ಮುಂದಿನ ಜೂನ್ ಒಳಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ
Team Udayavani, Jun 13, 2021, 9:48 PM IST
ಶಿವಮೊಗ್ಗ: ಜನರ ಬಹುನಿರೀಕ್ಷಿತ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ತಿಳಿಸಿದರು.
ಶನಿವಾರ ಸೋಗಾನೆಯಲ್ಲಿ ನಡೆಯುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಅಂತಹ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು. ವಿಮಾನ ನಿಲ್ದಾಣ ನಿರ್ಮಾಣದಿಂದ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಗತಿ ನಿರೀಕ್ಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸವಾಂìಗೀಣ ಪ್ರಗತಿ ಸಾಧ್ಯವಾಗಲಿದೆ.
ಹೆಚ್ಚಿನ ಕೈಗಾರಿಕೆಗಳು ಪ್ರಾರಂಭವಾಗಿ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದರು. ರನ್ ವೇ ಕಾಮಗಾರಿ, ಸಂಪರ್ಕ ರಸ್ತೆ, ಪೆರಿಮೀಟರ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಂಪೌಂಡ್ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, 15,900 ಮೀಟರ್ ಪೈಕಿ 11,500 ಮೀಟರ್ ಕಾಂಪೌಡ್ ನಿರ್ಮಾಣ ಪೂರ್ಣಗೊಳಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿಮಾನ ನಿಲ್ದಾಣ ಕಟ್ಟಡದ ವಿನ್ಯಾಸ ಅನಾವರಣ ಮಾಡಿದರು. ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಅಶೋಕ ನಾಯ್ಕ, ಅರಗ ಜ್ಞಾನೇಂದ್ರ, ರುದ್ರೇಗೌಡ, ಆರ್ಯವೈಶ್ಯ ನಿಗಮ ಅಧ್ಯಕ್ಷ ಡಿ.ಎಸ್. ಅರುಣ್, ಮೇಯರ್ ಸುನಿತಾ ಅಣ್ಣಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್, ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.