ಮಹಿಳಾ ಪಾಲಿಟೆಕ್ನಿಕ್ ಅಭಿವೃದ್ಧಿಗೆ ನೀಲನಕ್ಷೆ ರೂಪಿಸಿ
Team Udayavani, Jun 24, 2021, 10:12 PM IST
ಶಿವಮೊಗ್ಗ: ನಗರದ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್‌ನ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗೋಪಾಳದಲ್ಲಿ 14ಎಕರೆ ವ್ಯಾಪ್ತಿಯ ಕಾಲೇಜು ಕ್ಯಾಂಪಸ್‌ಗೆ ಬುಧವಾರ ಭೇಟಿ ನೀಡಿದ ಅವರು, ಅಭಿವೃದ್ಧಿ ಕಾರ್ಯಗಳ ಕುರಿತು ಅ ಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು.
ಮೂರು ದಶಕದ ಹಿಂದೆ ಆರಂಭವಾಗಿರುವ ರಾಜ್ಯದ ವಸತಿಯುಕ್ತ ಮಹಿಳಾ ಪಾಲಿಟೆಕ್ನಿಕ್ ಕಟ್ಟಡ ದುಸ್ಥಿತಿಯಲ್ಲಿದೆ. ಹಲವು ಕಟ್ಟಡಗಳಲ್ಲಿ ಮಳೆ ನೀರು ಸೋರುತ್ತಿದ್ದು, ಅದನ್ನು ಸರಿಪಡಿಸಬೇಕಾಗಿದೆ. ಕ್ಯಾಂಪಸ್‌ನ ಒಳಗೆ ರಸ್ತೆ, ಒಳಚರಂಡಿ, ವಿದ್ಯುದ್ದೀಪ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಇದೇ ರೀತಿ ವಿದ್ಯಾರ್ಥಿನಿ ಯರ ಹಾಸ್ಟೆಲ್ ದುರಸ್ತಿ, ಶಿಕ್ಷಕ ವರ್ಗದ ವಸತಿ ದುರಸ್ತಿ ಹಾಗೂ ನೂತನ ವಸತಿ ಸಮುತ್ಛಯ ನಿರ್ಮಾಣ ಕಾರ್ಯ, ಕಾಲೇಜಿನ ಸುತ್ತಲೂ ವಿಶಾಲ ಕಾಂಪೌಂಡ್ ನಿರ್ಮಾಣ ಕಾರ್ಯ ಕೈಗೊಳ್ಳಬೇಕಾಗಿದೆ. ಈ ಕುರಿತಾದ ಸಮಗ್ರ ಕ್ರಿಯಾ ಯೋಜನೆಯನ್ನು ರೂಪಿಸಿ, ಒಂದು ತಿಂಗಳ ಒಳಗಾಗಿ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಕಾಮಗಾರಿ ಆರಂಭವಾಗಬೇಕು. ಮುಂದಿನ ಒಂದು ವರ್ಷದ ಒಳಗಾಗಿ ಸುಸಜ್ಜಿತ ಮಾದರಿ ಪಾಲಿಟೆಕ್ನಿಕ್ ಕಾಲೇಜು ಇಲ್ಲಿ ಆರಂಭವಾಗಬೇಕೆಂದು ಸೂಚನೆ ನೀಡಿದರು.
ವಿದ್ಯಾರ್ಥಿನಿಯರ ಹಾಸ್ಟೆಲ್‌ನ ನೆಲಹಾಸು ಹಾಳಾಗಿರುವ ಕಡೆಗಳಲ್ಲಿ ಹೊಸದಾಗಿ ನೆಲಹಾಸು ಅಳವಡಿಸಬೇಕು. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಇನ್ನುಳಿದಂತೆ ಕಾಲೇಜಿಗೆ ಪ್ರಯೋಗಾಲಯ, ಸಿಬ್ಬಂದಿ ಸೇರಿದಂತೆ ಕಾಲೇಜಿನ ಉನ್ನತೀಕರಣ ಕಾರ್ಯವನ್ನು ಇಲಾಖೆ ವತಿಯಿಂದ ಕೈಗೊಳ್ಳಬೇಕು. ಕಾಲೇಜಿನ ಸಮಗ್ರ ಅಭಿವೃದ್ಧಿ ಕುರಿತು ಸಂಬಂಧಪಟ್ಟ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಅಭಿವೃದ್ಧಿಗೆ ಅಗತ್ಯ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು. ಪಾಲಿಟೆಕ್ನಿಕ್‌ನ್ನು ಎಂಜಿನಿಯ ರಿಂಗ್ ಕಾಲೇಜಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾಪ ವಿದ್ದು, ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಟ್ಯಾಬ್ ವಿತರಣೆ: ರಾಜ್ಯ ಸರ್ಕಾರದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡುವ ಯೋಜನೆಗೆ ಸಂಸದರು ಚಾಲನೆ ನೀಡಿದರು. ಈ ಮೊದಲು ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸೀಮಿತವಾಗಿದ್ದ ಈ ಯೋಜನೆ ಯನ್ನು ಸಿಎಂ ಯಡಿಯೂರಪ್ಪ ಅವರ ಸರ್ಕಾರ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ವಿಸ್ತರಿಸಿದೆ ಎಂದರು.
ಜಿಲ್ಲಾ ಧಿಕಾರಿ ಕೆ.ಬಿ.ಶಿವಕುಮಾರ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ತಾಂತ್ರಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಶ್ರೀಕಾಂತ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ, ಜನಶಿಕ್ಷಣ ಸಂಸ್ಥೆ ನಿರ್ದೇಶಕಿ ಬಿ.ವೈ. ಅರುಣಾ ದೇವಿ, ಪ್ರಾಂಶುಪಾಲೆ ಉಮಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
MUST WATCH
ಹೊಸ ಸೇರ್ಪಡೆ
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.