ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ
Team Udayavani, Jul 1, 2021, 10:46 PM IST
ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್, ವಿದ್ಯುತ್, ರಸಗೊಬ್ಬರ ಹಾಗೂ ದಿನ ನಿತ್ಯದ ವಸ್ತುಗಳ ಬೆಲೆ ಏರಿಸಿರುವುದನ್ನು ಖಂಡಿಸಿ ಮಾಜಿ ಶಾಸಕಿ ಶಾರದಾ ಪೂರ್ಯಾ ನಾಯಕ ನೇತೃತ್ವದಲ್ಲಿ ಶಿವಮೊಗ್ಗ ಗ್ರಾಮಾಂತರ ಘಟಕದ ಜೆಡಿಎಸ್ ಕಾರ್ಯಕರ್ತರು ಬುಧವಾರ ಜಿಲ್ಲಾ ಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಕೊರೊನಾ ಸೋಂಕು ಹಾಗೂ ಅದರ ನಿಯಂತ್ರಣಕ್ಕೆ ದೇಶ ಮತ್ತು ರಾಜ್ಯಾದ್ಯಂತ ವಿ ಧಿಸಲಾದ ಸಂಪೂರ್ಣ ಲಾಕ್‌ಡೌನ್ ನಿಂದ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರ ಜನಸಾಮಾನ್ಯರ, ರೈತರ ಕೂಲಿ ಕಾರ್ಮಿಕರ ಹಾಗೂ ಬಡವರ ಬದುಕಿನ ಮೇಲೆ ಬೆಲೆ ಏರಿಕೆಯ ಬರೆ ಏಳೆದಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸೋಂಕು ಹಾಗೂ ಲಾಕ್‌ಡೌನ್‌ನಿಂದಾಗಿ ರಾಜ್ಯದ ಲಕ್ಷಾಂತರ ಕುಟುಂಬಗಳಲ್ಲಿ ದುಡಿಯುವ ವ್ಯಕ್ತಿಗಳು ಮೃತಪಟ್ಟು ಕುಟುಂಬಗಳು ಬೀದಿ ಪಾಲಾಗಿವೆ. ಅಲ್ಲದೇ ಅನೇಕ ಕುಟುಂಬಗಳಲ್ಲಿ ತಂದೆ-ತಾಯಿ ಮೃತಪಟ್ಟು ಮಕ್ಕಳು ಅನಾಥ ರಾಗಿದ್ದಾರೆ. ಲಾಕ್‌ಡೌನ್‌ನಿಂದ ರೈತರು ಬೆಳೆದ ಆಹಾರ ಸಾಮಾಗ್ರಿ, ತರಕಾರಿ, ಹೂವು-ಹಣ್ಣು ಕಟಾವು ಮಾಡಿ ಅದನ್ನು ಮಾರುಕಟ್ಟಗೆ ಸಾಗಿಸಲಾಗದೆ ಪರದಾಡಿದ್ದಾರೆ.
ಅಲ್ಲದೆ ವರ್ತಕರು ಬೆಳೆ ಖರೀದಿಸದ್ದರಿಂದ ನಷ್ಟ ಅನುಭವಿಸಿ ನಿರ್ಗತಿಕರಾಗಿದ್ದಾರೆ. ಇಂತಹ ಸಮಯದಲ್ಲಿ ಬೆಲೆ ಏರಿಕೆ ಮಾಡಿದ್ದು ರೈತರ, ಬಡವರ ಬದುಕನ್ನೇ ಬುಡಮೇಲು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತೈಲ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳುವ ಮುನ್ನವೇ ರಾಜ್ಯ ಸರಕಾರ ವಿದ್ಯುತ್ ದರ ಏರಿಕೆ ಮಾಡಿದೆ. ಸರ್ಕಾರ ಇದನ್ನು ಪುನರ್ ವಿಮರ್ಶಿಸಿ ವಿದ್ಯುತ್ ದರ ಏರಿಕೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಗ್ರಾಮಾಂತರ ಜೆಡಿಎಸ್ ಕಾರ್ಯಾಧ್ಯಕ್ಷ ಕಾಂತರಾಜ್, ಎಪಿಎಂಸಿ ಸದಸ್ಯ ಎಸ್.ಎನ್.ಮಹೇಶ್, ದಾದಾಪೀರ್, ಕುಮಾರನಾಯ್ಕ, ಗೀತಾಸತೀಶ್, ನಾರಾಯಣಪುರ ಕುಮಾರ ನಾಯ್ಕ, ಸತೀಶ್‌ಗೌಡ, ಸುರೇಶ್, ಪ್ರಭಾಕರ್ ಬಾರಂಗಿ ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.