ದಮನಿತ ಮಹಿಳೆಯರ ವಸತಿಗಾಗಿ ಡಿಸಿಗಳಿಗೆ ಪತ್ರ


Team Udayavani, Jul 1, 2021, 10:30 PM IST

1-21

ಶಿವಮೊಗ್ಗ: ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರಿಗೆ ವಸತಿ ಸೌಲಭ್ಯ ಕಲ್ಪಿಸಲು ಸ್ಥಳ ನೀಡುವಂತೆ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಇದಕ್ಕೆ ಜಿಲ್ಲಾ ಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಶೀಘ್ರದಲ್ಲೇ ನಿಗಮಕ್ಕೆ ಜಾಗ ದೊರಕಲಿದೆ ಎಂಬ ವಿಶ್ವಾಸವಿದೆ ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ.ಟೆಂಗಳಿ ಹೇಳಿದರು. ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಬುಧವಾರ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಸತಿ ಸೌಲಭ್ಯಕ್ಕೆ ಮನವಿ: ದಮನಿತರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಮನೆಗಳನ್ನು ಕಟ್ಟಿಕೊಳ್ಳಲು ಜಾಗ ನೀಡುವಂತೆ ನಿಗಮದ ವತಿಯಿಂದ ಪ್ರತಿ ಜಿಲ್ಲೆಯ ಜಿಲ್ಲಾಧಿ ಕಾರಿಗಳಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳು ಅತ್ಯಂತ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, 5 ಎಕರೆ ಜಾಗ ನೀಡಲು ಒಪ್ಪಿದ್ದಾರೆ. ಶಿವಮೊಗ್ಗ ನಗರದಲ್ಲಿ ಸುಮಾರು 300 ದಮನಿತ ಮಹಿಳೆಯರು ಮತ್ತು 600 ಲಿಂಗತ್ವ ಅಲ್ಪಸಂಖ್ಯಾತರಿದ್ದು, ಇವರು ಸ್ವಾವಲಂಬಿಗಳಾಗಿ ಮತ್ತು ಗೌರವಯುತವಾಗಿ ಜೀವಿಸಲು ಸರ್ಕಾರ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಲಿಂಗತ್ವ ಅಲ್ಪಸಂಖ್ಯಾತರು ಇದರ ಪ್ರಯೋಜನ ಪಡೆದು ಭಿûಾಟನೆ ಮಾಡದಂತೆ ಮನವಿ ಮಾಡುತ್ತೇನೆ ಎಂದರು.

ನಿಗಮದ ವಿವಿಧ ಯೋಜನೆಗಳಾದ ಉದ್ಯೋಗಿನಿ, ಕಿರುಸಾಲ, ಸಮೃದ್ಧಿ, ಪ.ಜಾತಿ, ಪ.ಪಂ ಉಪಯೋಜನೆಗಳು, ಧನಶ್ರೀ, ಚೇತನ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳು ಒಳಗೊಂಡಂತೆ ಇತರೆ ಯೋಜನೆಗಳನ್ನು ದಮನಿತ, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದರು. ಘಟಕ ಸ್ಥಾಪನೆಗೆ ಧನಸಹಾಯ: ರಾಯಚೂರು, ವಿಜಯನಗರ ಜಿಲ್ಲೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಒಟ್ಟಾಗಿ ಉತ್ಪಾದಕ ಘಟಕಗಳನ್ನು ಸ್ಥಾಪಿಸಿ ನಡೆಸುತ್ತಿದ್ದಾರೆ. ಹೊಸಪೇಟೆಯಲ್ಲಿ ಸ್ಥಾಪಿಸಲಾಗಿರುವ ಶೇಂಗಾ ಚಿಕ್ಕಿ ತಯಾರಿಕಾ ಘಟಕ ಅತ್ಯಂತ ಯಶಸ್ವಿಯಾಗಿದೆ.

ಇದೇ ರೀತಿ ಈ ಜಿಲ್ಲೆಯಲ್ಲೂ ಸಹ ಯಾವುದಾದರೂ ಘಟಕ ಸ್ಥಾಪಿಸಲು ಮುಂದಾದಲ್ಲಿ ನಿಗಮದಿಂದ ಆರ್ಥಿಕ ಸೌಲಭ್ಯ ನೀಡಲಾಗುವುದು. ಅಲ್ಲದೆ ಘಟಕ ಸ್ಥಾಪನೆ ಬಗ್ಗೆ ತರಬೇತಿ ಸಹ ನಿಡಲಾಗುವುದು ಎಂದರು. ನಿಗಮದ ವತಿಯಿಂದ ಪ್ರತಿ ಜಿಲ್ಲೆಗಳಲ್ಲಿ ಒಂದೊಂದು ಸ್ವ ಸಹಾಯ ಘಟಕಗಳನ್ನು ಸ್ಥಾಪಿಸುವ ಉದ್ದೇಶ ಹೊಂದಿದ್ದು, ಇದನ್ನು ಸಾಕಾರಗೊಳಿಸಲು ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರು, ಮಾಜಿ ದೇವದಾಸಿಯರು ಸಂಘಟಿತರಾಗಿ ಮುಂದೆ ಬರಬೇಕೆಂದರು.

