ಸಮಾಜದ ಒಳಿತಿಗೆ ಬ್ರಾಹ್ಮಣರ ಕೊಡುಗೆ ಅಪಾರ

Team Udayavani, Jun 17, 2021, 10:51 PM IST

17-21

ಸಾಗರ: ಪುರಾಣ ಕಾಲದಿಂದಲೂ ಸಮಾಜದ ಒಳಿತಿಗಾಗಿ ಬ್ರಾಹ್ಮಣರು ಗುರುತರವಾದ ಕೊಡುಗೆ ನೀಡುತ್ತ ಬಂದಿದ್ದಾರೆ. ಅವುಗಳನ್ನು ಪರಿಗಣಿಸದೆ ಏಕಾಏಕಿ ಅವರ ವಿರುದ್ಧ ಅಶಾಂತಿ ಮೂಡಿಸುವ ಕೆಲಸ ಯಾರಿಂದಲೂ ಆಗಬಾರದು ಎಂದು ಪಂಚಾಯತ್‌ ರಾಜ್‌ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಅಭಿಪ್ರಾಯಪಟ್ಟರು.

ಇಲ್ಲಿನ ಗಾಂ ಧಿ ನಗರದ ಗೌತಮ ಸಭಾಂಗಣದಲ್ಲಿ ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಸಾಗರ ತಾಲೂಕು ಬ್ರಾಹ್ಮಣ ಸಂಘ, ವಿಪ್ರ ನೌಕರರ ಸಂಘ, ವಿಪ್ರ ವೈದಿಕ ಪರಿಷತ್‌, ಜೋಶಿ ಫೌಂಡೇಷನ್‌, ಸಾಗರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಲೋಕಕಲ್ಯಾಣಾರ್ಥ ಏರ್ಪಡಿಸಿದ್ದ ರುದ್ರ ಪಾರಾಯಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಪ್ರಚಾರ ಗಿಟ್ಟಿಸುವ ದೃಷ್ಟಿಯಿಂದ ಮತ್ತೂಬ್ಬರನ್ನು ಹೀನಾಯವಾಗಿ ದೂಷಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಇದು ಪರಸ್ಪರರಲ್ಲಿ ದ್ವೇಷ ಹುಟ್ಟುಹಾಕಿ ಜನಸಾಮಾನ್ಯರ ಸಂಕಷ್ಟ ಹೆಚ್ಚಿಸುವಂತೆ ಮಾಡುತ್ತದೆ. ಸ್ವಜಾತಿ, ಧರ್ಮವನ್ನು ಪ್ರೀತಿಸುವುದು ತಪ್ಪಲ್ಲ. ಆದರೆ ಇತರರನ್ನು ಕೊಂಕಿಲ್ಲದೆ ಗೌರವಿಸುವ ಮನೋಭಾವ ಬೆಳೆಸಿಕೊಂಡರೆ ಸಮಾಜ ಹೆಚ್ಚು ಆರೋಗ್ಯಕರವಾಗಿರುತ್ತದೆ ಎಂದರು.

ಬ್ರಾಹ್ಮಣ ಸಮುದಾಯ ರುದ್ರ ಪಾರಾಯಣದಂತಹ ಧಾರ್ಮಿಕ ಚಟುವಟಿಕೆ ನಡೆಸುವುದರ ಹಿಂದೆಯೂ ಈ ಕೊರೊನಾ ಸೋಂಕಿನ ಕಾಲದಲ್ಲಿ ಇಡೀ ಮಾನವ ಸಮುದಾಯಕ್ಕೆ ಒಳಿತಾಗಲಿ ಎಂಬ ಆಶಯವೇ ಅಡಗಿದೆ. ಜಗತ್ತಿನ ಎಲ್ಲ ಜಾತಿ, ಧರ್ಮ, ಪರಂಪರೆಗಳು ಸರ್ವರ ಹಿತವನ್ನೇ ಬಯಸಿವೆ. ಆದರೆ ಆಚರಣೆಯಲ್ಲಿ ಸೋಲುವ ನಾವು ದ್ವೇಷ, ನಾಶದ ಮನೋಭಾವ ಪ್ರದರ್ಶಿಸುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಬ್ರಾಹ್ಮಣ ಮಹಾಸಭಾ ರಾಜ್ಯ ಪ್ರಧಾನ ವಕ್ತಾರ ಮ.ಸ.ನಂಜುಂಡಸ್ವಾಮಿ ಅವರು ಈಶ್ವರಪ್ಪ ಅವರಿಗೆ ತಮ್ಮ ಆತ್ಮಕಥನದ ಪುಸ್ತಕ ನೀಡಿ ಮಾತನಾಡಿ, ಸಮಾಜದಲ್ಲಿ ಕೆಲವು ವೃತ್ತಿಗಳು ಹೆಚ್ಚಿನ ತ್ಯಾಗ ಬಯಸುತ್ತವೆ. ಓರ್ವ ಗುಮಾಸ್ತ, ಗಾರ್ಮೆಂಟ್‌ ನೌಕರರಂತಹವರಿಗೆ ಕೆಲಸದ ಸಮಯದ ನಂತರ ಸಿಗುವ ಸ್ವಾತಂತ್ರÂ ಅರ್ಚಕ, ಪುರೋಹಿತರಿಗೆ, ಶಿಕ್ಷಕರಿಗೆ ಸಿಗುವುದಿಲ್ಲ.

ಅವರು ಕಾನೂನುಬದ್ಧವಾಗಿಯಷ್ಟೇ ಅಲ್ಲ, ನೈತಿಕತೆಯ, ಸಭ್ಯತೆಯ ಎಲ್ಲೆ ಮೀರುವಂತಿರಬಾರದು. ಅವರು ಮಾಡಬೇಕಾದ ತ್ಯಾಗಗಳಿಗೆ ಸಮಾಜ ಅವರಿಗೆ ಪೂರ್ಣ ಪ್ರಮಾಣದಲ್ಲಿ ಗೌರವ ಸಲ್ಲಿಸಬೇಕೇ ವಿನಃ ಹೀಗಳಿಕೆ ಸರಿಯಲ್ಲ ಎಂದರು. ಈ ಸಂದರ್ಭದಲ್ಲಿ ಸಚಿವರ ವಿಶೇಷ ಅಧಿಕಾರಿ ಲೋಕೇಶ್‌, ಜ್ಯೋತಿ ನಂಜುಂಡಸ್ವಾಮಿ, ವೈ. ಮೋಹನ್‌, ವಸಂತ್‌, ಸುಜಾತಾ, ಬದರಿನಾಥ್‌ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

one-Health-misson

Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್‌”

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

20-hosanagara

Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.