![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 29, 2021, 6:58 PM IST
ಶಿವಮೊಗ್ಗ: ಮಲೆನಾಡು ಅಭಿವೃದ್ಧಿ ಪ್ರಾ ಧಿಕಾರದ ವತಿಯಿಂದ ಹಾವೇರಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ನಿಗ ದಿಪಡಿಸಿದ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಪ್ರಾ ಧಿಕಾರದ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಅವರು ಆಯಾ ಜಿಲ್ಲೆಗಳ ಅ ಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕಚೇರಿ ಸಭಾಂಗಣದಲ್ಲಿ ಮಲೆನಾಡು ಅಭಿವೃದ್ಧಿ ಪ್ರಾಧಿ ಕಾರದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಕೈಗೊಂಡ ಕುರಿತು ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮ ಅನುಷ್ಠಾನಾ ಧಿಕಾರಿಗಳು ಕಾರ್ಯಕ್ಷೇತ್ರದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪೂರ್ಣವಾಗದಿರುವ 35 ಕಾಮಗಾರಿಗಳನ್ನು ಈ ಮಾಸಾಂತ್ಯದೊಳಗೆ ಪೂರ್ಣ ಗೊಳಿಸಲು ಹಾಗೂ ಪ್ರಸ್ತುತ ಅನುಮೋದನೆಗೆ ಸಲ್ಲಿಸುತ್ತಿರುವ 48 ಕಾಮಗಾರಿಗಳನ್ನು ಮಾರ್ಚ್ 2ನೇ ವಾರದೊಳಗಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು. ಒಟ್ಟಾರೆ 83 ಕಾಮಗಾರಿಗಳ ಬಾಕಿ ಉಳಿದ 7.93 ಕೋಟಿ ರೂ. ಗಳನ್ನು ಯಾವುದೇ ಕಾರಣಕ್ಕೂ ಹಿಂದಕ್ಕೆ ಹೋಗದಂತೆ ಸಕಾಲದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದರು. ಮಂಡಳಿಯ ಕಾರ್ಯದರ್ಶಿ ಕೆ.ಎಸ್. ಮಣಿ, ಪಂಚಾಯತ್ ಇಂಜಿನಿಯರಿಂಗ್ ವಿಭಾಗ ಮತ್ತಿತರ ಅಧಿಕಾರಿಗಳು ಇದ್ದರು.
ಓದಿ : ಜುಲೈ 16ರಂದು ವಿಶ್ವದಾದ್ಯಂತ ತೆರೆಗೆ ಅಪ್ಪಳಿಸಲಿದೆ ಕೆ.ಜಿ.ಎಫ್ -2
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
You seem to have an Ad Blocker on.
To continue reading, please turn it off or whitelist Udayavani.