ಇನ್ನೆರಡು ತಿಂಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ

Team Udayavani, Jul 12, 2021, 11:01 PM IST

12-23

ಶಿವಮೊಗ್ಗ: ಇನ್ನೆರಡು ತಿಂಗಳಲ್ಲಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೈಟೆಕ್‌ ಸ್ಪರ್ಶ ನೀಡಿ ಮೇಲ್ದರ್ಜೆಗೇರಿಸಲಾಗುವುದು ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ ನಾಯ್ಕ ತಿಳಿಸಿದರು.

ಹೊಳೆಹೊನ್ನೂರು ಪಟ್ಟಣ ಹಾಗೂ ಹೊಳಲೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್‌ ಕೇರ್‌ ವೈದ್ಯಕೀಯ ಉಪಕರಣ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಪಟ್ಟಣದಲ್ಲಿ ಸುಸಜ್ಜಿತ ಆರೋಗ್ಯ ಕೇಂದ್ರ ನಿರ್ಮಾಣದ ಕಾಮಗಾರಿಯೂ ಪೂರ್ಣಗೊಳ್ಳಲಿದೆ. ಇನ್ನೆರಡು ತಿಂಗಳಲ್ಲಿ ಆರೋಗ್ಯ ಕೇಂದ್ರವನ್ನು ಉದ್ಘಾಟನೆ ಮಾಡಲಾಗುವುದು ಜೊತೆಗೆ ಕೇಂದ್ರಕ್ಕೆ ಬೇಕಾಗುವ ಸಲಕರಣೆ, ಎಕ್ಸರೇ ಹಾಗೂ ಸ್ಕಾÂನಿಂಗ್‌ ವಿಭಾಗವನ್ನು ತಕ್ಷಣದಲ್ಲೇ ಪ್ರಾರಂಭ ಮಾಡಲಾಗುವುದು ಎಂದರು.

ಜಿಲ್ಲಾಸ್ಪತ್ರೆಯಲ್ಲಿ ಸಿಗುವ ಎಲ್ಲಾ ವ್ಯವಸ್ಥೆ ಈ ಭಾಗದಲ್ಲಿ ಸಿಗಬೇಕೆಂಬುದು ಸಾರ್ವಜನಿಕರ ಅಭಿಪ್ರಾಯವಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದೊಂದು ಸುಸಜ್ಜಿತ ಆರೋಗ್ಯ ಕೇಂದ್ರವಾಗಿ ನಿರ್ಮಾಣವಾಗುವುದರಲ್ಲಿ ಸಂದೇಹ ಬೇಡ ಎಂದರು.

ಗ್ರಾಮಾಂತರ ಕೇತ್ರದಲ್ಲಿ ಬಡವರು, ಕೂಲಿ ಕಾರ್ಮಿಕರು ಹಾಗೂ ರೈತರು ಹೆಚ್ಚಾಗಿದ್ದು, ಅವರಿಗೆ ಸರಿಯಾದ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ವೈದ್ಯರು ಶ್ರಮ ವಹಿಸಬೇಕಾಗಿದೆ.ತಜ್ಞರ ಪ್ರಕಾರ ಕೊರೊನಾ 3ನೇ ಅಲೆ ಎದುರಾಗಲಿದೆ ಎನ್ನಲಾಗುತ್ತಿದ್ದು, ಅದಕ್ಕೆ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದಲೇ ಎಲ್ಲಾ ರೀತಿಯಾಗಿ ಆರೋಗ್ಯ ಕೇಂದ್ರಗಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದರು.

ತಾಲೂಕು ವೈದ್ಯಾಧಿಕಾರಿ ಡಾ|ಅಶೋಕ್‌ ಮಾತನಾಡಿ ಸಮುದಾಯ ಆರೋಗ್ಯಕೇಂದ್ರ ಯಾವುದೇ ಖಾಸಗಿ ಆಸ್ಪತ್ರೆಗೂ ಕಡಿಮೆಯಿಲ್ಲ. ಶಾಸಕರ ಅನುದಾನದಲ್ಲಿ ಈಗಾಗಲೇ ಸುಮಾರು 4 ಕೊಠಡಿಗಳನ್ನು ಕೋವಿಡ್‌ ಸೆಂಟರ್‌ ಚಿಕಿತ್ಸೆಗೆ ಬಳಸಲಾಗುತ್ತಿದೆ. ಅಲ್ಲದೇ ಐಸಿಯೂ ಕೂಡ ಲಭ್ಯವಿದೆ ಎಂದರು.

