ವಿದ್ಯಾರ್ಥಿಗಳೇ ಭಯಬಿಟ್ಟು ಪರೀಕ್ಷೆಗೆ ಹಾಜರಾಗಿ
Team Udayavani, Jul 14, 2021, 9:37 PM IST
ಶಿವಮೊಗ್ಗ: ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷ ನೂತನವಾಗಿ ಬಹು ಆಯ್ಕೆ ಮಾದರಿಯಂತೆ ಜು. 19 ಮತ್ತು 22 ರಂದು ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಯಾವುದೇ ಅಡ್ಡಿ-ಆತಂಕಗಳಿಲ್ಲದಂತೆ ಯಶಸ್ವಿಯಾಗಿ ನಡೆಸಲು ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿ.ಪಂ ಸಿಇಒ ಎಂ.ಎಲ್. ವೈಶಾಲಿ ತಿಳಿಸಿದರು.
ಮಂಗಳವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಸಿದ್ದತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ಕಳೆದ ಬಾರಿಯೂ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಈ ಬಾರಿಯೂ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ. ಮಕ್ಕಳು ನಿರಾತಂಕವಾಗಿ ಪರೀಕ್ಷೆ ಎದುರಿಸುವ ವಾತಾವರಣ ನಿರ್ಮಿಸಲು ಮುಂದಾಗಲಾಗಿದೆ ಎಂದರು.
ಮಂಡಳಿ ಮಾರ್ಗಸೂಚಿಯನುಸಾರ ಪ್ರತಿ ತಾಲೂಕುವಾರು ಪರೀûಾ ಕೇಂದ್ರಗಳನ್ನು ಗುರುತಿಸಲಾಗಿದ್ದು ಜಿಲ್ಲೆಯಲ್ಲಿ ಒಟ್ಟು 150 ಪರೀಕ್ಷಾ ಕೇಂದ್ರ ಗುರುತಿಸಲಾಗಿದೆ. ಮಂಡಳಿಯಿಂದ ನೀಡಲಾದ ಎಸ್.ಒ.ಪಿ (ಸ್ಟಾÂಂಡರ್ಡ್ ಆಪರೇಟಿಂಗ್ ಪ್ರೊಸಿಜರ್) ಅನುಸಾರ ಪರೀûಾ ಕೇಂದ್ರಗಳಲ್ಲಿ ಆಸನ ವ್ಯವಸ್ಥೆ, ವಿಶೇಷ ಕೊಠಡಿಗಳು, ಆರೋಗ್ಯ ತಪಾಸಣಾ ಕೌಂಟರ್‌ಗಳನ್ನು ತೆರೆಯಲು ಈಗಾಗಲೇ ಸಂಬಂ ಧಿಸಿದ ಅ ಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಪ್ರತಿ ಪರೀûಾ ಕೇಂದ್ರದಲ್ಲಿ ಥರ್ಮಲ್ ಸ್ಕಾನರ್, ಪಲ್ಸ್ ಆಕ್ಸಿಮೀಟರ್ ಮತ್ತು ಪ್ರಥಮ ಚಿಕಿತ್ಸಾ ಪೆಟ್ಟಿಗೆ ವ್ಯವಸ್ಥೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ನೇಮಕಾತಿಯೊಂದಿಗೆ ಆರೋಗ್ಯ ತಪಾಸಣಾ ಕೌಂಟರ್ ಸ್ಥಾಪಿಸುವಂತೆ ಡಿಎಚ್‌ಒ ರವರಿಗೆ ಸೂಚನೆ ನೀಡಿದರು.
ಕೇಂದ್ರ ವ್ಯವಸ್ಥೆ: ಪ್ರತಿ ಕೇಂದ್ರವನ್ನು ಮತ್ತು ಪೀಠೊಪಕರಣಗಳನ್ನು ಪರೀಕ್ಷೆಯ ಮುನ್ನ ಮತ್ತು ಪರೀಕ್ಷೆ ಮುಗಿದ ನಂತರ ಸೋಂಕು ನಿವಾರಕ ದ್ರಾವಣದಿಂದ ಶುದ್ಧಗೊಳಿಸಲು ನಗರ/ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ತಿಳಿಸಲಾಗಿದೆ. ಕೇಂದ್ರದ ಪ್ರವೇಶ ದ್ವಾವರದಲ್ಲಿಯೇ ಆರೋಗ್ಯ ತಪಾಸಣಾ ಕೌಂಟರ್ ಸ್ಥಾಪಿಸಲಾಗುವುದು. ವೈದ್ಯಕೀಯ/ಆಶಾ ಕಾರ್ಯಕರ್ತೆಯರು ತಪಾಸಣೆ ನಡೆಸಲಿದ್ದಾರೆ ಎಂದರು.
