದ ಟಿ.ಡಿ. ಮೇಘರಾಜ್, ಶ್ರೀನಿವಾಸ್, ಲಿಂಗರಾಜ್, ಅರವಿಂದ ರಾಯ್ಕರ್, ಮೈತ್ರಿ ಪಾಟೀಲ್, ಸೈಯದ್ ಜಾಕೀರ್, ಮಧುಮಾಲತಿ ಇನ್ನಿತರರಿದ್ದರು.
ಓದಿ : ಕೇಂದ್ರದಿಂದ 18 ರಾಜ್ಯಗಳಿಗೆ 12,351 ಕೋಟಿ ಅನುದಾನ ಬಿಡುಗಡೆ : ಕರ್ನಾಟಕಕ್ಕೆ 2,412 ಕೋಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.