ಕಾರ್ಯನಿರ್ವಹಣಾಧಿಕಾರಿ ರಮೇಶ್‌, ಸಬ್‌ ಇನ್ಸ್‌ ಪೆಕ್ಟರ್‌ ಲಕ್ಷಿಪತಿ, ಡಾ| ದೇವಾನಂದ್‌, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ಟಾನಿ ಫನಾಂಡಿಸ್‌, ಬಿಜೆಪಿ ಮುಖಂಡರಾದ ಸಿದ್ದಪ್ಪ, ಸುಮ, ಶಾಂತಮ್ಮ, ಓಂಕಾರ್‌ ಮೂರ್ತಿ, ರವಿಕುಮಾರ್‌, ಹನುಮಂತ ಸೇರಿದಂತೆ ಸಮುದಾಯ ಕೇಂದ್ರದ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

Bigg Boss Telugu 8: ಬಿಗ್‌ಬಾಸ್‌ ತೆಲುಗು ಗೆದ್ದ ಮೈಸೂರಿನ ಹುಡುಗ: ಯಾರು ಈ ನಿಖಿಲ್?

Bigg Boss Telugu 8: ಬಿಗ್‌ಬಾಸ್‌ ತೆಲುಗು ಗೆದ್ದ ಮೈಸೂರಿನ ಹುಡುಗ: ಯಾರು ಈ ನಿಖಿಲ್?

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

Someshwar Beach: ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

PMML: Return Nehru’s letter collection: Centre’s letter to Rahul

PMML: ನೆಹರು ಅವರ ಪತ್ರ ಸಂಗ್ರಹವನ್ನು ಮರಳಿಸಿ: ರಾಹುಲ್‌ ಗೆ ಕೇಂದ್ರದ ಪತ್ರ

Chhattisgarh: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ

Road Mishap: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ

Vijay Diwas:ಕೋಲ್ಕತ್ತಾಗೆ ಮರಳಲಿದೆ ಬಾಂಗ್ಲಾ ಸ್ವಾತಂತ್ರ್ಯ ಹಬ್ಬ-ಇಂದಿನ ಸ್ಥಿತಿಗತಿ ಹೇಗಿದೆ

Vijay Diwas:ಕೋಲ್ಕತ್ತಾಗೆ ಮರಳಲಿದೆ ಬಾಂಗ್ಲಾ ಸ್ವಾತಂತ್ರ್ಯ ಹಬ್ಬ-ಇಂದಿನ ಸ್ಥಿತಿಗತಿ ಹೇಗಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

9

BJP: ಜನವರಿಯಲ್ಲಿ ರಾಜ್ಯಾಧ್ಯಕ್ಷರ ಬದಲು; ಕುಮಾರ ಬಂಗಾರಪ್ಪ

car-parkala

Sagara: ಪ್ರವಾಸಿ ಬಸ್ ಅಪಘಾತ; 15ಕ್ಕೂ ಹೆಚ್ಚು ಮಂದಿಗೆ ಗಾಯ

11-anandpura

Anandapura: ಮದುವೆಯಾಗಿಲ್ಲವೆಂದು ಮನನೊಂದು ಯುವಕ ನೇಣಿಗೆ ಶರಣು

11-

ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಗುಂಡಿ; ಗ್ರಾಮಸ್ಥರ ಆಕ್ರೋಶ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

ಆಳ್ವಾಸ್‌ ವಿರಾಸತ್‌ಗೆ ತೆರೆ; ಮೂಡುಬಿದಿರೆಯಲ್ಲಿ 6 ದಿನ ಕಳೆಗಟ್ಟಿದ್ದ ಸಂಭ್ರಮ

ಆಳ್ವಾಸ್‌ ವಿರಾಸತ್‌ಗೆ ತೆರೆ; ಮೂಡುಬಿದಿರೆಯಲ್ಲಿ 6 ದಿನ ಕಳೆಗಟ್ಟಿದ್ದ ಸಂಭ್ರಮ

Bigg Boss Telugu 8: ಬಿಗ್‌ಬಾಸ್‌ ತೆಲುಗು ಗೆದ್ದ ಮೈಸೂರಿನ ಹುಡುಗ: ಯಾರು ಈ ನಿಖಿಲ್?

Bigg Boss Telugu 8: ಬಿಗ್‌ಬಾಸ್‌ ತೆಲುಗು ಗೆದ್ದ ಮೈಸೂರಿನ ಹುಡುಗ: ಯಾರು ಈ ನಿಖಿಲ್?

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

Someshwar Beach: ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.