ಅಕ್ರಮ ಮರಳು ವಹಿವಾಟು: ಎಚ್ಚೆತ್ತ ತಾಲೂಕಾಡಳಿತ
Team Udayavani, Jun 27, 2021, 9:59 PM IST
ಹೊಸನಗರ: ಸುತ್ತಾ ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ತಾಲೂಕು ಆಡಳಿತ ಕೂಡ ಎಚ್ಚೆತ್ತುಕೊಂಡಿದೆ. ತಹಶೀಲ್ದಾರ್ ವಿ.ಎಸ್. ರಾಜೀವ್ ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸಿದರು.
ಅಕ್ರಮ ಮರಳು ದಾಸ್ತಾನು ಮತ್ತು ಸಾಗಾಟದ ಬಗ್ಗೆ ಇರುವ ಆರೋಪದ ಕುರಿತಂತೆ ಪರಿಶೀಲನೆ ನಡೆಸಲಾಗುತ್ತಿದೆ. ಈ ವೇಳೆ ಮರಳು ದಾಸ್ತಾನು ಇರುವುದು ಕಂಡು ಬಂದಿದ್ದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಅಲ್ಲದೆ ಮರಳಿನ ಸೂಕ್ತ ರಕ್ಷಣೆಗಾಗಿ ಪೊಲೀಸ್ ಇಲಾಖೆಗೂ ಸೂಚಿಸಲಾಗಿದೆ ಎಂದರು. ಮಳೆಗಾಲ ಆರಂಭಗೊಂಡ ಹಿನ್ನೆಲೆಯಲ್ಲಿ ಈಗಾಗಲೇ ಸ್ಟಾಕ್ ಮಾಡಿರುವ ಮರಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ದೂರುಗಳು ಬಂದಿವೆ.
ಮರಳು ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಸರ್ಕಾರಿ ಬಳಕೆಗೆಂದು ತೆರಯಲಾಗಿರುವ ಮರಳು ಕ್ವಾರಿಯಲ್ಲಿ ರಾಜಾರೋಷವಾಗಿ ಅಕ್ರಮವಾಗಿ ಮರಳು ದಾಸ್ತಾನು ಮತ್ತು ಸಾಗಾಟ ದಂಧೆ ನಡೆಯುತ್ತಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದರು.
ಸುಮಾರು 2 ಸಾವಿರ ಲೋಡು ಮರಳನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ. ಸ್ಥಳದಲ್ಲಿ ಯಾವುದೇ ಸಿಸಿ ಕ್ಯಾಮೆರಾ, ಬೇಲಿ ಮೊದಲಾದ ವ್ಯವಸ್ಥೆಗಳಿಲ್ಲ. ಮಾನದಂಡಗಳನ್ನು ಮೀರಿ ಯಂತ್ರಗಳನ್ನು ಬಳಸಿ ಮರಳು ಸಂಗ್ರಹಿಸಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.