ಹಳ್ಳಿಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಮೆಚ್ಚುಗೆ

Team Udayavani, May 27, 2021, 10:31 PM IST

27-20

ಶಿವಮೊಗ್ಗ: ಗ್ರಾಮೀಣ ಮಟ್ಟದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ತಿಳಿಸಿದರು.

ಅವರು ಬುಧವಾರ ಮುಖ್ಯಮಂತ್ರಿ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಅವರು 4 ಜಿಲ್ಲೆಗಳ 40 ಗ್ರಾಮ ಪಂಚಾಯತ್‌ ಅಧ್ಯಕ್ಷರು ಹಾಗೂ ಪಿಡಿಒಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಗ್ರಾಮೀಣ ಭಾಗದಲ್ಲಿನ ಕೊರೊನಾ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಕೊರೊನಾ ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಕೊರೊನಾ ಪಾಸಿಟಿವಿಟಿ ದರವನ್ನು ಇನ್ನಷ್ಟು ತಗ್ಗಿಸಲು ಕಠಿಣ ಕ್ರಮಗಳನ್ನು ಮುಂದುವರೆಸಲು ಸೂಚನೆ ನೀಡಿದ್ದಾರೆ ಎಂದರು. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣವನ್ನು ಗಮನದಲ್ಲಿರಿಸಿಕೊಂಡು ಆಯಾ ಗ್ರಾಮ ಪಂಚಾಯತ್‌ ಮಟ್ಟದಲ್ಲೂ ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸಲು ಸೂಚನೆ ನೀಡಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 17 ಕೋವಿಡ್‌ ಕೇರ್‌ ಸೆಂಟರ್‌ಗಳು ಕಾರ್ಯ ನಿರ್ವಹಿಸುತ್ತಿವೆ.

ಕೊರೊನಾ ಸೋಂಕಿತರು ಕಡ್ಡಾಯವಾಗಿ ಕೇರ್‌ ಸೆಂಟರ್‌ನಲ್ಲಿ ದಾಖಲಾಗಲು ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್‌ಗೆ ಅನುಮತಿ ನೀಡದಿರುವಂತೆ ತಿಳಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ತಲಾ ನಾಲ್ಕು ವಾರ್ಡ್‌ಗಳಿಗೆ ಒಂದರಂತೆ ಒಟ್ಟು 9 ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸಲಾಗಿದೆ. ಆಯಾ ಭಾಗದ ಕಾರ್ಪೊರೇಟರ್‌ಗಳು ಜವಾಬ್ದಾರಿ ತೆಗೆದುಕೊಂಡು ಸ್ವತ್ಛತೆ ಇತ್ಯಾದಿ ಕಾರ್ಯಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಹೇಳಿದರು.

ವಿಡಿಯೋ ಸಂವಾದ: ತೀರ್ಥಹಳ್ಳಿ ತಾಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಎ.ಕೆ.ಭಾಸ್ಕರ್‌ ಅವರೊಂದಿಗೆ ಮುಖ್ಯಮಂತ್ರಿ ಅವರು ವಿಡಿಯೋ ಸಂವಾದದ ಮೂಲಕ ಮಾಹಿತಿ ಪಡೆದರು. ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಮದುವೆ, ಮುಂಜಿ, ಜಾತ್ರೆಯಂತಹ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು. ಕೋವಿಡ್‌ ಪಾಸಿಟಿವಿಟಿ ದರ ಶೇ.10 ಕ್ಕೆ ಇಳಿಯಲು ಪ್ರಯತ್ನಿಸುವಂತೆ ಮುಖ್ಯಮಂತ್ರಿ ಅವರು ತಿಳಿಸಿದರು.

ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಭಾಸ್ಕರ್‌ ಅವರು ಮಾಹಿತಿ ನೀಡಿದರು. ಪಂಚಾಯತ್‌ ವ್ಯಾಪ್ತಿಯಲ್ಲಿ ಇದುವರೆಗೆ 51 ಪಾಸಿಟಿವ್‌ ಪ್ರಕರಣಗಳು ಕಂಡು ಬಂದಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಟಾಸ್ಕ್ಫೋರ್ಸ್‌ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಪಾಸಿಟಿವ್‌ ವ್ಯಕ್ತಿಗಳಿಗೆ ಮೆಡಿಕಲ್‌ ಕಿಟ್‌ ನೀಡಲಾಗುತ್ತಿದೆ ಎಂದರು. ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌, ಎಸ್ಪಿ ಲಕೀ ಪ್ರಸಾದ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ

6-hosanagar

Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.