ಕೊರೊನಾ ಇಳಿಮುಖವಾಗುತ್ತಿದ್ದರೂ ತೃಪ್ತಿ ಇಲ್ಲ


Team Udayavani, May 16, 2021, 10:55 PM IST

16-22

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಇದು ಸಮಾಧಾನವೇ ಹೊರತು ತೃಪ್ತಿ ತಂದಿಲ್ಲ ಎಂದು ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌ ಹೇಳಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಾರಕ್ಕೆ ಹೋಲಿಸಿದರೆ ಈ ಎರಡು ಮೂರು ದಿನಗಳಿಂದ 1 ಸಾವಿರ ದಾಟುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ.

ಇದು ಕೊಂಚ ಸಮಾಧಾನದ ಸಂಗತಿಯಾದರೂ ತೃಪ್ತಿಯಂತೂ ಇಲ್ಲ. ಶೇ.45 ರಿಂದ 47 ರಷ್ಟು ಇದ್ದ ಸೋಂಕಿತರ ಪ್ರಮಾಣ ಶೇ.37ಕ್ಕೆ ಇಳಿದಿದೆ. ಆದರೆ ಸದ್ಯದ ಸ್ಥಿತಿಯಲ್ಲಿ ಈ ಶೇ.37 ಸಹ ಹೆಚ್ಚಾಗಿದ್ದು ಸೋಂಕಿನ ಪ್ರಮಾಣ ಇನ್ನೂ ತಗ್ಗಬೇಕಿದೆ ಎಂದರು. ಜಿಲ್ಲೆಯಲ್ಲಿ ಆಕ್ಸಿಜನ್‌ ಕೊರತೆ ಇಲ್ಲ. ರೋಗಿಗಳ ದಾಖಲಾತಿ ಹಾಗೂ ಅವರ ಆರೋಗ್ಯ ಸ್ಥಿತಿ ನೋಡಿಕೊಂಡು ಬೆಡ್‌ ಹಂಚಿಕೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಈಗ 72 ಆಕ್ಸಿಜನ್‌ ಬೆಡ್‌ ಖಾಲಿ ಇವೆ. ಸಿಬ್ಬಂದಿ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 7277 ಕೋವಿಡ್‌ ಸಕ್ರಿಯ ಪ್ರಕರಣಗಳಿವೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ 600, ತಾಲೂಕು ಆಸ್ಪತ್ರೆಗಳಲ್ಲಿ 356, ಕೋವಿಡ್‌ ಸೆಂಟರ್‌ನಲ್ಲಿ 325 ಸೋಂಕಿತರಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ 508 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿ 4,835 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ.

ಐಸೋಲೇಷನ್‌ ಟೀಂ ಮೂಲಕ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೂರವಾಣಿ ಮೂಲಕವೇ ವಿಚಾರಿಸಲಾಗುತ್ತಿದೆ. ಅಲ್ಲದೇ, ಖಾಸಗಿಯಾಗಿ ವೈದ್ಯರು ಮನೆಗಳಿಗೂ ಭೇಟಿ ನೀಡುತ್ತಿದ್ದಾರೆ ಎಂದರು. ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ಸಾವಿನ ಸಂಖ್ಯೆ ಕೂಡ ಕಡಿಮೆಯಾಗಿದೆ. ನಿನ್ನೆಯ ಅಂಕಿ ಅಂಶದ ಪ್ರಕಾರ, 5 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೂ 557 ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲಾಡಳಿತ ಅಗತ್ಯ ಎಚ್ಚರಿಕೆ ಕ್ರಮ ಅನುಸರಿಸುತ್ತಿದೆ ಎಂದರು.

ಜಿಲ್ಲೆಯಲ್ಲಿ ರೆಮ್‌ಡೆಸಿವಿರ್‌ ಕಾಳಸಂತೆಯಲ್ಲಿ ಮಾರಾಟ ಮಾಡದಂತೆ ಎಚ್ಚರಿಕೆ ವಹಿಸಲಾಗಿದೆ. ಜಿಲ್ಲಾ ರಕ್ಷಣಾ ಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ 122, ಖಾಸಗಿ ಆಸ್ಪತ್ರೆಗಳಲ್ಲಿ 306 ರೆಮ್‌ಡೆಸಿವಿರ್‌ ಇದೆ. ತಾಲೂಕು ಆಸ್ಪತ್ರೆಗಳಲ್ಲಿ 104 ವೆಂಟಿಲೇಟರ್‌ಗಳಿವೆ. ಶಿರಾಳಕೊಪ್ಪ, ಸಾಗರ ಮತ್ತು ಹೊಸನಗರದಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲಾಗಿದೆ ಎಂದರು.

ಟಾಪ್ ನ್ಯೂಸ್

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.