ಕಾಂಕ್ರೀಟ್ ರಸ್ತೆ ಕಾಮಗಾರಿ ತಡೆಗೆ ಒತ್ತಾಯ
ಬೇಕಾಬಿಟ್ಟಿ ಕಾಂಕ್ರಿಟ್ ರಸ್ತೆ ನಿರ್ಮಿಸದಂತೆ ಪ್ರತಿಭಟನೆ ನಡೆಯಿತು
Team Udayavani, Feb 3, 2021, 2:17 PM IST
ಶಿವಮೊಗ್ಗ: ತಾಪಮಾನ ಹೆಚ್ಚಿಸುವ ಕಾಂಕ್ರಿಟ್ ರಸ್ತೆಗಳನ್ನು ಬೇಕಾಬಿಟ್ಟಿಯಾಗಿ ಮಾಡಬಾರದು ಎಂದು ಆಗ್ರಹಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ಪ್ರತಿಭಟನೆ ನಡೆಸಿ ಜಿಲ್ಲಾ ಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಸ್ಮಾರ್ಟ್ ಸಿಟಿ ಹೆಸರಿನಲ್ಲಿ ನಗರದ ಹಲವು ಕಡೆ ಕಾಂಕ್ರಿಟ್ ರಸ್ತೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ನಗರದೆಲ್ಲೆಡೆ ಈ ಸಿಮೆಂಟ್ ರಸ್ತೆಗಳನ್ನು ಮಾಡುವ ಅವಶ್ಯಕತೆ ಇಲ್ಲ. ಇದರಿಂದ ತಾಪಮಾನ ಮತ್ತು ಪರಿಸರದ ಮೇಲೆ ತೀವ್ರ ಪರಿಣಾಮವಾಗುತ್ತದೆ. ಕಾಂಕ್ರಿಟ್ ರಸ್ತೆಗಳನ್ನು ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈಗಾಗಲೇ ನಗರದಲ್ಲಿ ತಾಪಮಾನ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಕಾಂಕ್ರಿಟ್ ರಸ್ತೆಗಳು ಹೆಚ್ಚಾದಷ್ಟು ತಾಪಮಾನ ಮತ್ತಷ್ಟು ಹೆಚ್ಚಲಿದೆ. ಇದರಿಂದ ದುಂದುವೆಚ್ಚ ಕೂಡ
ಆಗುತ್ತದೆ. ಕಲ್ಲು, ಮರಳು ಮುಂತಾದ ಅ ಧಿಕ ಖರ್ಚು ತಗುಲುತ್ತದೆ. ಶಿವಮೊಗ್ಗ ನಗರಾದ್ಯಂತ ಸುಮಾರು 100 ಕೋಟಿಗೂ ಹೆಚ್ಚು ವೆಚ್ಚದಲ್ಲಿ
ಕಾಂಕ್ರಿಟ್ ರಸ್ತೆ ನಿರ್ಮಿಸಲಾಗುತ್ತಿದೆ. ಇದರಿಂದ ಗುಣಮಟ್ಟದ ರಸ್ತೆ ನಿರ್ಮಿಸಲು ಕೂಡ ಸಾಧ್ಯವಾಗುತ್ತಿಲ್ಲ. ಎಲ್ಲಾ ಇಲಾಖೆಯ ಇಂಜಿನಿಯರ್‌ಗಳು ಗುಣಮಟ್ಟದ ರಸ್ತೆ ಮಾಡಿಸುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ತಕ್ಷಣವೇ ಕಾಂಕ್ರೀಟ್ ರಸ್ತೆಗಳನ್ನು ನಿಲ್ಲಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ಒಕ್ಕೂಟದ ಪ್ರಮುಖರಾದ ವಸಂತ್‌ಕುಮಾರ್, ಅಶೋಕ್ ಕುಮಾರ್, ನರಸಿಂಹ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.