ಕೋವಿಡ್ ಸೋಂಕಿತನ ಅಸಭ್ಯ ವರ್ತನೆ: ಕ್ರಮಕ್ಕೆ ಸೂಚನೆ
Team Udayavani, May 19, 2021, 10:05 PM IST
ಸಾಗರ: ಎರಡು ದಿನಗಳ ಹಿಂದೆ ಜಾಗೃತಿ ಕೆಲಸಕ್ಕೆ ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಕೋವಿಡ್ ಪಾಸಿಟಿವ್ ಬಂದ ವ್ಯಕ್ತಿ ಉಗಿದು, ಅಸಭ್ಯವಾಗಿ ವರ್ತಿಸಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ ಎಚ್. ಹಾಲಪ್ಪ ಹರತಾಳು ಅವರು ಆರೋಪಿ ವಿರುದ್ಧ ತಕ್ಷಣ ದೂರು ದಾಖಲಿಸಬೇಕು ಎಂದು ಪೊೂಲೀಸರಿಗೆ ಸೂಚನೆ ನೀಡಿದ್ದಾರೆ.
ನಗರದ ಲೋಹಿಯಾ ನಗರಕ್ಕೆ ಆಶಾ ಕಾರ್ಯಕರ್ತೆಯರು ಕೋವಿಡ್ ಕಾರ್ಯಪಡೆಯ ಕರ್ತವ್ಯ ನಿರ್ವಹಿಸಲು ತೆರಳಿದಾಗ ವ್ಯಕ್ತಿಯೋರ್ವ ತನಗೆ ಕೋವಿಡ್ ಬಂದಿರುವ ವಿಚಾರ ನಿಮ್ಮಿಂದಾಗಿ ಅಕ್ಕ ಪಕ್ಕದ ಮನೆಯವರಿಗೆ ತಿಳಿದು ನಮ್ಮನ್ನು ಅನುಮಾನದಿಂದ ನೋಡುತ್ತಿದ್ದಾರೆ. ಇದಕ್ಕೆ ನೀವೇ ಕಾರಣ ಎಂದು ಅವಾಚ್ಯವಾಗಿ ನಿಂದಿಸಿ, ಅನುಚಿತವಾಗಿ ವರ್ತಿಸಿದ ಘಟನೆ ನಡೆದಿತ್ತು. ವಿಷಯದ ಮಾಹಿತಿ ಪಡೆದ ಶಾಸಕ ಹಾಲಪ್ಪ ಆಶಾ ಕಾರ್ಯಕರ್ತೆಯರ ಸಭೆ ನಡೆಸಿ, ಕೊರೊನಾ ವಾರಿಯರ್ಸ್‌ಗಳಾಗಿ ನೀವು ಸೋಂಕಿತರ ಬಗ್ಗೆ ಅರಿವಿಲ್ಲದೆ ನೇರ ಸಂಪರ್ಕದಲ್ಲಿರುತ್ತೀರಿ.
ನಿಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದೀರಿ. ಇಂತಹ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಈ ರೀತಿ ವರ್ತಿಸುತ್ತಿರುವುದು ಗಮನಕ್ಕೆ ಬಂದಿದೆ. ಮುಂದೆ ಈ ರೀತಿಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆತ್ಮಸ್ಥೈರ್ಯ ತುಂಬಿದರು. ಇದೇ ವೇಳೆ ಆಶಾ ಕಾರ್ಯಕರ್ತೆಯರಿಗೆ ಅವರು ಫೇಸ್ ಶೀಲ್ಡ್ ಮಾಸ್ಕ್ಗಳನ್ನು ವಿತರಿಸಿದರು.
ನಗರಸಭಾಧ್ಯಕ್ಷೆ ಮಧುರಾ ಶಿವಾನಂದ, ಉಪಾಧ್ಯಕ್ಷ ವಿ. ಮಹೇಶ್, ಸದಸ್ಯರಾದ ಗಣೇಶ್ ಪ್ರಸಾದ್, ಸಂತೋಷ್ ಶೇಟ್, ಮೈತ್ರಿ ಪಾಟೀಲ್, ಸೀಮಾ ಕಿರಣ್ ಸಿಂಗ್, ಆರೋಗ್ಯ ಇಲಾಖೆ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮ.ಸ ನಂಜುಡಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.