ಲಕ್ಕವಳ್ಳಿ ಜೈನಮಠದ ಆವರಣ ಸಂಪೂರ್ಣ ಜಲಾವೃತ
Team Udayavani, Jul 26, 2021, 7:01 PM IST
ಸೊರಬ: ವರದಾ ನದಿಯ ಜಲಪ್ರಳಯದಿಂದ ಲಕ್ಕವಳ್ಳಿಯ ಜೈನರ ಪವಿತ್ರ ಕ್ಷೇತ್ರ ಮೋಕ್ಷ ಮಂದಿರ ಜೈನ ಮಠದ ಆವರಣ ಸಂಪೂರ್ಣ ಜಲಾವೃತವಾಗಿದ್ದು, ಮಠದ ಪೀಠಾ ಧಿಪತಿ ಶ್ರೀ ವೃಷಭಸೇನ ಭಟ್ಟಾರಕ ಸ್ವಾಮೀಜಿ ಅವರನ್ನು ಸ್ಥಳೀಯರ ಸಹಕಾರದೊಂದಿಗೆ ಸ್ಥಳಾಂತರಿಸಲಾಗಿದೆ. ಇಲ್ಲಿನ ಲಕ್ಕವಳ್ಳಿಯ ಶ್ರೀ ಮೋಕ್ಷ ಮಂದಿರ ಸಂಸ್ಥಾನ ಜೈನ ಮಠವು ವರದಾ-ದಂಡಾವತಿ ಸಂಗಮ ಕ್ಷೇತ್ರದ ನದಿಯ ದಂಡೆಯ ಮೇಲಿದ್ದು, ಪ್ರತಿ ಬಾರಿ ನೆರೆ ಉಂಟಾದಾಗ ಮಠ ಮುಳುಗಡೆಯಾಗುತ್ತದೆ.
ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಗೆ ಮಠವು ಜಲಾವೃತವಾಗಿದ್ದು, ಅಪಾರ ನಷ್ಟವಾಗಿದೆ. ಮಠಕ್ಕೆ ತಡೆಗೋಡೆ ನೀರ್ಮಾಣವಾಗಬೇಕು ಎಂಬ ಶ್ರೀಗಳ ಬೇಡಿಕೆ ಈಡೇರದೇ ಇರುವುದು ಸಮಸ್ಯೆ ಬಿಗಡಾಯಿಸಲು ಮತ್ತೂಂದು ಕಾರಣವಾಗಿದೆ. ನೆರೆ ಹಾವಳಿಗೆ ನಲುಗಿದ ಮಂದಿರಗಳು: ಶ್ರೀ ಕ್ಷೇತ್ರದಲ್ಲಿ ರಾಜರಾಜೇಶ್ವರಿ ದೇವಸ್ಥಾನ, ಪದ್ಮಾವತಿ ಅಮ್ಮನವರ ದೇವಸ್ಥಾನ, ಸಿದ್ಧಾಯಿನಿ ಮಂದಿರ, ಜಲ್ವಾಮಾಲಿನ, ಮಹಾಕಾಳಿ, ಆ ನಾಥ ತೀರ್ಥಂಕರ, ಸೇರಿ ನಿರ್ಮಾಣ ಹಂತದ ಎರಡು ಬಸದಿಗಳು, ಮೃತ್ಯುಂಜಯ ದೇವಸ್ಥಾನ, ಕಾಳಸರ್ಪ ಪದ್ಮಾವತಿ ದೇವಸ್ಥಾನಗಳು ಸಂಪೂರ್ಣ ಮುಳುಗಡೆಯಾಗಿವೆ.
