ಐದು ಪ್ರಮುಖ ನಿರ್ಣಯ ಮಂಡನೆ
ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ ಮಾತನಾಡಿದರು.
Team Udayavani, Feb 3, 2021, 2:10 PM IST
ಶಿವಮೊಗ್ಗ: ಜಿಲ್ಲಾ 15 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಐದು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿಯೇ ಕಡ್ಡಾಯಗೊಳಿಸಬೇಕು. ಉನ್ನತ ವಿದ್ಯಾಭ್ಯಾಸ ಮತ್ತು ಸರ್ಕಾರಿ ನೌಕರಿಯಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಬೇಕು. ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ಮೂಲ ಸೌಕರ್ಯ ಹೆಚ್ಚಿಸಬೇಕು. ಪ್ರತಿ ಗ್ರಾಪಂನಲ್ಲೂ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಕನ್ನಡ ಭವನ ನಿರ್ಮಿಸಬೇಕು. ಕನ್ನಡ ಭಾಷೆಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ಮೀಸಲಿಡಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿರ್ಣಯ ಕೈಗೊಂಡಿದೆ.ನಿರ್ಣಯಗಳ ಮನವಿಯನ್ನು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಸಲ್ಲಿಸುವುದಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಬಿ. ಶಂಕರಪ್ಪ ತಿಳಿಸಿದರು.
ರಾಜ್ಯ ಮಾಜಿ ಶಾಸಕರ ವೇದಿಕೆ ಅಧ್ಯಕ್ಷ ಎಚ್. ಎಂ. ಚಂದ್ರಶೇಖರಪ್ಪ ಮಾತನಾಡಿ, ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಡಾ| ವಿಜಯಾದೇವಿ ಅವರಂತಹ ವಿದ್ವಾಂಸರು ವಿಧಾನ ಪರಿಷತ್‌ನಲ್ಲಿ ಕೆಲಸ ಮಾಡುವಂತಾಗಬೇಕು. ವಿಧಾನ ಪರಿಷತ್ ಪರಿಣತರಿಂದ ಕೂಡಿದ
ಸಭೆಯಾಗಿ ಜನರ ಸಮಸ್ಯೆ ಪರಿಹರಿಸುವತ್ತ ಗಮನ ಹರಿಸಬೇಕು. ರಾಜ್ಯದ ಭಾಗವನ್ನು ಬೇರೆ ರಾಜ್ಯದವರು ತಮ್ಮದು ಎಂದು ಪ್ರತಿಪಾದಿಸುತ್ತಿದ್ದರೂ ಜನಪ್ರತಿನಿ ಧಿಗಳು ಧ್ವನಿ ಎತ್ತುತ್ತಿಲ್ಲ. ಆದರೆ ಕೆಲ ಸಮುದಾಯದ ಜನ ಜಾತಿ ಮೀಸಲಾತಿಗೆ ಹೋರಾಟ
ಮಾಡುತ್ತಿದ್ದಾರೆ. ಮೊದಲು ಕನ್ನಡಿಗರಾಗಿ ರಾಜ್ಯದ ಭೂಭಾಗದ ಬಗ್ಗೆ ಧ್ವನಿ ಎತ್ತುವ ಕೆಲಸ ಮಾಡಬೇಕಿದೆ. ಬೆಳಗಾವಿ ವಿಧಾನಸೌಧ
ಕಟ್ಟಡ ನಿರುಪಯುಕ್ತ ಆಗಿದ್ದು, ಅಲ್ಲಿಯೂ ನಿರಂತರವಾಗಿ ವಿಧಾನ ಮಂಡಲದ ಅ ಧಿವೇಶನ ನಡೆಸಬೇಕು ಹಾಗೂ ರಾಜ್ಯದ ಎಲ್ಲರೂ ಒಟ್ಟಾಗಿ
ಬೆಳಗಾವಿಯಲ್ಲಿ ಸೇರಿ ಬೆಳಗಾವಿ ನಮ್ಮದು, ಎಂದಿಗೂ ಬಿಟ್ಟುಕೊಡುವುದಿಲ್ಲ ಎಂಬ ಸಂದೇಶ ಸಾರಬೇಕು ಎಂದು ತಿಳಿಸಿದರು. ಸಾಹಿತಿ ವಿಜಯಾ ಶ್ರೀಧರ್, ಸಾಹಿತಿ ಜಯಪ್ರಕಾಶ ಮಾವಿನಕುಳಿ, ಸಮ್ಮೇಳನ ಸರ್ವಾಧ್ಯಕ್ಷೆ ಡಾ| ವಿಜಯಾದೇವಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಬಿ. ಶಂಕರಪ್ಪ ಮಾತನಾಡಿದರು.
ಪ್ರಮುಖರಾದ ಸುನೀತಾರಾವ್, ಬಿ.ಡಿ. ಭೂಕಾಂತ್, ರುದ್ರಮುನಿ ಸಜ್ಜನ್, ಜಿ.ಪಿ. ಸಂಪತ್‌ಕುಮಾರ್, ಎಂ.ಎನ್. ಸುಂದರ್‌ರಾಜ್, ಚನ್ನಬಸಪ್ಪ ನ್ಯಾಮತಿ, ಹಸನ್ ಬೆಳ್ಳಿಗನೂಡು, ಗೋಪಜ್ಜಿ ನಾಗಪ್ಪ, ಮಧುಗಣಪತಿ ರಾವ್ ಮಡೆನೂರು, ಕೆ.ಬಸವನಗೌಡರು, ತಿರುಮಲ
ಮಾವಿನಕುಳಿ, ಹಿತಕರ ಜೈನ್, ಅಪೇಕ್ಷಾ ಮಂಜುನಾಥ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.