23ರಿಂದ ಭದ್ರಾ ಕಾಲುವೆಗಳಿಗೆ ನೀರು
Team Udayavani, Jul 16, 2021, 9:46 PM IST
ಶಿವಮೊಗ್ಗ: ಭದ್ರಾ ಜಲಾಶಯ ಅಚ್ಚುಕಟ್ಟು ಪ್ರದೇಶದ ಮುಂಗಾರು ಹಂಗಾಮಿನ ಬೆಳೆಗಳಿಗಾಗಿ ಬಲದಂಡೆ ಮತ್ತು ಎಡದಂಡೆ ಕಾಲುವೆ ಹಾಗೂ ಶಾಖಾ ನಾಲೆಗಳಿಗೆ ಜು.23 ರ ಮಧ್ಯರಾತ್ರಿಯಿಂದ 120 ದಿನ ನೀರು ಹರಿಸಲು ನಿರ್ಧರಿಸಲಾಗಿದೆ. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆ ವಹಿಸಿದ್ದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಮಾತನಾಡಿ ನೀರಾವರಿ ಸಲಹಾ ಸಮಿತಿಯ ಸರ್ವ ಸದಸ್ಯರು ಹಾಗೂ ರೈತರೊಂದಿಗೆ ಚರ್ಚೆ ನಡೆಸಿ ಒಮ್ಮತದಿಂದ ಭದ್ರಾ ಬಲದಂಡೆ, ಎಡದಂಡೆ ನಾಲೆ, ಆನವೇರಿ, ದಾವಣಗೆರೆ, ಮಲೆಬೆನ್ನೂರು ಮತ್ತು ಹರಿಹರ ಶಾಖಾನಾಲೆಗಳಲ್ಲಿ ಜು. 23 ರಿಂದ ನೀರು ಹರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಜು.14 ರಂದು ಜಲಾಶಯದಲ್ಲಿ 157 ಅಡಿ 4 ಇಂಚುಗಳಷ್ಟು ನೀರು ಸಂಗ್ರಹವಿದೆ.
ಈ ಮಟ್ಟಕ್ಕೆ ನೀರಿನ ಸಂಗ್ರಹಣೆ 40.484 ಟಿಎಂಸಿ ಇದೆ. ಇದರಲ್ಲಿ 8.50 ಟಿ.ಎಂ.ಸಿ ಬಳಕೆಗೆ ಬಾರದ (ಡೆಡ್ ಸ್ಟೋರೇಜ್) ಪ್ರಮಾಣವಾಗಿದ್ದು, 26.652 ಟಿಎಂಸಿ ಬಳಕೆಗೆ ಬರುವ ನೀರಿನ ಪ್ರಮಾಣವಾಗಿದೆ. ಭದ್ರಾ ಬಲದಂಡೆ ಕಾಲುವೆಗೆ ಪ್ರತಿದಿನ ಸರಾಸರಿ 3050 ಕ್ಯೂಸೆಕ್ ಮತ್ತು ಭದ್ರಾ ಎಡದಂಡೆ ಕಾಲುವೆಗೆ 490 ಒಟ್ಟು 3540 ಕ್ಯೂಸೆಕ್ ನೀರು ಹರಿಸಲು ಬೇಡಿಕೆ ಇದೆ. ಪ್ರಸ್ತುತ ಜಲಾಶಯದಲ್ಲಿ ಬಳಕೆಗೆ 26.652 ಟಿಎಂಸಿ ನೀರು ಲಭ್ಯವಿದ್ದು ಮುಂಗಾರು ಅವ ಧಿಗೆ 49.13 ಟಿಎಂಸಿ ನೀರಿನ ಅವಶ್ಯಕತೆ ಇದೆ.
ಕೊರತೆಯಿರುವ ನೀರಿನ ಪ್ರಮಾಣ 22.478 ಟಿಎಂಸಿ, ಆಗಿದ್ದು ಇದರ ಆಧಾರದಲ್ಲಿ ಎಲ್ಲರ ಸದಸ್ಯರು ಚರ್ಚಿಸಿ ಜು.23 ರಿಂದ ನೀರು ಹರಿಸಲು ನಿರ್ಧರಿಸಿದ್ದೇವೆ ಎಂದರು. ಸಲಹಾ ಸಮಿತಿ ಸದಸ್ಯ ಷಡಾಕ್ಷರಪ್ಪ ಮಾತನಾಡಿ, ನೀರಾವರಿ ಸಲಹಾ ಸಮಿತಿ ಸಭೆ ಕರೆಯದೆ, ಚರ್ಚೆ ಮಾಡದೇ ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಅ ಕಾರಿಗಳೇ ನೀರು ಬಿಡುವುದಾದರೆ ಸಮಿತಿ ಇದ್ದು ಉಪಯೋಗವೇನು? ಜು. 6 ರ ಸರ್ಕಾರಿ ಆದೇಶದ ಪ್ರಕಾರ ಜು.7 ರಿಂದ (ಅಕ್ಟೋಬರ್ 15 ರವರಗೆ) ಪ್ರತಿ ದಿನ ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ ನೀರನ್ನು ಹರಿಸಲಾಗುತ್ತಿದೆ. ಮಳೆ ಅಭಾವದಿಂದ ಜಲಾಶಯದಲ್ಲಿ ಒಳಹರಿವಿನ ಪ್ರಮಾಣ ಕಡಿಮೆ ಇದ್ದು ಈ ಭಾಗದ ರೈತರೇ ಕಷ್ಟಪಡುತ್ತಿರುವಾಗ ಹೀಗೆ ಏಕಾಏಕಿ ಅಧಿಧೀಕ್ಷಕ ಅಭಿಯಂತರರೇ ನೀರು ಹರಿಸಲು ಮುಂದಾಗಿದ್ದು ಸೂಕ್ತವಲ್ಲ ಎಂದು ದೂರಿದರು.