ಉಳಿದಂತೆ ಮೂಲ ಮಠವು ಸಂಪೂರ್ಣವಾಗಿ ನೆರೆ ಹಾವಳಿಗೆ ತುತ್ತಾಗಿದ್ದು, ಧರೆಗೆ ಉರುಳುವ ಹಂತದಲ್ಲಿದೆ. ನಿರ್ಮಾಣ ಹಂತದ ಕಟ್ಟಡಗಳಿಗೂ ಹಾನಿ: ಶ್ರೀ ಕ್ಷೇತ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ವೃಷಭಸೇನ ಭಟ್ಟಾರಕ ಸ್ವಾಮೀಜಿ, ಮಠದ ಆವರಣದಲ್ಲಿ ನಿರ್ಮಾಣ ಹಂತದ ಕಟ್ಟಡಗಳಿಗೂ ಅಭದ್ರತೆ ಕಾಡುತ್ತಿದೆ. ಪ್ರಕೃತಿ ವಿಕೋಪದಿಂದ ಇಲ್ಲಿನ ಮಂದಿರದಲ್ಲಿ ನಿರ್ಮಾಣ ಹಂತದಲ್ಲಿರುವ ಕಲ್ಯಾಣ ಮಂದಿರಕ್ಕೂ ತೊಂದರೆ ಎದುರಾಗಿದ್ದು, ಸಂಬಂಧಪಟ್ಟ ಇಲಾಖೆಯವರು ಈವರೆಗೂ ಯಾವುದೇ ಪರಿಹಾರ ನೀಡುವಲ್ಲಿ ಮುಂದಾಗಿಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಅಲ್ಪ ಸಂಖ್ಯಾತ ಸಮುದಾಯದ ಮಠ, ಆಶ್ರಮ ಹಾಗೂ ಮಂದಿರಗಳ ಅಭಿವೃದ್ಧಿಗೆ ಸುಮಾರು ನೂರಾರು ಕೋಟಿ ರೂ. ವರೆಗೆ ಅನುದಾನ ನೀಡುತ್ತಿವೆ. ಆದರೆ, ಈವರೆಗೂ ಶ್ರೀ ಮಠಕ್ಕೆ ಸಮರ್ಪಕವಾಗಿ ಹೆಚ್ಚಿನ ಅನುದಾನ ದೊರೆಯದೆ ಜೈನ ಮಠಗಳನ್ನು ತಾತ್ಸಾರ ಮನೋಭಾವದಿಂದ ನೋಡಲಾಗುತ್ತಿದೆ ಎಂದರು.
ಮಠದಲ್ಲಿದ್ದ ಪೂಜಾ ಸಾಮಗ್ರಿಗಳು ಹಾಗೂ ಬೆಲೆ ಬಾಳುವ ವಸ್ತುಗಳು ನೆರೆಯ ಹಾವಳಿಗೆ ತುತ್ತಾಗಿ ನೀರು ಪಾಲಾಗಿವೆ. ಉಳಿದಂತೆ ಹಳೆಯ ಮಠದಲ್ಲಿ ಅನೇಕ ಅಮೂಲಾಗ್ರ ದಾಖಲೆಗಳು ಸಹ ನೆರೆಯ ಹಾವಳಿಗೆ ತುತ್ತಾಗಿವೆ. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಸ್ಥಳೀಯ ಆಡಳಿತವೂ ಈವರೆಗೂ ಒತ್ತು ನೀಡಿಲ್ಲ. ಇತ್ತೀಚೆಗೆ ಗೋಂದಿ ಹಾಗೂ ಮೂಗೂರು ಬಳಿ ಚೆಕ್ ಡ್ಯಾಂಗಳ ನಿರ್ಮಾಣದಿಂದ ನೀರಿನ ಪ್ರಮಾಣ ಹೆಚ್ಚುತ್ತಿದೆ. ಸರ್ಕಾರ ಜನ-ಜಾನುವಾರುಗಳು ಇಲ್ಲದ ಏಳೆಂಟು ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸಿದೆ.
ಆದರೆ, ಕಳೆದ ಒಂದು ದಶಕದಿಂದ ಮನವಿ ನೀಡುತ್ತಾ ಬಂದಿದ್ದರೂ ಮಠದ ರಕ್ಷಣೆಗೆ ತಡೆಗೋಡೆ ನಿರ್ಮಾಣವಾಗಿಲ್ಲ ಎಂದು ಆರೋಪಿಸಿದರು. ಹಲವಾರು ವರ್ಷಗಳಿಂದ ನೆರೆ ಹಾವಳಿಯಿಂದ ಉಂಟಾಗುವ ಸಂಕಷ್ಟವನ್ನು ಅನುಭವಿಸುತ್ತಾ ಬಂದಿದ್ದೇವೆ. ಈ ಕುರಿತು ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಸಂಬಂಧಪಟ್ಟ ಅ ಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಮುಂದಿನ ಒಂದು ತಿಂಗಳ ಒಳಗಾಗಿ ಸಂಬಂ ದಿಸಿದ ಅ ಧಿಕಾರಿಗಳಾಗಲೀ ಅಥವಾ ಜನಪ್ರತಿನಿಧಿ ಗಳಾಗಲಿ ಗಮನ ಹರಿಸಿ ಶಾಶ್ವತ ಪರಿಹಾರಕ್ಕೆ ಮುಂದಾಗದಿದ್ದರೆ, ಅನಿ ರ್ದಿಷ್ಟಾವ ಧಿ ಮುಷ್ಕರ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.