50 ಆಮ್ಲಜನಕ ಸಹಿತ ಬೆಡ್ ವ್ಯವಸ್ಥೆ: ಶಾಸಕ ಕುಮಾರ ಬಂಗಾರಪ್ಪ
Team Udayavani, May 28, 2021, 9:24 PM IST
ಸೊರಬ: ತಾಲೂಕಿನಲ್ಲಿ ಕೊರೊನಾ ಹತೋಟಿಗೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ತಾಲೂಕು ಆಡಳಿತ ಕ್ಷಿಪ್ರಗತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕೊರೊನಾ ಸೋಂಕಿತರಿಗೆ ತಾಲೂಕಿನಲ್ಲಿ 50 ಆಮ್ಲಜನಕ ಸಹಿತ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣ ಮತ್ತು ಆನವಟ್ಟಿಯಲ್ಲಿ 50 ಆಮ್ಲಜನಕ ಸಹಿತ ಬೆಡ್‌ಗಳ ಡೆಡಿಕೇಟೆಡ್ ಕೋವಿಡ್ ಹೆಲ್ತ್ ಕೇರ್ ತೆರೆಯಲಾಗಿದ್ದು, ಕೊರೊನಾ ಸೋಂಕಿತರು ನೆರೆಯ ಶಿಕಾರಿಪುರ, ಸಾಗರ ಅಥವಾ ಶಿವಮೊಗ್ಗಕ್ಕೆ ತೆರಳಬೇಕಿದ್ದ ಸ್ಥಿತಿ ತಪ್ಪಿಸಿದಂತಾಗಿದೆ. ಜತೆಗೆ ಅಲ್ಲಿಯೂ ಸಹ ಹೊರೆ ಕಡಿಮೆಯಾಗಿದೆ. ಪಟ್ಟಣದಲ್ಲಿ 110 ಜನ ಸಾಮರ್ಥ್ಯದ ಕೊರೊನಾ ಆರೈಕೆ ಕೇಂದ್ರವು ಕಾರ್ಯನಿರ್ವಹಿಸುತ್ತಿದ್ದು, ಸುಮಾರು 70 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತಮ ಆಹಾರದ ಜತೆಗೆ ಸೂಕ್ತ ವೈದ್ಯಕೀಯ ಸೌಲಭ್ಯ ನೀಡಲಾಗುತ್ತಿದೆ. ಡಿಸಿಎಚ್ ಕೇಂದ್ರಕ್ಕೆ ಶೀಘ್ರದಲ್ಲಿಯೇ ತಜ್ಞ ವೈದ್ಯರ ನೇಮಕಕ್ಕಾಗಿ ಜಿಲ್ಲಾಡಳಿತಕ್ಕೆ ಒತ್ತಾಯಿಸಲಾಗಿದೆ ಎಂದರು.
ಮುಖ್ಯ ರಸ್ತೆ ಅಗಲೀಕರಣ: ಪಟ್ಟಣದಲ್ಲಿ ಸುಮಾರು 15 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಮುಖ್ಯರಸ್ತೆಯ ಅಗಲೀಕರಣ ಕಾರ್ಯವು ಕೇವಲ ಒಂದೇ ವಾರದಲ್ಲಿ ಆರಂಭವಾಗಲಿದೆ. ನ್ಯಾಯಾಲಯದಲ್ಲಿದ್ದ ಪ್ರಕರಣಗಳು ಇತ್ಯರ್ಥವಾಗಿದ್ದು, ಈಬಗ್ಗೆ ಪಿಡಬುಡಿ ಮತ್ತು ಪುರಸಭೆಗೆ ಮಾಹಿತಿ ತಲುಪಿದೆ. ಮುಖ್ಯ ರಸ್ತೆಯ ನಿವಾಸಿಗಳಿಗೆ ಪರಿಹಾರ ನೀಡುವ ಕಾರ್ಯವು ನಡೆದಿದೆ ಎಂದರು.
ಕಿಟ್ ವಿತರಣೆ: ಕೊರೊನಾದಿಂದ ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಅನೇಕರು ಉದ್ಯೋಗ ವಂಚಿತರಾಗಿದ್ದಾರೆ. ಜನರಲ್ಲಿ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸೇವಾ ಭಾರತಿ ವತಿಯಿಂದ ಸಮಸ್ಯೆಗೆ ಸಿಲುಕಿರುವ ವರ್ಗದವರನ್ನು ಗುರುತಿಸಿ ಜೂ.3ರಿಂದ ಕಿಟ್ ವಿತರಿಸುವ ಕಾರ್ಯವು ಹಮ್ಮಿಕೊಳ್ಳಲಾಗಿದೆ ಎಂದರು.
ಪುರಸಭೆ ಅಧ್ಯಕ್ಷ ಎಂ.ಡಿ. ಉಮೇಶ್, ಉಪಾಧ್ಯಕ್ಷ ಮಧುರಾಯ್ ಜಿ. ಶೇಟ್, ಪ್ರಮುಖರಾದ ದಿವಾಕರ ಭಾವೆ, ದೇವೇಂದ್ರಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.