ಮ್ಯಾನ್‌ಹೋಲ್ ದುರಸ್ತಿಗೆ ಯಂತ್ರ ಬಳಸಿ
ಮ್ಯಾನುವಲ್ ಸ್ಕ್ವಾವೆಂಜರ್ ಇಳಿಸಿದರೆ ಅಧಿಕಾರಿ ವಿರುದ್ಧ ಕ್ರಿಮಿನಲ್ ಕೇಸ್ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಎಚ್ಚರಿಕೆ
Team Udayavani, Feb 4, 2021, 9:42 PM IST
ಶಿವಮೊಗ್ಗ: ಯಾವುದೇ ಕಾರಣಕ್ಕೂ ಮ್ಯಾನ್‌ಹೋಲ್ ದುರಸ್ತಿಗೆ ಮ್ಯಾನುವಲ್ ಸ್ಕಾ Âವೆಂಜರ್‌ಗಳನ್ನು ಇಳಿಸದೆ, ಕಡ್ಡಾಯವಾಗಿ ಯಂತ್ರ ಬಳಸಬೇಕು. ಒಂದು ವೇಳೆ ಮ್ಯಾನ್‌ಹೋಲ್ ಅವಘಡ ಸಂಭವಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಎಚ್ಚರಿಕೆ ನೀಡಿದರು.
ಬುಧವಾರ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಮ್ಯಾನುವಲ್ ಸ್ಕ್ವಾವೆಂಜರ್ ಜಿಲ್ಲಾ ಮಟ್ಟದ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಕ್ಕಿಂಗ್ ಯಂತ್ರಗಳು ಲಭ್ಯವಿದೆ. ಕಡ್ಡಾಯವಾಗಿ ಸಕ್ಕಿಂಗ್ ಯಂತ್ರವನ್ನು ಮ್ಯಾನ್‌ಹೋಲ್ ಸರಿಪಡಿಸಲು ಬಳಸಬೇಕು. ಕಾರ್ಮಿಕರಿಗೆ ಕೈವಗಸು, ಗಮ್ ಬೂಟ್‌ಗಳನ್ನು ನೀಡುವುದು ಮಾತ್ರವಲ್ಲದೆ, ಅವರು ಪ್ರತಿಬಾರಿ ಅದನ್ನು ಬಳಸುತ್ತಿರುವುದರ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಸಾರ್ವಜನಿಕರ ಶೌಚಾಲಯಗಳಲ್ಲಿ ಸಹ ಸ್ವತ್ಛತೆ ಪಾಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಕಸ ವಿಲೇವಾರಿ: ಪ್ರತಿ ಮನೆಯಿಂದ ಮೂಲದಿಂದಲೇ ಕಸವನ್ನು ವಿಂಗಡಿಸಿ ಸಂಗ್ರಹಿಸಲು ಈಗಾಗಲೇ ಹಲವು ಬಾರಿ ಸೂಚನೆ ನೀಡಲಾಗಿದ್ದರೂ ಇನ್ನೂ ಸರಿಯಾಗಿ ಅನುಷ್ಠಾನ ಆಗಿಲ್ಲ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೇವಲ ಶೇ.27ರಷ್ಟು ಮಾತ್ರ ಮೂಲದಲ್ಲಿಯೇ ಕಸವನ್ನು ವಿಂಗಡಿಸಿ ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ. ಎಲ್ಲಾ ಕಡೆ ಕಡ್ಡಾಯವಾಗಿ ಶೇ.100ರಷ್ಟು ಕಸವನ್ನು ಮೂಲದಲ್ಲಿಯೇ ವಿಂಗಡಿಸಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಘನತ್ಯಾಜ್ಯ ವಿಲೇವಾರಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಹಲವು ಸ್ಥಳೀಯ ಸಂಸ್ಥೆಗಳು ಸಂಗ್ರಹಿಸಿದ ಕಸವನ್ನು ಡಂಪಿಂಗ್ ಯಾರ್ಡ್‌ನಲ್ಲಿ ತಂದು ಸುರಿದ ಬಳಿಕ ವಿಂಗಡನೆ ಮಾಡುವುದು ಕಂಡು ಬಂದಿದ್ದು, ಇದನ್ನು ಸರಿಪಡಿಸಿಕೊಳ್ಳಬೇಕು. ಈ ರೀತಿ ಕಸವನ್ನು ರಾಶಿ ಹಾಕಿದರೆ ಸಂಬಂಧಪಟ್ಟ ಮುಖ್ಯಾಧಿಕಾರಿಗೆ ದಂಡ ವಿಧಿ ಸಿ ಕ್ರಮ ಕೈಗೊಳ್ಳಲಾಗುವುದು.
ಮನೆಯಿಂದ ತ್ಯಾಜ್ಯ ಸಂಗ್ರಹಿಸುವ ವೇಳೆ ಒಣ ಕಸ ಮತ್ತು ಹಸಿಕಸವನ್ನು ಕಡ್ಡಾಯವಾಗಿ ವಿಂಗಡಿಸಿಯೇ ಪಡೆದುಕೊಳ್ಳಬೇಕು. ವಿಂಗಡಿಸಿದ ಕಸವನ್ನು ಗಾಡಿಯವರು ಒಂದೇ ಕಡೆ ರಾಶಿ ಹಾಕುವ ಬಗ್ಗೆಯೂ ದೂರುಗಳು ಬಂದಿವೆ. ಕಸದ ಗಾಡಿಯಲ್ಲಿ ಒಣಕಸ ಮತ್ತು ಹಸಿಕಸಕ್ಕೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಸೂಚನೆ ನೀಡಿದರು.
ಇದನ್ನೂ ಓದಿ : ಕಾಂಕ್ರೀಟ್ ಗೋಡೆ ಕಟ್ಟುವುದರಿಂದ ರೈತರ ಸಮಸ್ಯೆ ಪರಿಹಾರವಾಗಲ್ಲ :ಮಾತುಕತೆಯಿಂದ ಪರಿಹರಿಸಿ;HDD
ನಗರ ಪ್ರದೇಶದಲ್ಲಿ ಪೈಪ್ ಕಾಂಪೋಸ್ಟ್ ಪದ್ಧತಿಯನ್ನು ಜನಪ್ರಿಯಗೊಳಿಸಬೇಕು. ಪ್ರಥಮ ಹಂತದಲ್ಲಿ ಸರ್ಕಾರಿ ವಸತಿ ಗೃಹಗಳಲ್ಲಿ ಪೈಪ್ ಕಾಂಪೋಸ್ಟ್ ಅಳವಡಿಕೆ ಮಾಡಬೇಕು. ಪೈಪ್ ಕಾಂಪೋಸ್ಟ್ ಅಳವಡಿಕೆ ಮಾಡಿದ ಪ್ರದೇಶಗಳಲ್ಲಿ ಒಣಕಸ ಸಂಗ್ರಹಿಸಲು ವಾರಕ್ಕೆ ಎರಡು ಬಾರಿ ಮಾತ್ರ ಕಸದ ಗಾಡಿ ತೆರಳಬೇಕೆಂದು ಹೇಳಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಯೋಜನಾ ನಿರ್ದೇಶಕ ಡಾ|ನಾಗೇಂದ್ರ ಹೊನ್ನಳ್ಳಿ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.