ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ಆಗ್ರಹಿಸಿ ಮನವಿ
ಪುತ್ಥಳಿ ತಂದು ಒಂದೂವರೆ ವರ್ಷವಾದರೂ ಸ್ಥಾಪನೆ ಮಾಡದ್ದಕ್ಕೆ ವೀರಶೈವ ಮಹಾಸಭಾ ಆಕ್ರೋಶ
Team Udayavani, Mar 13, 2020, 5:28 PM IST
ಶಿವಮೊಗ್ಗ: ಈ ಹಿಂದೆ ತೀರ್ಮಾನಿಸಿದಂತೆ ಶಿವಮೊಗ್ಗ ನಗರದಲ್ಲಿ ಶ್ರೀ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆ ಮಾಡುವಂತೆ ಆಗ್ರಹಿಸಿ ಗುರುವಾರ ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ ವತಿಯಿಂದ ಪಾಲಿಕೆ ಮೇಯರ್ ಸುವರ್ಣ ಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಅನಿವಾಸಿ ಭಾರತೀಯರಾದ ಡಾ| ನೀರಜ್ ಪಟೇಲ್ ಅವರು ಲಂಡನ್‌ನ ಥೇಮ್ಸ್ ನದಿ ದಂಡೆ ಮೇಲೆ ಪ್ರತಿಷ್ಠಾಪಿಸಿದ ಬಸವೇಶ್ವರರ ಪುತ್ಥಳಿ ಮಾದರಿಯಲ್ಲಿರುವ ಸುಮಾರು 30 ಲಕ್ಷ ರೂ. ಮೌಲ್ಯದ ಕಂಚಿನ ಬಸವೇಶ್ವರರ ಪುತ್ಥಳಿಯನ್ನು ಶಿವಮೊಗ್ಗ ನಗರದಲ್ಲಿ ಪ್ರತಿಷ್ಠಾಪಿಸಲು ಮಹಾನಗರ ಪಾಲಿಕೆಗೆ ಕೊಡುಗೆಯಾಗಿ ನೀಡಿದ್ದಾರೆ. ಈ ಪುತ್ಥಳಿಯನ್ನು ನಗರಕ್ಕೆ ತಂದು ಒಂದೂವರೆ ವರ್ಷಗಳೇ ಕಳೆದಿವೆ. ಆದರೆ ಇದುವರೆಗೂ ಪುತ್ಥಳಿ ಸ್ಥಾಪನೆ ಮಾಡಲು ಸಾಧ್ಯವಾಗಿಲ್ಲ ಎಂದು ದೂರಿದರು. ಶಿವಮೊಗ್ಗ ನಗರದ ಡಿವಿಎಸ್ ಕಾಲೇಜಿನ ಎದುರು ಬಸವೇಶ್ವರ ವೃತ್ತದ ಗಾಂಧಿ ಪಾರ್ಕಿನ ಪ್ರವೇಶ ದ್ವಾರದ ಬಳಿ ಜಗಜ್ಯೋತಿ ಶ್ರೀ ಬಸವೇಶ್ವರದ ಕಂಚಿನ ಪುತ್ಥಳಿ ಸ್ಥಾಪನೆ ಮಾಡಲು ಮಹಾನಗರ ಪಾಲಿಕೆ ನಿರ್ಣಯ ಕೈಗೊಂಡು ಅದಕ್ಕಾಗಿ 25 ಲಕ್ಷ ರೂ. ಅನುದಾನ ಇಟ್ಟಿದ್ದರೂ, ಕಾಮಗಾರಿ ಪ್ರಾರಂಭವಾಗಿಲ್ಲ ಎಂದು ಆರೋಪಿಸಿದರು.
ಈ ಬಗ್ಗೆ 2019ರ ನ. 4 ರಂದು ಮಹಾಸಭಾದಿಂದ ಪ್ರತಿಭಟನೆ ನಡೆಸಿ ಪಾಲಿಕೆ ಮೇಯರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಆಗ ಮೇಯರ್ ಅದರು 3 ತಿಂಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಆದರೆ ಈ ನಿಟ್ಟಿನಲ್ಲಿ ಯಾವುದೇ ಕೆಲಸ ಪ್ರಗತಿ ಆಗಿಲ್ಲ ಎಂದು ದೂರಿದರು. ಇದು ಪುತ್ಥಳಿಯನ್ನು ಕೊಡುಗೆಯಾಗಿ ಪಡೆದ ಮಹಾನಗರ ಪಾಲಿಕೆಗೂ ಹಾಗೂ ಪುತ್ಥಳಿ ಕೊಡುಗೆ ನೀಡಿದ ನೀರಜ್ ಪಟೇಲ್ ಅವರಿಗೂ ಅವಮಾನಕರ ವಿಷಯವಾಗಿದೆ ಎಂದರು. ಮಹಾನಗರ ಪಾಲಿಗೆ ಇದನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಬಸವೇಶ್ವರರ ಪುತ್ತಳಿ ಪ್ರತಿಷ್ಠಾಪನೆ ಕೆಲಸ ಆರಂಭಿಸಬೇಕು. ಇಲ್ಲದಿದ್ದಲ್ಲಿ ಮಹಾನಗರ ಪಾಲಿಕೆ ಎದುರು ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಹಾಸಭಾ ಜಿಲ್ಲಾ ಘಟಕ ಅಧ್ಯಕ್ಷ ರುದ್ರಮುನಿ ಎಸ್. ಸಜ್ಜನ್, ಪಾಲಿಕೆ ಪ್ರತಿಪಕ್ಷ ನಾಯಕ ಎಚ್.ಸಿ. ಯೋಗೇಶ್, ಪ್ರಮುಖರಾದ ಎನ್.ಜೆ. ರಾಜಶೇಖರ, ಜಿ. ವಿಜಯ ಕುಮಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.