ಮಲೆನಾಡಲ್ಲಿ ನಿರಂತರ ಮಳೆ
Team Udayavani, Jul 19, 2021, 6:40 PM IST
ಶಿವಮೊಗ್ಗ: ಜಿಲ್ಲಾದ್ಯಂತ ಶನಿವಾರ ರಾತ್ರಿಯಿಂದಲೇ ಪುನರ್ವಸು ಮಳೆ ಆರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಲೆನಾಡು ಈಗ ಮಳೆನಾಡಾಗಿ ಮಾರ್ಪಟ್ಟಿದೆ. ವೀಕೆಂಡ್‌ನಲ್ಲಿ ಮನೆಯಿಂದ ಹೊರಗೆ ಹೋಗುವ ಪ್ಲಾನ್‌ನಲ್ಲಿದ್ದವರಿಗೆ ಮಳೆರಾಯ ಮನೆಯಲ್ಲೇ ಇರುವಂತೆ ಮಾಡಿದ್ದಾನೆ. ಪುನರ್ವಸು ಮಳೆ ಭಾನುವಾರ ಅಂತ್ಯಗೊಳ್ಳಲಿದ್ದು ಸೋಮವಾರದಿಂದ ಪುಷ್ಯ ಮಳೆ ಆರಂಭವಾಗಲಿದೆ.
ಹವಾಮಾನ ಇಲಾಖೆ ವರದಿ ಪ್ರಕಾರ ಸೋಮವಾರ ಕೂಡ ಭಾರೀ ಮಳೆ ಇದ್ದು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಹೊರಟಿರುವ ಮಕ್ಕಳಿಗೆ ತೊಡಕಾಗುವ ಸಂಭವ ಇದೆ. ಹೊಸನಗರ, ತೀರ್ಥಹಳ್ಳಿ, ಸಾಗರ ಭಾಗದಲ್ಲಿ ಮಳೆ ರಭಸದಿಂದ ಕೂಡಿದ್ದು ಜಲಾಶಯಗಳಿಗೆ ಭಾರೀ ಪ್ರಮಾಣದಲ್ಲಿ ಒಳಹರಿವು ಬರುತ್ತಿದೆ. ಭದ್ರಾವತಿ, ಶಿಕಾರಿಪುರ, ಶಿವಮೊಗ್ಗ, ಸೊರಬದಲ್ಲೂ ಮಳೆ ಸುರಿಯುತ್ತಿದೆ.
ಸಂಚಾರ ದುರ್ಬರ: ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಗಳಿಂದ ಜನ ಮೊದಲೇ ಹೈರಾಣಾಗಿದ್ದು ಮಳೆ ಬಂತೆಂದರೆ ಕೆಸರು ರಾಡಿ, ಎಲ್ಲೆಂದರಲ್ಲಿ ವಾಹನಗಳು ಸಿಕ್ಕಿಕೊಳ್ಳುವುದು ಮಾಮೂಲಿಯಾಗಿದೆ. ಎಷ್ಟೋ ಕಡೆ ಕಾಮಗಾರಿ ನಡೆಸುವ ಸೂಚನಾ ಫಲಕಗಳಿಲ್ಲದೇ ರಸ್ತೆ ಕೊನೆವರೆಗೂ ಬಂದು ವಾಪಸ್ ಹೋಗಬೇಕಿದೆ. ಸ್ಮಾರ್ಟ್‌ಸಿಟಿ ಅಧಿ ಕಾರಿಗಳಿಗೆ ಎಷ್ಟೇ ದೂರು ಬಂದರೂ ತಲೆಕೆಡಿಸಿಕೊಂಡಿಲ್ಲ.
ಲಾಕ್‌ಡೌನ್ ಅವ ಧಿಯಲ್ಲಿ ಮಲಗಿದ್ದ ಅಧಿ ಕಾರಿಗಳು ಮಳೆಗಾಲದಲ್ಲಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ನಗರದಲ್ಲಿ ಅತಿ ಹೆಚ್ಚು ವಾಹನಗಳು ಓಡಾಡುವ ಕುವೆಂಪು ರಸ್ತೆ, ಬಾಲರಾಜ್ ಅರಸ್ ರಸ್ತೆ, ಹಳೇ ಜೈಲು ರಸ್ತೆಗಳಲ್ಲಿ ಎರಡು ಬದಿಯಲ್ಲಿ ಗುಂಡಿ ತೋಡಲಾಗಿದ್ದು ಈ ರಸ್ತೆಗಳನ್ನು ದಾಟುವುದು ನರಕವೇ ಸರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.