ಆನ್‌ಲೈನ್‌ ಅರ್ಜಿ : ನಿಗಮದ ವಿವಿಧ ಯೋಜನೆಗಳಡಿ ಸಾಲ ಪಡೆದಿರುವವರು ಸಾಲವನ್ನು ಸದುಪಯೋಗ ಮಾಡಿಕೊಳ್ಳುವುದರ ಜೊತೆಗೆ ಸಕಾಲದಲ್ಲಿ ಬ್ಯಾಂಕಿಗೆ ಸಾಲ ಮರು ಪಾವತಿ ಮಾಡಬೇಕು. ಆಗ ಬ್ಯಾಂಕ್‌ ನವರು ಕೂಡ ಉತ್ತಮವಾಗಿ ಸಹಕರಿಸುತ್ತಾರೆ. ಕಿರುಸಾಲ ಪಡೆದ ಬಹುತೇಕ ಫಲಾನುಭವಿಗಳು ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದ್ದಾರೆ. ಹೀಗೆ ಮರುಪಾವತಿ ಮಾಡಿದ ಮೇಲೆ ಮತ್ತೆ ಸಾಲದ ಅವಶ್ಯಕತೆ ಇದ್ದರೆ ತಾಲೂಕುಗಳ ಸಿಡಿಪಿಒ ಗಳು ಸಹಕರಿಸಬೇಕು. ಹಾಗೂ ಅವಶ್ಯಕತೆ ಇರುವವರಿಗೆ ಸಾಲ ದೊರಕಬೇಕೆಂಬ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಆನ್‌ಲೈನ್‌ ಅರ್ಜಿ ಸಲ್ಲಿಕೆ ವ್ಯವಸ್ಥೆ ಮಾಡಲಾಗುವುದು ಎಂದರು.

ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ರವರ ಸಹಕಾರವೂ ಇದಕ್ಕೆ ಅಗತ್ಯವಾಗಿದ್ದು, ಶಾಸಕರಿಂದ ನಿಗದಿತ ಅವ  ಧಿಯಲ್ಲಿ ಫಲಾನುಭವಿಗಳ ಆಯ್ಕೆಯ ಅನುಮೋದನೆ ಪಡೆದುಕೊಂಡು ಆಯಾ ಸಾಲಿನಲ್ಲೇ ಸೌಲಭ್ಯ ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ಅ ಧಿಕಾರಿಗಳಿಗೆ ಸೂಚನೆ ನೀಡಿದರು. ಮಹಿಳಾ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಸುರೇಶ್‌ ಸಿ. ನಿಗಮದ ವಿವಿಧ ಯೋಜನೆಗಳ ಕುರಿತು ಪ್ರಗತಿ ವರದಿ ಹಾಗೂ ತಾಲೂಕುಗಳ ಸಿಡಿಪಿಒ ಗಳು ತಾಲೂಕುಗಳ ಪ್ರಗತಿ ವರದಿ ಸಲ್ಲಿಸಿದರು.

ಲಿಂಗತ್ವ ಅಲ್ಪಸಂಖ್ಯಾತರೋರ್ವರು ಮಾತನಾಡಿ, ತಮ್ಮ ಸಮುದಾಯದಲ್ಲಿ ಕೆಲವರು ಒಟ್ಟಾಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇವೆ. ವೈಯಕ್ತಿಕವಾಗಿ ವಸತಿ ಸೌಲಭ್ಯ ಒದಗಿಸುವಂತೆ ಕಳೆದ 15 ವರ್ಷಗಳಿಂದ ಜಿಲ್ಲಾ ಧಿಕಾರಿಗಳಿಗೆ ಮನವಿ ಮಾಡುತ್ತಾ ಬಂದಿದ್ದೇವೆ. ಇದುವರೆಗೆ ಸೌಲಭ್ಯ ದೊರೆತಿಲ್ಲ. ಹಾಗೂ ನಮಗೆ ಸರ್ಕಾರಿ ಕಚೇರಿಗಳಲ್ಲಿ ಕೆಲಸ ನೀಡಬೇಕು. ಟ್ರಾನ್ಸ್‌ಜೆಂಡರ್‌ಗಳಿಗೆ ಕಚೇರಿಗಳಲ್ಲಿ ಸಹಾಯಕರು ಅಥವಾ ಇತರೆ ಕೆಲಸಗಳನ್ನು ನೀಡಲು ಸರ್ಕಾರಿ ಕಚೇರಿಗಳ ಅ ಧಿಕಾರಿಗಳು ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಅಧ್ಯಕ್ಷರು ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತ ಮಹಿಳೆಯರಿಗೆ ಸಾಲ ಸೌಲಭ್ಯ ಪ್ರಮಾಣ ಪತ್ರ ವಿತರಿಸಿದರು. ಜಿಲ್ಲಾ ಪಂಚಾಯತ್‌ ಸಿಇಒ ಎಂ.ಎಲ್‌. ವೈಶಾಲಿ, ಉಪ ಕಾರ್ಯದರ್ಶಿ ಜಯಲಕೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸುರೇಶ್‌.ಜಿ, ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಯತೀಶ್‌ ಎಂ.ಡಿ ಸೇರಿದಂತೆ ವಿವಿಧ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.