ಆರು ಅಡಿ ಅಂತರ ಕಡ್ಡಾಯ: ಪ್ರತಿ ಕೇಂದ್ರದಲ್ಲೂ ಆರು ಅಡಿ ಅಥವಾ 2 ಮೀಟರ್ ದೈಹಿಕ ಅಂತರ ಕಾಯ್ದುಕೊಳ್ಳಲು ಸೂಕ್ತ ವ್ಯವಸ್ಥೆ ಮಾಡುವಂತೆ ಬಿಇಒ ರವರಿಗೆ ಸೂಚಿಸಲಾಗಿದೆ. ಒಂದು ಡೆಸ್ಕ್ಗೆ ಒಬ್ಬ ವಿದ್ಯಾರ್ಥಿಯಂತೆ ಒಂದು ಕೊಠಡಿಯಲ್ಲಿ ಗರಿಷ್ಟ 12 ಮಕ್ಕಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಾಲೂಕು ಕೇಂದ್ರಕ್ಕೆ ಹೋಗದಂತೆ ಪರೀûಾ ಕೇಂದ್ರ ರಚಿಸಲು ಸೂಚಿಸಲಾಗಿದೆ.
ಮುಂಚಿತವಾಗಿ ಸೂಚನೆ: ಆಸನ ವ್ಯವಸ್ಥೆ ಬಗ್ಗೆ ಮುಂಚಿತವಾಗಿ ತಿಳಿಸುವುದರಿಂದ ಮಕ್ಕಳು ಸೂಚನಾ ಫಲಕದ ಮುಂದೆ ಗುಂಪುಗೂಡುವುದನ್ನು ತಡೆಗಟ್ಟಬಹುದಾಗಿದ್ದು, ಇದರ ವ್ಯವಸ್ಥೆ ಮಾಡಲಾಗಿದೆ. ಹಾಗೂ ಪರೀûಾ ವಿವರಗಳ ಸೂಚನೆಗಳನ್ನು ಕೇಂದ್ರದ ಎರಡು ಮೂರು ಕಡೆ ಪ್ರಕಟಿಸಲು ತಿಳಿಸಲಾಗಿದೆ. ವಿದ್ಯಾರ್ಥಿಗಳು ಮನೆಯಿಂದ ನೀರಿನ ಬಾಟಲಿ ಮತ್ತು ಅಪೇಕ್ಷೆ ಪಟ್ಟಲ್ಲಿ ಮನೆಯಿಂದ ಆಹಾರದ ಡಬ್ಬಿ ತರಲು ಅವಕಾಶವಿದೆ. ಕೇಂದ್ರಕ್ಕೆ ಬರಲು ಸಾರಿಗೆ ಸಂಪರ್ಕ ತೊಂದರೆ ಇರುವ ಮಕ್ಕಳನ್ನು ಗುರುತಿಸಿ ಕರೆತರಲು ವ್ಯವಸ್ಥೆ ಮಾಡುವಂತೆ ಬಿಇಒಗಳಿಗೆ ಸೂಚಿಸಿದರು.
ವಿಶೇಷ ಮತ್ತು ಕಾಯ್ದಿರಿಸಿದ ಕೇಂದ್ರ: ಕೆಮ್ಮು, ನೆಗಡಿ, ಜ್ವರ ಮೊದಲಾದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಕನಿಷ್ಟ ಎರಡು ಕೊಠಡಿಗಳನ್ನು ವಿಶೇಷ ಕೊಠಡಿಗಳೆಂದು ಹೆಸರಿಸಿ ಕಾಯ್ದಿರಿಸಲಾಗುವುದು. ಹಾಗೂ ತಾಲೂಕಿನ ಕೇಂದ್ರ ಸ್ಥಾನ ಮತ್ತು ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಕನಿಷ್ಟ ಎರಡು ಹೆಚ್ಚುವರಿ ಕೇಂದ್ರಗಳನ್ನು ಗುರುತಿಸಿ ಅವುಗಳನ್ನು “ಕಾಯ್ದಿರಿಸಿದ ಕೇಂದ್ರಗಳಾಗಿ ಇಡಲಾಗುವುದು. ಕೆಮ್ಮು ನೆಗಡಿ, ಜ್ವರ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ತಪಾಸಣೆಗೂ ಮುನ್ನ ಕಡ್ಡಾಯವಾಗಿ ಎನ್95 ಮಾಸ್ಕ್ ನೀಡಲಾಗುವುದು. ಪ್ರತಿ ತಾಲೂಕಿನಲ್ಲಿ ಒಂದು ಆ್ಯಂಬುಲೆನ್ಸ್ ಸೇವೆಗೆ ಸಜ್ಜಾಗಿಡುವಂತೆ ಡಿಎಚ್‌ಒ ಅವರಿಗೆ ಸೂಚನೆ ನೀಡಿದರು.
