ರೈತ ಸಂಘ- ಹಸಿರು ಸೇನೆಯಿಂದ ಸತ್ಯಾಗ್ರಹ
ಸರ್ಕಾರ ಕೃಷಿ ಕಾಯ್ದೆ ತಿದ್ದುಪಡಿ ಹಿಂಪಡೆಯುವವರೆಗೂ ಹೋರಾಟ: ಎಚ್.ಆರ್. ಬಸವರಾಜಪ್ಪ
Team Udayavani, Jan 31, 2021, 5:49 PM IST
ಶಿವಮೊಗ್ಗ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಮಹಾತ್ಮ ಗಾಂ ಧೀಜಿ ಪುಣ್ಯತಿಥಿ ದಿನ ರಾಜ್ಯ ರೈತ ಸಂಘ ಹಸಿರು ಸೇನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಗಾಂಧಿ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು.
ನೇತೃತ್ವ ವಹಿಸಿದ್ದ ರಾಜ್ಯ ರೈತ ಸಂಘದ ನಾಯಕ ಎಚ್.ಆರ್. ಬಸವರಾಜಪ್ಪ ಮಾತನಾಡಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ರೈತರ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು. ರೈತರಿಗೆ ಮಾರಕವಾದ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸರಿಯಾಗಿ ಸ್ಪಂದಿಸಿಲ್ಲ. ಹಿಂಸೆಗೆ ಪ್ರಚೋದಿಸಿದರೆ ಪ್ರತಿಭಟನೆಗೆ ಹತ್ತಿಕ್ಕಬಹುದು ಎಂಬ ಉದ್ದೇಶದಿಂದ ಗಣರಾಜ್ಯೋತ್ಸವದ ದಿನ ಟ್ರಾಕ್ಟರ್ ರ್ಯಾಲಿ ನಡೆಯುವಾಗ ಹಿಂಸಾಚಾರ ನಡೆಸಲಾಗಿದೆ ಎಂದು ದೂರಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋ ಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಹೋರಾಟ ಮುಂದುವರೆಸಲಾಗಿದೆ. ಚರ್ಚೆಗಾಗಿ ಹಲವು ಸಲ ಸಭೆ ನಡೆಸಿದ್ದರೂ ಸರ್ಕಾರ ಕಾಯ್ದೆ ಹಿಂಪಡೆಯಲು ಸಮ್ಮತಿಸಿಲ್ಲ. ಅಂಬಾನಿ ಅದಾನಿಯಂತಹ ಕಂಪನಿಗಳಿಗೆ ಅನುಕೂಲವಾಗುವಂತಹ ಕಾಯ್ದೆಗಳನ್ನು ರೂಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸತ್ಯಾಗ್ರಹದಲ್ಲಿ ಎನ್.ರಮೇಶ್, ಕೆ.ಎಲ್. ಅಶೋಕ್, ಟಿ.ಎಚ್. ಹಾಲೇಶಪ್ಪ, ಚಂದ್ರಪ್ಪ, ಶಿವಮೂರ್ತಿ, ಈಶಣ್ಣ, ಸೇರಿದಂತೆ ಹಲವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ripponpet ಬೀದಿ ನಾಯಿ ಕೊಂದು ಆಟೋಗೆ ಕಟ್ಟಿಕೊಂಡು ಎಳೆದೊಯ್ದ ಕ್ರೂರಿ
Shimoga: ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ
ಅಡಿಕೆ ಬೆಳೆಗಾರರು ಆತಂಕವಿಲ್ಲದೆ ಕೃಷಿಯಲ್ಲಿ ತೊಡಗಿಕೊಳ್ಳಿ: ಶಿವರಾಜ್ ಸಿಂಗ್ ಚೌಹಾಣ್
Sagara: ಜ. 22ರಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಡಾಕ್ಟರೇಟ್ ಪ್ರದಾನ
ನಾನು ಪ್ರತಿಭಟನೆ, ಪಾದಯಾತ್ರೆ ಮಾಡಿದಷ್ಟು ಯಾವ ರಾಜಕಾರಣಿಯೂ ಮಾಡಿಲ್ಲ: ಕಿಮ್ಮನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.