ಲಾಕ್‌ಡೌನ್ ಇದ್ದರೂ ಬಿಂದಾಸ್ ಸಂಚಾರ!
Team Udayavani, Jun 20, 2021, 10:20 PM IST
ಶಿವಮೊಗ್ಗ: ಲಾಕ್‌ಡೌನ್ ತೆರವುಗೊಳ್ಳುವ ಮುಂಚೆಯೇ ತಾಲೀಮು ಎನ್ನುವಂತೆ ಸಾರ್ವಜನಿಕರ ಓಡಾಟ ಜೋರಾಗಿದೆ. ಸರ್ಕಾರದ ಈ ಹಿಂದಿನ ಆದೇಶದಂತೆ ಎರಡನೇ ಹಂತದ ಲಾಕ್‌ಡೌನ್ ಸೋಮವಾರ ಬೆಳಿಗ್ಗೆ 6 ಗಂಟೆಗೆ ಮುಕ್ತಾಯಗೊಳ್ಳಲಿದ್ದು, ಅದು ಮುಂದುವರಿಸುವ ಅಥವಾ ಅನ್‌ಲಾಕ್ ಮಾಡುವ ಕುರಿತು ಇನ್ನೂ ನಿರ್ಧಾರ ಆಗಬೇಕಿದೆ.
ಆದರೆ ಲಾಕ್ ಡೌನ್ ಜಾರಿಯಲ್ಲಿದ್ದರೂ ನಗರದಲ್ಲಿ ಜನರ ಹಾಗೂ ವಾಹನಗಳ ಓಡಾಟ ಭರದಿಂದ ಸಾಗಿದೆ. ಪೊಲೀಸರು ಕೂಡ ಕೈಚೆಲ್ಲಿ ಕುಳಿತಿದ್ದಾರೆ. ಅಲ್ಲಲ್ಲಿ ಹಾಕಿದ್ದ ಬ್ಯಾರಿಕೇಡ್‌ಗಳನ್ನು ಕೂಡ ಸಾರ್ವಜನಿಕರೇ ತೆರವುಗೊಳಿಸಿ ಓಡಾಡುತ್ತಿದ್ದಾರೆ.
ಕುವೆಂಪು ರಸ್ತೆ ಸೇರಿದಂತೆ ಅನೇಕ ಕಡೆ ವಾಹನಗಳ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಅ ಧಿಕವಾಗಿದೆ. ಕೆಲ ಅಂಗಡಿಗಳನ್ನು ತೆರೆಯಲಾಗಿದೆ. ಅಲ್ಲಲ್ಲಿ ಗೂಡಂಗಡಿಗಳ ಬಾಗಿಲನ್ನೂ ತೆರೆಯಲಾಗುತ್ತಿದೆ. ಹೋಟೆಲ್‌ಗಳಲ್ಲಿ ಪಾರ್ಸೆಲ್ ನೀಡುವುದರ ಜೊತೆಗೆ ಸದ್ದಿಲ್ಲದೆ ಟೇಬಲ್ ಸರ್ವೀಸ್ ಕೂಡ ಆರಂಭವಾಗಿದೆ.
ಕುಟುನೆಪ ಹೇಳಿ ಓಡಾಡುವವರ ಸಂಖ್ಯೆ ಹೆಚ್ಚಾಗಿದೆ. ಎಂದಿನಂತೆ ಪಾರ್ಕ್‌ಗಳಲ್ಲಿ ಜನರು ವಾಕಿಂಗ್, ಆಟೋಟಗಳನ್ನು ಪುನರ್ ಆರಂಭಿಸಿದ್ದಾರೆ. ರಸ್ತೆಯಲ್ಲೂ ಕೂಡ ವಾಕಿಂಗ್ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಸಾಕಷ್ಟು ಕ್ರಮ ಕೈಗೊಂಡರೂ ಬದಲಾಗದ ಜನರ ವರ್ತನೆಯಿಂದ ಬೇಸತ್ತ ಪೊಲೀಸರು ಸಹ ಸುಮ್ಮನಿದ್ದಾರೆ. ಹೀಗಾಗಿ ಲಾಕ್‌ಡೌನ್ ಮುಗಿಯುವ ಮುನ್ನವೇ ಜನ ತಾವೇ ಅನ್‌ಲಾಕ್ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
MUST WATCH
ಹೊಸ ಸೇರ್ಪಡೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.