ಆಕ್ಸಿಜನ್ ಸ್ಯಾಚುರೇಷನ್ ಮಟ್ಟ ಶೇ.94 ಗಿಂತ ಕಡಿಮೆ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಮುಂದಿನ ವೈದ್ಯಕೀಯ ಚಿಕಿತ್ಸೆಗೆ ಕಳುಹಿಸಲಾಗುವುದು. ಕೆಮ್ಮು ನೆಗಡಿ, ಜ್ವರ ಇದ್ದು ಆಕ್ಸಿಜನ್ ಸ್ಯಾಚುರೇಷನ್ ಶೇ.94 ಕ್ಕಿಂತ ಕಡಿಮೆ ಇದ್ದಲ್ಲಿ “ವಿಶೇಷ ಕೊಠಡಿ’ಯಲ್ಲಿ ಕೂಡ್ರಿಸಿ ಪರೀಕ್ಷೆ ನಡೆಸಲಾಗುವುದು. ಒಂದು ವೇಳೆ ವಿದ್ಯಾರ್ಥಿ ಈಗಾಗಲೇ ಕೋವಿಡ್ ಪಾಸಿಟಿವ್ ಇದ್ದು ಗೈರಾದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಬರೆಯಲು ಅವಕಾಶ ನೀಡಿ ಅದನ್ನು ಪ್ರಥಮ ಅವಕಾಶವೆಂದು ಪರಿಗಣಿಸಲಾಗುವುದು. ಮೇಲ್ವಿಚಾರಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಫೇಸ್‌ಶೀಲ್ಡ್ ಹಾಕಿಕೊಳ್ಳಬೇಕು. ಮಕ್ಕಳಿಗೆ ನೀರು ಕುಡಿಯಲು ಬಳಸಿ ಬಿಸಾಡಬಹುದಾದ ಲೋಟಗಳ ವ್ಯವಸ್ಥೆ ಮಾಡಬೇಕು. ಶೌಚಾಲಯಲ್ಲಿ ಲಿಕ್ವಿಡ್ ಸೋಪ್ ಇಡಬೇಕು. ಹಾಗೂ ವಿಕಲಚೇತನ ಮಕ್ಕಳಿಗೆ ಉತ್ತಮ ಆಸನ ವ್ಯವಸ್ಥೆ ಮಾಡಬೇಕು.
ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲನೆ ನಡೆಸಬೇಕು ಎಂದರು. ಡಿಡಿಪಿಐ ಎನ್.ಎಂ. ರಮೇಶ್ ಮಾತನಾಡಿ, ಎಲ್ಲ ಪರೀûಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು, ಸಿಬ್ಬಂದಿ, ಮಾರ್ಗಾಧಿ ಕಾರಿಗಳು, ಸ್ಥಾನಿಕ ಜಾಗೃತ ದಳದ ಅಧಿ ಕಾರಿಗಳು, ವೀಕ್ಷಕರು ಹಾಗೂ ಅಗತ್ಯ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಲಸಿಕೆ ಮತ್ತು ಕೋವಿಡ್ ಪರೀಕ್ಷೆ ಕಡ್ಡಾಯ: ಕಾರ್ಯದಲ್ಲಿ ಪಾಲ್ಗೊಳ್ಳುವ ಅ ಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಕನಿಷ್ಟ ಒಂದು ಡೋಸ್ ಲಸಿಕೆ ಪಡೆದಿರಬೇಕು ಹಾಗೂ ಆ ಸಂದರ್ಭಕ್ಕೆ ಅನುಗುಣವಾಗಿ ಆರ್.ಎ.ಟಿ ಅಥವಾ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಪಾಸಿಟಿವ್ ಬಂದರೆ ಅಂತಹವರು ಪರೀಕ್ಷೆ ವೇಳೆ ಕರ್ತವ್ಯಕ್ಕೆ ಹಾಜರಾಗುವಂತಿಲ್ಲ. ಬದಲಿ ವ್ಯವಸ್ಥೆ ಮಾಡಲಾಗುವುದು. ಪರೀûಾ ಕಾರ್ಯಕ್ಕೆ 3967 ಸಿಬ್ಬಂದಿಗಳನ್ನು ನಿಯೋಜಿಸಿದ್ದು ಇವರೆಲ್ಲರೂ ಪ್ರಥಮ ಡೋಸ್ ಲಸಿಕೆ ಪಡೆದಿದ್ದು ಈ ಪೈಕಿ 746 ಮಂದಿ ಎರಡನೇ ಡೋಸ್ ಸಹ ಪಡೆದಿದ್ದಾರೆ ಎಂದು ತಿಳಿಸಿದರು.
