ಕಳಪೆ ಕಾಮಗಾರಿ ಪರಿಶೀಲಿಸಲು ಸಮಿತಿ ರಚನೆ
Team Udayavani, Jul 6, 2021, 10:42 PM IST
ಶಿವಮೊಗ್ಗ: ಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಬಳಿ ಕೈಗೊಳ್ಳಲಾಗಿರುವ ಕಾಮಗಾರಿ ಗುಣಮಟ್ಟದ ಬಗ್ಗೆ ಬಂದಿರುವ ಆರೋಪಗಳ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ಮೂವರು ಸದಸ್ಯರ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.
ಸೋಮವಾರ ಭದ್ರಾ ಮೇಲ್ದಂಡೆ ಯೋಜನೆಯ ಕ್ರಸ್ಟ್ ಗ್ರೇಟ್ ಬಳಿ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, 2016-18 ನೇ ಸಾಲಿನಲ್ಲಿ 6.50 ಕೋಟಿ ರೂ. ವೆಚ್ಚದಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿತ್ತು. 2018 ರಲ್ಲಿ ಡ್ಯಾಮ್ ನಿಂದ ನೀರು ಹೊರಬಿಟ್ಟಾಗ ಕಾಮಗಾರಿ ಮತ್ತೆ ದುರಸ್ತಿ ಹಂತ ತಲುಪಿತು.
ಈ ಕುರಿತು ಸ್ಥಳೀಯರು ಮತ್ತು ರೈತ ಸಂಘಟನೆಗಳು 2016ರ ಕಾಮಗಾರಿ ಕಳಪೆಯದಾಗಿದ್ದು, ಇದರಲ್ಲಿ ಭಾಗಿಯಾಗಿದ್ದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಮೂವರು ನಿವೃತ್ತ ಇಂಜಿನಿಯರುಗಳ ಸಮಿತಿ ರಚಿಸಲಾಗಿದ್ದು, ಅವರು ಪರಿಶೀಲಿಸಿ ಕಾಮಗಾರಿ ಕಳಪೆಯದೋ ಅಥವಾ ಇದೊಂದು ನೈಸರ್ಗಿಕ ಅವಘಡವೋ ಎಂದು ವರದಿ ನೀಡಲಿದ್ದಾರೆ. ಅನಂತರ ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು, ರೈತ ಸಂಘಟನೆಗಳ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.