ಇದಕ್ಕೆ ಇತರೆ ಸದಸ್ಯರೂ ಧ್ವನಿಗೂಡಿಸಿ, ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣಕ್ಕೆ ಅನುಗುಣವಾಗಿ ನೀರು ಹರಿಸಬೇಕು ಎಂದು ಸರ್ಕಾರಿ ಆದೇಶದಲ್ಲಿ ಇದೆ. ನೀರು ಕಡಿಮೆ ಇದ್ದರೆ ನೀರು ಕೊಡುವ ಅವಶ್ಯಕತೆ ಇಲ್ಲ. ನೀರು ಹರಿಸುವ ವಿಚಾರವಾಗಿ ಸಲಹಾ ಸಮಿತಿಯ ತುರ್ತು ಸಭೆ ಕರೆಯದೇ ಅ ಧಿಕಾರಿಗಳೇ ತೀರ್ಮಾನ ಕೈಗೊಂಡಿದ್ದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ತ್ಯಾವಣಿಗಿ ಉಪವಿಭಾಗದ ಸದಸ್ಯರಾದ ತೇಜಸ್ವಿ ಪಟೇಲ್ ಮಾತನಾಡಿ, ಯಾವುದೇ ಯೋಜನೆಗಳಿಗೆ ನೀರು ಹರಿಸಲು ಸಮಿತಿ ತೀರ್ಮಾನವೇ ಅಂತಿಮ.
ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಹರಿಸುವ ಮುನ್ನ ಭದ್ರಾ ಅಚ್ಚುಕಟ್ಟು ಪ್ರದೇಶ ನಿರ್ವಹಣೆಗೆ ಬೇಕಾದ ನೀರಿನ ಪ್ರಮಾಣ ಎಷ್ಟು ಎಂಬ ಆಧಾರದಲ್ಲಿ ಚರ್ಚೆ ಆಗಬೇಕು. ನೀರು ಉಳಿದರೆ ಮೇಲ್ದಂಡೆ ಯೋಜನೆಗೆ ಹರಿಸಬಹುದು ಎಂದು ಸಲಹೆ ನೀಡಿದರು. ಈ ವಿಷಯವಾಗಿ ಅಧ್ಯಕ್ಷೆ ಪವಿತ್ರಾ ರಾಮಯ್ಯ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಹರಿಸುವ ಕುರಿತು ಆದ ಆದೇಶ ಹಾಗೂ ಜಲಾಶಯದಲ್ಲಿ ನೀರಿನ ಪ್ರಮಾಣದ ಬಗ್ಗೆ ಸಂಸದರು, ಶಾಸಕರ ಗಮನಕ್ಕೆ ತರಲಾಗಿದೆ. ಮುಖ್ಯಮಂತ್ರಿಗಳ ಮೇಲೆ ರಾಜಕೀಯ ಒತ್ತಡ ಹೇರಿ ಈ ರೀತಿ ಆದೇಶ ಮಾಡಿಸಲಾಗಿದೆ. ಆದರೂ ನಾನು ಪ್ರಸ್ತುತ ಜಲಾಶಯದ ನೀರಿನ ಪರಿಸ್ಥಿತಿ ಬಗ್ಗೆ ವಿವರಿಸಿದ್ದೇನೆ.
ಭದ್ರಾ ಮೇಲ್ದಂಡೆಗೆ ನೀರು ಹರಿಸಿದರೆ ಭದ್ರಾ ಅಚ್ಚುಕಟ್ಟುದಾರರಿಗೆ ನೀರಿನ ಕೊರತೆಯಾಗಲಿದ್ದು ಅವರು ಪ್ರತಿಭಟನೆ ಮಾಡುವ ಸಂಭವ ಇದೆ. ಆದ ಕಾರಣ ನೀರು ಹರಿಸುತ್ತಿರುವುದನ್ನು ತಕ್ಷಣದಿಂದ ನಿಲ್ಲಿಸಬೇಕೆಂದು ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್‌ಗೆ ಪತ್ರ ಬರೆದಿದ್ದೇನೆ. ರೈತರ ಹಿತದೃಷ್ಟಿಯಿಂದ ಎಲ್ಲ ರೀತಿಯ ಪ್ರಯತ್ನ ಮಾಡಲಾಗಿದ್ದು, ರೈತ ಸಂಘದ ಗಮನಕ್ಕೂ ತರಲಾಗಿದೆ ಎಂದರು.
ಸಭೆಯಲ್ಲಿ ನೀರಾವರಿ ಸಲಹಾ ಸಮಿತಿ ಸದಸ್ಯರಾದ ರುದ್ರಮೂರ್ತಿ, ಸದಾಶಿವಪ್ಪಗೌಡ, ರಾಜಪ್ಪ, ಹನುಮಂತಪ್ಪ, ದ್ಯಾಮಪ್ಪ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಮುಖ್ಯ ಇಂಜಿನಿಯರ್ ಯತೀಶ್ಚಂದ್ರ, ಮುಖ್ಯ ಆಡಳಿತಾಧಿ ಕಾರಿ ಕೃಷ್ಣಮೂರ್ತಿ.ಬಿ. ಕುಲಕರ್ಣಿ, ಭದ್ರಾ ಯೋಜನಾ ವೃತ್ತ ಅಧಿಧೀಕ್ಷಕ ಅಭಿಯಂತರ ಚಂದ್ರಹಾಸ್, ಇತರೆ ಸದಸ್ಯರು, ರೈತರು, ಅಧಿ ಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.