ಜುಲೈ 14 ಮತ್ತು 15 ರಂದು ಅಣಕು ಪರೀಕ್ಷೆ : ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.14 ಮತ್ತು 15 ರಂದು ಅಣಕು ಪರೀಕ್ಷೆ ನಡೆಸಲು ತಿಳಿಸಿದ್ದು, ಅಣಕು ಪರೀಕ್ಷೆ ಕಡ್ಡಾಯವಲ್ಲ ಎಂಬುದನ್ನೂ ಸೂಚಿಸಿದೆ. ಆದ್ದರಿಂದ ಸ್ವಯಂ ಆಸಕ್ತಿಯಿಂದ ಪರೀಕ್ಷೆ ಬರೆಯಲು ಮುಂದೆ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಲಾಗುವುದು ಎಂದರು.
ಅಪರ ಜಿಲ್ಲಾ ಧಿಕಾರಿ ಅನುರಾಧಾ ಜಿ. ಮಾತನಾಡಿ, ಪ್ರತಿ ತಾಲೂಕು ಕೇಂದ್ರಕ್ಕೆ ಒಂದು ಕೋವಿಡ್ ಕೇರ್ ಸೆಂಟರ್ ಗುರುತಿಸಲಾಗಿದ್ದು, ಕೋವಿಡ್ ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಆಯಾ ತಾಲೂಕು ಕೋವಿಡ್ ಕೇರ್ ಸೆಂಟರ್‌ನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುವುದು ಎಂದರು.
ಡಿಎಚ್‌ಒ ಡಾ|ರಾಜೇಶ್ ಸುರಗಿಹಳ್ಳಿ ಮಾತನಾಡಿ, ಪ್ರತಿ ತಾಲೂಕುಗಳಲ್ಲಿ ಒಂದು ತುರ್ತು ಚಿಕಿತ್ಸಾ ವಾಹನ, ಪ್ರತಿ ಕೇಂದ್ರದಲ್ಲಿ ಸಿಬ್ಬಂದಿಯೊಂದಿಗೆ ಆರೋಗ್ಯ ತಪಾಸಣಾ ಕೌಂಟರ್ ತೆರೆದು ತಪಾಸಣೆ ನಡೆಸಲಾಗುವುದು. ತಾಲೂಕುಗಳಲ್ಲಿ ರ್ಯಾಪಿಡ್ ರೆಸ್ಪಾನ್ಸ್ ತಂಡ ಮತ್ತು ತಾಲೂಕು ವೈದ್ಯಾಧಿ ಕಾರಿಗಳೊಂದಿಗೆ ಬಿಇಒ ಸಂಪರ್ಕದಲ್ಲಿರಬೇಕು ಎಂದ ಅವರು ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಒಟ್ಟುಗೂಡಿ ಪರೀಕ್ಷೆ ಯಶಸ್ವಿಗೊಳಿಸಲಾಗುವುದು ಎಂದರು. ಡಿವೈಎಸ್‌ಪಿ ಪ್ರಶಾಂತ್ ಮುನ್ನೋಳಿ ಮಾತನಾಡಿ, ಎಲ್ಲಾ ಕೇಂದ್ರಗಳಿಗೆ ಮಹಿಳಾ ಮತ್ತು ಪುರುಷ ಪೇದೆಗಳನ್ನು ನಿಯೋಜಿಸಲಾಗುವುದು. ಹಾಗೂ ಎಸ್‌ಓಪಿ ಪ್ರಕಾರ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಡಯಟ್ ಪ್ರಾಚಾರ್ಯರಾದ ಬಸವರಾಜಪ್ಪ, ಜಿಲ್ಲಾ ಖಜಾನಾ ಧಿಕಾರಿ ಎಚ್.ಎಸ್. ಸಾವಿತ್ರಿ, ಜಿಲ್ಲಾ ಶಿಕ್ಷಣಾ ಧಿಕಾರಿ ಹಾಗೂ ಎಸ್‌ಎಸ್‌ಎಲ್‌ಸಿ ನೋಡಲ್ ಅ ಧಿಕಾರಿ ಎಚ್.ಆರ್.ಕೃಷ್ಣಮೂರ್ತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.