ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ

ತೀರ್ಥಹಳ್ಳಿ ತಾಲೂಕಿನ 9 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶರತ್‌ ಕಲ್ಕೋಡ್‌ ಅವರನ್ನು ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಸಮ್ಮೇಳನಕ್ಕೆ ಆಹ್ವಾನಿಸಲಾಯಿತು.

Team Udayavani, Jan 24, 2021, 6:30 PM IST

Theerthahalli

ತೀರ್ಥಹಳ್ಳಿ: ಮೌಲಿಕವಾದ ಅಂಕಣ, ಲೇಖನಗಳು ಸೇರಿದಂತೆ ಸಾಹಿತ್ಯ ಕೃಷಿಯಲ್ಲಿ ತೊಡಗಿರುವ ಶರತ್‌ ಕಲ್ಕೋಡ್‌ ಅವರನ್ನು ತಾಲೂಕಿನ ಗುಡ್ಡೆಕೇರಿಯಲ್ಲಿ ನಡೆಯುವ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸಕಾಲಿಕವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಓದಿ : ಬಿಜೆಪಿ ಇನ್ನೂ 5 ವರ್ಷ ಅಧಿಕಾರಕ್ಕೆ ಬಂದರೇ, ಅಸ್ಸಾಂ ಭದ್ರವಾಗುತ್ತದೆ : ಶಾ

ಗುಡ್ಡೆಕೇರಿ ಸಮೀಪದ ಕಲ್ಕೋಡಿನಲ್ಲಿರುವ ಅವರ ನಿವಾಸದಲ್ಲಿ ಕಸಾಪ ವತಿಯಿಂದ ಆಹ್ವಾನ ನೀಡಿ ಮಾತನಾಡಿದ ಅವರು, ಶರತ್‌ ಅವರು ಕನ್ನಡ ಸಾಹಿತ್ಯ ಮಾತ್ರವಲ್ಲದೇ ಸುಧಾ, ತರಂಗ ವಾರಪತ್ರಿಕೆ ಹೀಗೆ ಪತ್ರಿಕೋದ್ಯಮಿಯಾಗಿ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದು, ಕಥೆ, ಕವನ, ಪ್ರಬಂಧ ಮತ್ತು ಅಂಕಣಗಳ ಲೇಖನಗಳ ಮೂಲಕ ಅಕ್ಷರ ಲೋಕದಲ್ಲಿ ಚಿರಪರಿಚಿತರಾಗಿದ್ದಾರೆ. ಇಂದಿಗೂ ಬರವಣಿಗೆಯಲ್ಲಿ ಸಕ್ರಿಯರಾದವರು. ಸಾಹಿತ್ಯದ ಜೊತೆಯಲ್ಲಿ ಕೃಷಿಕರಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಇವರ ಸಾಧನೆಯನ್ನು ಗುರುತಿಸಿ ಮಾಸ್ತಿ ಪ್ರಶಸ್ತ್ರಿ ಮತ್ತು ಬೆಂಗಳೂರು ಮಹಾನಗರ ಪ್ರತಿಷ್ಠಿತ ಕೆಂಪೇಗೌಡ ಪ್ರಶಸ್ತ್ರಿಗೂ ಭಾಜನರಾಗಿದ್ದಾರೆ ಎಂದರು.

ಸರ್ವಾಧ್ಯಕ್ಷತೆಗೆ ಆಯ್ಕೆಯಾದ ಶರತ್‌ ಕಲ್ಕೋಡ್‌ ಮಾತನಾಡಿ, ಕುವೆಂಪು ಅವರಂತಹ ದಾರ್ಶನಿಕರು ಜನಿಸಿದ ತಾಲೂಕಿನ ಈ ಸ್ಥಾನಕ್ಕೆ ನಾನು ಅರ್ಹನೇ ಎಂಬ ಅಳುಕು ನನಗಿದೆ. ಆದರೆ ನನ್ನ ಬದುಕಿನಲ್ಲಿ ಬಂದಿರುವ ಅಪೂರ್ವ ಕ್ಷಣಗಳಲ್ಲಿ ಇದೂ ಕೂಡ ಒಂದಾಗಿದೆ. ಪತ್ರಿಕೆ ಮತ್ತು ಸಾಹಿತ್ಯ ಕ್ಷೇತ್ರದ 40 ವರ್ಷಗಳ ನನ್ನ ಅನುಭವವನ್ನು ಹಂಚಿಕೊಳ್ಳುವ ವೇದಿಕೆಯ ಸದಾವಕಾಶ ದೊರೆತಿದೆ. ನನ್ನ ದೃಷ್ಟಿಯಲ್ಲಿ ಬರಹಗಾರನಿಗೆ ಮೆಚ್ಚುಗೆ ಮತ್ತು ಬೈಗುಳ ಎರಡೂ ಒಂದೇ ಆಗಿದ್ದು ಇದರಿಂದ ವೈಚಾರಿಕ ಚಿಂತನೆಗೆ ಅವಕಾಶವಾಗುತ್ತದೆ ಎಂದರು.

