ಕೊರೊನಾ ಲಸಿಕೆ ಕಡಿಮೆ ಬೀಳದಂತೆ ಗಮನ ಹರಿಸಿ
Team Udayavani, Apr 14, 2021, 6:30 PM IST
ಸಾಗರ: ತಾಲೂಕಿನಲ್ಲಿ ಸುಮಾರು 6 ಸಾವಿರಕ್ಕೂ ಹೆಚ್ಚು ಜನರು ಕೊರೊನಾ ಲಸಿಕೆ ತೆಗೆದುಕೊಂಡಿದ್ದಾರೆ. ನಗರದ ಆಸ್ಪತ್ರೆಗಳಲ್ಲಿ 4,230 ಡೋಸ್, ಗ್ರಾಮಾಂತರ ಪ್ರದೇಶದ ಆಸ್ಪತ್ರೆಯಲ್ಲಿ 1,600 ಡೋಸ್ ಲಸಿಕೆ ಸಂಗ್ರಹದಲ್ಲಿದೆ. ಅಗತ್ಯ ಬಿದ್ದರೆ ಇನ್ನಷ್ಟು ಪ್ರಮಾಣದಲ್ಲಿ ಲಸಿಕೆ ಸಂಗ್ರಹಿಸಲಾಗುತ್ತದೆ. ಯಾವುದೇ ಕಾರಣಕ್ಕೆ ಲಸಿಕೆ ಕಡಿಮೆ ಬೀಳದಂತೆ ನೋಡಿಕೊಳ್ಳುತ್ತೇವೆ ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಎಚ್. ಹಾಲಪ್ಪ ಹರತಾಳು ಭರವಸೆ ನೀಡಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ತೆಗೆದುಕೊಳ್ಳಲು ಜನರು ಹಿಂದೇಟು ಹಾಕಬಾರದು. 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಲಸಿಕೆ ಪಡೆಯುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಈಗಾಗಲೇ ಲಸಿಕೆ ಮಹೋತ್ಸವ ನಡೆಸಲಾಗುತ್ತಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಲಸಿಕೆ ಕೊಡುವುದನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗ್ರಾಪಂ ಅಧ್ಯಕ್ಷರು, ಪಿಡಿಒ ಸಭೆ ಕರೆದು ಮಾಹಿತಿ ನೀಡಲಾಗಿದೆ ಎಂದರು.
ತಾಲೂಕಿನಲ್ಲಿ ಕೆಎಫ್‌ಡಿ ನಿಯಂತ್ರಣದಲ್ಲಿದೆ. ಆದರೂ ಮೈಮರೆಯಬಾರದು ಎಂದು ಆರೋಗ್ಯ ಇಲಾಖೆಗೆ ಮತ್ತು ಗ್ರಾಪಂಗಳಿಗೆ ಸೂಚನೆ ನೀಡಲಾಗಿದೆ. ಭಾನುವಾರ ಹಸಿರುಮಕ್ಕಿ ಶರಾವತಿ ಹಿನ್ನೀರಿನ ಕಾಡಿನಲ್ಲಿ 10 ಮಂಗಗಳು ಒಂದೇ ಕಡೆ ಸತ್ತು ಬಿದ್ದಿರುವುದಕ್ಕೆ ಕಾರಣ ಏನು ಎನ್ನುವ ಬಗ್ಗೆ ಆರೋಗ್ಯ ಇಲಾಖೆ, ಪಶು ವೈದ್ಯಾಧಿಕಾರಿಗಳ ತಂಡ ಪರಿಶೀಲನೆ ನಡೆಸಲಾಗುತ್ತಿದೆ. ಮೇಲ್ನೋಟಕ್ಕೆ ಇದು ವಿಷ ಪ್ರಾಶನದಿಂದ ಮೃತಪಟ್ಟಿರಬಹುದು ಅಥವಾ ಎಲ್ಲಿಯೋ ಸತ್ತ ಮಂಗಗಳನ್ನು ಇಲ್ಲಿ ತಂದು ಎಸೆದಿರಬೇಕು ಎನ್ನುವ ಅನುಮಾನ ವ್ಯಕ್ತವಾಗಿದೆ ಎಂದರು. ನಗರವ್ಯಾಪ್ತಿಯ ರಾಮನಗರ ಭಾಗದಲ್ಲಿ ಡೆಂಘೀ ಪ್ರಕರಣ ಜಾಸ್ತಿಯಾಗುತ್ತಿದೆ. ಬಿಸಿಲಿನ ತಾಪ ಹೆಚ್ಚಿರುವುದು, ಹಿಂದೆ ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣ ಮಾಡಿರುವುದರಿಂದ ಕೊಳಚೆ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗಿ ಡೆಂಘೀ ಹರಡುವ ಸಾಧ್ಯತೆ ಇದೆ. ಇನ್ನು ಮುಂದೆ ಗುತ್ತಿಗೆದಾರರರಿಗೆ ಇಂತಹ ಚರಂಡಿ ನಿರ್ಮಾಣದ ಬಿಲ್ ಪಾವತಿಸದಿರಲು ನಿರ್ಧರಿಸಲಾಗಿದೆ. ನಗರದಲ್ಲಿ ಸ್ವತ್ಛತೆಗೆ ಒತ್ತು ನೀಡಲು ನಗರಸಭೆ ಅಧಿ ಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಬಿ.ಎಚ್. ರಸ್ತೆ ಚತುಷ್ಪಥ ನಿರ್ಮಾಣಕ್ಕೆ 77 ಕೋಟಿ ರೂ. ಮಂಜೂರಾಗಿದ್ದು, ಟೆಂಡರ್ ಹಂತಕ್ಕೆ ಬಂದಿದೆ. ತ್ಯಾಗರ್ತಿ ಕ್ರಾಸ್‌ನಿಂದ ಎಲ್.ಬಿ. ಕಾಲೇಜುವರೆಗೆ 7.5 ಕಿಮೀ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಮೊದಲು 6.5 ಕಿಮೀಗೆ 66 ಕೋಟಿ ರೂ. ಮಂಜೂರಾಗಿತ್ತು. ಆದರೆ ಸಂಸದ ಬಿ.ವೈ. ರಾಘವೇಂದ್ರ ಅವರ ಪ್ರಯತ್ನದಿಂದ ಹೆಚ್ಚು ಹಣ ಬಿಡುಗಡೆಯಾಗಿದೆ. ಜೊತೆಗೆ ಹಳೇ ಖಾಸಗಿ ಬಸ್ ನಿಲ್ದಾಣವನ್ನು ಪಿಕಪ್ ಸ್ಟಾÂಂಡ್ ಮಾಡುವಂತೆ ತಿಳಿಸಲಾಗಿತ್ತು. ಇದರ ಬಗ್ಗೆ ಸಹ ಗಮನ ಹರಿಸಲಾಗುತ್ತದೆ ಎಂದರು.
ಗೋಷ್ಠಿಯಲ್ಲಿ ಎಪಿಎಂಸಿ ಅಧ್ಯಕ್ಷ ಚೇತನರಾಜ್ ಕಣ್ಣೂರು, ಪ್ರಮುಖರಾದ ಗಣೇಶಪ್ರಸಾದ್, ಕೊಟ್ರಪ್ಪ ನೇದರವಳ್ಳಿ, ದೇವೇಂದ್ರಪ್ಪ ಯಲಕುಂದ್ಲಿ, ಅರುಣ ಕುಗ್ವೆ, ಬಿ.ಟಿ. ರವೀಂದ್ರ, ಅರುಣ ಸೂರನಗದ್ದೆ, ವಿನಾಯಕರಾವ್ ಮನೆಘಟ್ಟ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.