ಕ.ಸಾ.ಪ. ತಾಲೂಕು ಅಧ್ಯಕ್ಷ ಆಡಿನಸರ ಸತೀಶ್‌ಕುಮಾರ್‌ ಮಾತನಾಡಿ, ಈ ಊರಿನ ಸಾಹಿತ್ಯ ಪ್ರೇಮಿಗಳು ಮತ್ತು ಜನಪ್ರತಿನಿಧಿಗಳ ಸಹಕಾರದ ಹಿನ್ನೆಲೆಯಲ್ಲಿ ಈ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

ಓದಿ : ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯಸ್ವಾಮಿ ದರ್ಶನ ಪಡೆದ ಶಾಸಕ ಯತ್ನಾಳ್

ಗಾಯಿತ್ರಿ ಶರತ್‌, ತಾಪಂ ಸದಸ್ಯೆ ವೀಣಾ ಗಿರೀಶ್‌, ಆಗುಂಬೆ ಗ್ರಾಪಂ ಸದಸ್ಯರಾದ ಶಶಾಂಕ್‌ ಹೆಗ್ಡೆ, ಶ್ವೇತಾ ಗಿರೀಶ್‌, ಜಯಪ್ರಕಾಶ್‌, ರಾಘವೇಂದ್ರ, ಗ್ರಾಪಂ ಮಾಜಿ ಅದ್ಯಕ್ಷ ನಂದನ್‌ ಹಸಿರುಮನೆ, ಎಪಿಎಂಸಿ ಸದಸ್ಯ ಹಸಿರುಮನೆ ಮಹಾಬಲೇಶ್‌, ಕೊರೊಡಿ ಕೃಷ್ಣಪ್ಪ, ಕರವೇ ಮುಖಂಡರಾದ ವೆಂಕಟೇಶ ಹೆಗ್ಡೆ ಹಾಗೂ ಹಷೇಂದ್ರ ಪಡುವಳ್ಳಿ, ನಾಬಳ ಶಚ್ಚೀಂದ್ರ ಹೆಗ್ಡೆ, ತಾಲೂಕು ಲೇಖಕಿಯರ ಸಂಘದ ಅದ್ಯಕ್ಷೆ ನೇತ್ರಾವತಿ, ಸು ದೀಷ್ಣಾ ಕುಮಾರಿ, ಮಂಜುಬಾಬು ಮತ್ತು ಕಲ್ಕೋಡು ಕುಟುಂಬಸ್ಥರು ಇದ್ದರು. ಕಸಾಪ ನಿರ್ದೇಶಕ ಡಾನ್‌ ರಾಮಣ್ಣ ಶೆಟ್ಟಿ ನಿರೂಪಿಸಿದರು.

ಓದಿ : ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಮೆ ಅಪಾರ

ಟಾಪ್ ನ್ಯೂಸ್

AANE 2

Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

OM BIrla

Waqf ಸಮಿತಿಯಿಂದ ದೂರ: ಇಂದು ಸ್ಪೀಕರ್‌ ಜತೆ ವಿಪಕ್ಷ ಚರ್ಚೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

one-Health-misson

Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್‌”

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

20-hosanagara

Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

13-anadapura

Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

current

Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು

mob

WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್‌ ಅಧಿಕಾರಿ ದೂರು

AANE 2

Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.